October 5, 2024

ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಪರಿವಾರದ ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವ ಉದ್ದೇಶದಿಂದ ಸಂಸದರ ಕಚೇರಿ ಆರಂಭಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಚಿಕ್ಕಮಗಳೂರು ನಗರಸಭೆ ಆವರಣದಲ್ಲಿ ನೂತನ ಲೋಕಸಭಾ ಸದಸ್ಯರ ಕಚೇರಿ ಉದ್ಘಾಟಿಸಿ ಜನಸಾಮಾನ್ಯರು ಬಡ ಜನರ ಸಮಸ್ಯೆಗಳನ್ನು ಪರಿಹರಿಸಲು ಸಹಾಯಕವಾಗಿದ್ದು ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ತಾವು ವಾರದಲ್ಲಿ ಎರಡು ದಿನ ಈ ಕಚೇರಿಯಲ್ಲಿದ್ದು ಜನರ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು. ಜನರು ತಮ್ಮ ಸಮಸ್ಯೆಗಳ ಬಗ್ಗೆ ಸಂಸದರ ಕಛೇರಿಯನ್ನು ಮುಕ್ತವಾಗಿ ಸಂಪರ್ಕಿಸಬಹುದು ಎಂದರ.

ಕಳೆದ ಅವಧಿಯಲ್ಲಿ ಸಂಸದರಾಗಿದ್ದ ಶೋಭಾ ಕರಂದ್ಲಾಜೆ 150 ಕೋಟಿ ರೂ ವೆಚ್ಚದಲ್ಲಿ ಉಡುಪಿಯಲ್ಲಿ 100 ಬೆಡ್‌ಗಳ ಕಾರ್ಮಿಕ ಇಲಾಖೆಯ ಆಸ್ಪತ್ರೆ ಮಂಜೂರು ಮಾಡಿಸಿದ್ದು ಪ್ರಚಾರದ ಕೊರತೆಯಿಂದ ಇದು ಬೆಳಕಿಗೆ ಬಂದಿಲ್ಲ ಎಂದು ವಿಷಾದಿಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ , ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಮಾತನಾಡಿದರು. ನಗರಸಭಾಧ್ಯಕ್ಷೆ ಸುಜಾತ ಶಿವಕುಮಾರ್, ಉಪಾಧ್ಯಕ್ಷೆ ಅನುಮಧುಕರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಆರ್ ದೇವರಾಜ ಶೆಟ್ಟಿ ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ