October 5, 2024

ಬ್ಯಾರಿ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ ಹಾಗೂ ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟ ಇವರ ಸಹಯೋಗದಲ್ಲಿ ಇದೇ ಬರುವ ಅಕ್ಟೋಬರ್ 3 ರಂದು ನಡೆಯುವ ಬ್ಯಾರಿ ಭಾಷಾ ದಿನಾಚರಣೆಗೆ ಜಿಲ್ಲೆ ಹಾಗೂ ರಾಜ್ಯಾದ್ಯಂತ ವಿವಿಧ ಗಣ್ಯರನ್ನು ಆಹ್ವಾನಿಸಲಾಯಿತು.

ಕಾರ್ಯಕ್ರಮವು ಚಿಕ್ಕಮಗಳೂರು ನಗರದ ಕುವೆಂಪು ಕಲಾಮಂದಿರದಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾಮಟ್ಟದ ದಫ್ ಸ್ಪರ್ಧೆ ಹಾಗೂ ಬ್ಯಾರಿ ಕವಿಗೋಷ್ಠಿ, ಸೇರಿದಂತೆ ಬ್ಯಾರಿ ಹಾಡುಗಳು ಹಾಗೂ ಬ್ಯಾರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯಲಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

ಬ್ಯಾರಿ ಭಾಷೆಗೆ ಸಾಕಷ್ಟು ವರ್ಷಗಳ ಇತಿಹಾಸವಿದೆ ಈ ನಾಡಿನ ಆಚಾರ ವಿಚಾರ ನುಡಿ ಸಂಸ್ಕೃತಿ ಇವೆಲ್ಲವನ್ನೂ ಕಾಪಾಡುವಲ್ಲಿ ಬ್ಯಾರಿ ಸಮುದಾಯ ತನ್ನದೇ ಆದ ಕೊಡುಗೆ ನೀಡಿದ್ದು ಅದನ್ನು ಜೀವಂತವಾಗಿರಿಸಲು ಇಂತಹ ಕಾರ್ಯಕ್ರಮ ಪ್ರೇರಣೆಯಾಗಿದೆ ಅದನ್ನು ಇಂದಿನ ಪೀಳಿಗೆ ಎಂದಿಗೂ ಮರೆಯಬಾರದು ಹಾಗೂ ಮುಂದಿನ ಪೀಳಿಗೆಗೆ ನಾವು ಅದರ ಮಹತ್ವವನ್ನು ಉಳಿಸಿಕೊಂಡು ಹೋಗುವ ನಿಟ್ಟಿನಲ್ಲಿ ಇಂತಹ ಅದ್ದೂರಿ ಹಾಗೂ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಜಿಲ್ಲೆಯು ಸಾಕ್ಷಿಯಾಗಲಿದೆ.

ಕಾರ್ಯಕ್ರಮದ ಉದ್ಘಾಟಕರಾಗಿ ಹಾಗೂ ಬ್ಯಾರಿ ಸಮುದಾಯದ ಹಿರಿಯ ಮುಖಂಡ ವಿಧಾನಸಭಾ ಸಭಾಧ್ಯಕ್ಷ ಯುಟಿ ಖಾದರ್ ಅವರು ಆಗಮಿಸಲಿದ್ದು,  ಶಾಸಕ ಹೆಚ್.ಡಿ ತಮ್ಮಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು ಹಾಗೂ ಇನ್ನೂ ಅನೇಕ ಸಾಹಿತಿಗಳು ಹಾಗೂ ಕವಿಗಳು ಭಾಗವಹಿಸಿ ಕಾರ್ಯಕ್ರಮಕ್ಕೆ ಹೆಚ್ಚು ರೂಪುರೇಷೆಯನ್ನು ಕೊಡಲಿದ್ದಾರೆ ಎಂದು ಕಾರ್ಯಕ್ರಮದ ಅಧ್ಯಕ್ಷರು ಹಾಗೂ ಮಾಜಿ ಕರ್ನಾಟಕ ಸಾಹಿತ್ಯ ಬ್ಯಾರಿ ಅಕಾಡೆಮಿ ಅಧ್ಯಕ್ಷರಾದ ಮಹಮ್ಮದ್ ತಿಳಿಸಿರುತ್ತಾರೆ.

ಕಾರ್ಯಕ್ರಮವು ಅದ್ದೂರಿ ಹಾಗೂ ಅರ್ಥಪೂರ್ಣವಾಗಲು ಜಿಲ್ಲೆಯ ಎಲ್ಲಾ ಬ್ಯಾರಿ ಸಮುದಾಯದ ಪ್ರತಿಯೊಬ್ಬರು ಈ ಕಾರ್ಯಕ್ರಮಕ್ಕೆ ಬಂದು ಕಾರ್ಯಕ್ರಮದ ಸೊಬಗನ್ನು ಹೆಚ್ಚಿಸುವ ಪ್ರಯತ್ನ ಮಾಡಬೇಕು ಈ ನಿಟ್ಟಿನಲ್ಲಿ ಬ್ಯಾರಿ ಸಮುದಾಯಕ್ಕೆ ಸಂಬಂಧಿಸಿದ ಹತ್ತು ಹಲವಾರು ಕಾರ್ಯಕ್ರಮವು ನಡೆಯಲಿದೆ ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ವಿವಿಧ ಗಣ್ಯರನ್ನು ಸಂಪರ್ಕಿಸಿ ಅವರಿಗೆ ಆಹ್ವಾನಿಸಿಲಾಗಿದ್ದು ಈ ಸಂದರ್ಭದಲ್ಲಿ ಆಯೋಜಕರಾದ ಟಿ.ಎಂ ನಾಸೀರ್, ಬಿ.ಹೆಚ್. ಮಹಮ್ಮದ್, ಇಬ್ರಾಹಿಂ ಆಲ್ದೂರ್, ಶಾಲಿಮಾರ್ ಇಬ್ರಾಹಿಂ ಹಾಗೂ ಇತರರಿದ್ದರು.

*ವರದಿ:-ಮನ್ಸೂರ್ ಹೆಚ್.ಅರ್ ಮೂಡಿಗೆರೆ*

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ