October 5, 2024

????????????????????????????????????

ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ಧೋರಣೆ ಖಂಡಿಸಿ ಚಿಕ್ಕಮಗಳೂರು ನಗರದ ಕೇಂದ್ರ ಅಂಚೆ ಕಚೇರಿ ಎದುರು ಕನ್ನಡಸೇನೆ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾ ರದ ನಡೆಯ ವಿರುದ್ಧ ತೀವ್ರ ಖಂಡನೆ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಕನ್ನಡಸೇನೆ ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ರಾಜ್ಯದಲ್ಲಿ ಕನ್ನಡ ಭಾಷೆಗೆ ಹೆಚ್ಚು ಒತ್ತು ಕೊಡುವ ಬದಲು ಬಲವಂತದಿಂದ ಹಿಂದಿ ಏರಿಕೆಗೊಳಿಸಿದರೆ ಭಾಷೆ ಕಡೆಗಣನೆಯಾಗುತ್ತದೆ. ಕೇಂದ್ರ ಈ ನಡೆ ತೀವ್ರ ಖಂಡನೀಯ. ಕೂಡಲೇ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುವ ನಡೆ ಸರಿಯಲ್ಲ. ಭಾರತ ಎಂದರೆ ಅನೇಕ ಭಾ?ಗಳು, ಸಾಂಸ್ಕೃತಿಕ ಹಿನ್ನೆಲೆ, ಆಚಾರ ವಿಚಾರ ಒಳಗೊಂಡಿದೆ. ಹಿಂದಿ ಭಾಷಿಕರ ದೇಶವಲ್ಲ. ಉತ್ತರ ಭಾರತದ ಕೆಲವೇ ರಾಜ್ಯಗಳಲ್ಲಿ ಮಾತನಾಡುವ ಹಿಂದಿ ಭಾಷೆಯನ್ನು ಬಲವಂತವಾಗಿ ಹೇರಿಕೆ ಮಾಡುವ ಮೂಲಕ ದಬ್ಬಾಳಿಕೆ ಮಾಡುವುದನ್ನು ಸಹಿಸುವುದಿಲ್ಲ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ನಮ್ಮ ಮೇಲೆ ಪ್ರತಿ ಹಂತದಲ್ಲಿಯೂ ಹಿಂದಿ ಹೇರುವ ಮೂಲಕ ಒತ್ತಡ ಹೇರುತ್ತಿದೆ. ಹಿಂದಿ ಬಾರದವರಿಗೆ ಕೇಂದ್ರ ಸರ್ಕಾರದ ನೌಕರಿಗಳಲ್ಲಿ ಕಡೆಗಣಿಸಲಾಗುತ್ತಿದೆ, ಕೇಂದ್ರ ಸರ್ಕಾರದ ಉದ್ಯಮ ಗಳಲ್ಲಿ ಆಯಾ ಸ್ಥಳೀಯ ಪ್ರಾದೇಶಿಕ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಒತ್ತಾಯಿಸಿದರು.

ದೇಶದ ಹಲವು ಉದ್ಯೋಗಗಳ ಪರಿಕ್ಷೆಯಲ್ಲಿ ಹಿಂದಿಯನ್ನು ಬಲವಂತವಾಗಿ ಹೇರಿದ್ದಾರೆ. ಈಗ ಹಿಂ ದಿ ದಿವಸ್ ಮೂಲಕ ನಮ್ಮ ಮೇಲೆ ಹೇರಿಕೆ ನಡೆಸುತ್ತಿದ್ದಾರೆ. ಬಲವಂತವಾಗಿ ಹೇರಿಕೆ ಮಾಡುವ ಮೂಲಕ ದಬ್ಬಾಳಿಕೆ ಮಾಡಲಾಗಿದೆ. ಹೀಗಾಗಿ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಹಿಂದಿ ದಿನಾಚರಣೆ ವಿರುದ್ಧ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ದೇಶದಾದ್ಯಂತ ಹಿಂದಿ ದಿವಸ್, ಹಿಂದಿ ಸಪ್ತಾಹ ಆಚರಿಸಲು ಹೊರಟಿದೆ. ಹಿಂದಿ ರಾಷ್ಟ್ರ ಭಾ? ಅಲ್ಲ ಎನ್ನುವ ಅರಿವೇ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರ ಆಯಾ ರಾಜ್ಯಗಳ ಭಾಷೆಗನುಸಾರ ಬೆಳವಣಿಗೆ ಹೊಂದಲು ಸಹಕರಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಸೇನೆಯ ಸಂಘಟನಾ ಕಾರ್ಯದರ್ಶಿ ಸತೀಶ್, ಕಾರ್ಮಿಕ ಪಡೆ ಅಧ್ಯಕ್ಷ ನಿಲೇಶ್, ನಗರ ಉಪಾಧ್ಯಕ್ಷರಾದ ಹೇಮಂತ್, ಅನ್ವರ್, ಮುಖಂಡರುಗಳಾದ ಸುಜಿತ್, ಜಮೀರ್, ಟೋನಿ, ಗಸ್ತು, ಪಾಲಾಕ್ಷಿ, ದೇವರಾಜ್, ಹರೀಶ್, ಅತ್ತಿಕ್, ಜೋಗಿಕುಮಾರ್, ರಂಗನಾಥ್, ಅಶೋಕ್ ಹಾಜರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ