October 6, 2024

ನಕ್ಸಲ್ ಬಾಧಿತ ಪ್ರದೇಶಗಳಿಗೆ ಮೂಲ ಸೌಕರ್ಯ ಒದಗಿಸಿ ಅವರ ಬೇಡಿಕೆಗಳನ್ನು ಪೂರೈಸಲು ಅಗತ್ಯ ಕ್ರಮವಹಿಸಿ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ  ನಡೆದ ನಕ್ಸಲ್ ಚಟುವಟಿಕೆಗಳನ್ನು ತೊರೆದು ಮುಖ್ಯವಾಹಿನಿಗೆ ಮರಳಿರುವ ಕುಟುಂಬಗಳ ಅಭಿವೃದ್ಧಿ ಸ್ಥಿತಿಗತಿಗಳು ಅವರಿಗೆ ನೀಡಬೇಕಾದ ಸರ್ಕಾರಿ ಸೌಲಭ್ಯ ಹಾಗೂ ಅವರ ಬೇಡಿಕೆಗಳು ಮತ್ತು ಮೂಲಭೂತ ಸೌಕರ್ಯ ಒದಗಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.

ಜಿಲ್ಲೆಯ ಶೃಂಗೇರಿ, ಕೊಪ್ಪ, ಕಳಸ, ಎನ್.ಆರ್. ಪುರ ಹಾಗೂ ಮೂಡಿಗೆರೆ ತಾಲ್ಲೂಕುಗಳು ನಕ್ಸಲ್ ಪೀಡಿತ ಗ್ರಾಮಗಳನ್ನು / ಪ್ರದೇಶಗಳನ್ನು ಹೊಂದಿರುವ ತಾಲ್ಲೂಕುಗಳಾಗಿವೆ ಎಂದರು. ಈ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ವಿದ್ಯುತ್, ಕುಡಿಯುವ ನೀರು, ರಸ್ತೆ, ವಸತಿ ಸೇರಿದಂತೆ ಅವರ ಬೇಡಿಕೆಯ ಮೂಲಭೂತ ಸೌಕರ್ಯಗಳನ್ನು ಶೀಘ್ರವಾಗಿ ಕಲ್ಪಿಸಿಕೊಡಬೇಕು ಎಂದರು.

ನಕ್ಸಲ್ ಬಾಧಿತ ಪ್ರದೇಶಗಳಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ರಸ್ತೆಗಳು ಗಿಡಗಂಟಿಗಳಿಂದ ಮುಚ್ಚಿದ್ದಲ್ಲಿ ಅವುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ತಿಳಿಸಿದರು. ಆ ಪ್ರದೇಶದಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯ ಸಿಬ್ಬಂದಿ ಕೊರತೆಯಾಗದಂತೆ ಕ್ರಮ ವಹಿಸಿ, ಆರೋಗ್ಯ ತಪಾಸಣೆ ಮಾಡಿ ಉಚಿತ ಔಷಧಿಗಳನ್ನು ನೀಡಬೇಕು. ಕುಡಿಯುವ ನೀರಿನ ಮೂಲಗಳನ್ನು ಗುರುತಿಸಿ ಪ್ರತಿ ಮನೆಗೂ ನೀರಿನ ಸಂಪರ್ಕ ಕಲ್ಪಿಸಿಕೊಡಲು ಕ್ರಮ ವಹಿಸಬೇಕು ಎಂದರು.

ಮಕ್ಕಳನ್ನು ಶಾಲೆಗೆ ಕರೆತಂದು ಗುಣಮಟ್ಟದ ಶಿಕ್ಷಣ ಒದಗಿಸಿ ಮಕ್ಕಳು ಹಾಗೂ ಗರ್ಭಿಣಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರವನ್ನು ನೀಡಬೇಕು. ವಿದ್ಯುತ್ ಕಂಬಗಳು ಬಿದ್ದು ಹೋದಲ್ಲಿ ಕೂಡಲೇ ಕಂಬಗಳನ್ನು ಪುನರ್ ಸ್ಥಾಪಿಸಿ ಪ್ರತಿ ಮನೆಗೂ ವಿದ್ಯುತ್ ಸಂಪರ್ಕ ಕಲ್ಪಿಸಬೇಕು, ಟ್ರಾನ್ಸ್ ಫಾರ್ಮ್ ಕೊರತೆ ಇದ್ದಲ್ಲಿ ತುರ್ತಾಗಿ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ಹೇಳಿದರು.

ಬಿಎಸ್‌ಎನ್‌ಎಲ್ ನೆಟ್ ವರ್ಕ್ ಪೂರೈಸಲು ಕ್ರಮವಹಿಸಬೇಕು. ಸಂಬಂಧ ಪಟ್ಟ ಅಧಿಕಾರಿಗಳು ನಕ್ಸಲ್ ಬಾಧಿತ ಪ್ರದೇಶಗಳಿಗೆ ಖುದ್ದಾಗಿ ತೆರಳಿ ಸ್ಥಳ ಪರಿಶೀಲನೆ ನಡೆಸಿ ಅಲ್ಲಿನ ಸಾರ್ವಜನಿಕರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿ ಆತ್ಮವಿಶ್ವಾಸ ತುಂಬುವುದರ ಜೊತೆಗೆ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್. ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದರ್ ಕುಮಾರ್ ದಹಿಮ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ದಲ್ಜಿತ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ