October 5, 2024

ನೇತ್ರಾವತಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಗಳೂರಿನ ಸಮೀಪದಲ್ಲಿ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ  ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಕ್ಕಮಗಳೂರು ನಗರದ ಕರ್ತಿಕೆರೆ ಸಮೀಪದ ಬೈರಾಪುರ ಗ್ರಾಮದ ಪ್ರಸನ್ನ ಗೌಡ ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಬೈರಾಪುರ ಗ್ರಾಮದ ಶಂಕರೇಗೌಡ ಎಂಬುವವರ ಪುತ್ರ ಪ್ರಸನ್ನ ಗೌಡ (35 ವರ್ಷ) ನದಿಗೆ ಹಾರಿರುವ ವ್ಯಕ್ತಿ.

ಪ್ರಸನ್ನ ತರಕಾರಿ, ಸೊಪ್ಪು ವ್ಯಾಪಾರ ಮಾಡಿಕೊಂಡಿದ್ದರು. ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಭಾಗಕ್ಕೆ ಕೊತ್ತಂಬರಿ ಸೊಪ್ಪು ಸರಬರಾಜು ಮಾಡುತ್ತಿದ್ದರು. ಇವತ್ತು ಬೆಳಿಗ್ಗೆ ವ್ಯಾಪಾರದ ಹಣ ಬರಲು ಇದೆ, ವಸೂಲಿ ಮಾಡಿಕೊಂಡು ಬರುವುದಾಗಿ ಮನೆಯಲ್ಲಿ ಹೇಳಿ ಮಂಗಳೂರಿಗೆ ತೆರಳಿದ್ದರು ಎನ್ನಲಾಗಿದೆ.

ಇಂದು ಮಧ್ಯಾಹ್ನ ಸುಮಾರು 1 ಗಂಟೆಯ ಸಮಯದಲ್ಲಿ ನೇತ್ರಾವತಿ ನದಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ. ಇದನ್ನು ಗಮನಿಸಿದ ಸಾರ್ವಜನಿಕರು ಕಾರಿನ ಪೋಟೋ ತೆಗೆದು ಮಾಹಿತಿ ಹಂಚಿಕೊಂಡಿದ್ದು, ನದಿಗೆ ಹಾರಿದ ವ್ಯಕ್ತಿಯನ್ನು ಗುರುತಿಸಲು ಸಾಧ್ಯವಾಗಿದೆ.

ಪ್ರಸನ್ನಗೌಡ ಇತ್ತೀಚೆಗೆ ಹೊಸ ಮನೆಯನ್ನು ಕಟ್ಟಿಸಿದ್ದರು ಎನ್ನಲಾಗಿದೆ. ಪ್ರಸನ್ನ  ವಿವಾಹಿತರಾಗಿದ್ದು, ಇಬ್ಬರು ಚಿಕ್ಕ ಹೆಣ್ಣುಮಕ್ಕಳು ಇದ್ದಾರೆ, ಅವರ ಪತ್ನಿ ಮೂಡಿಗೆರೆ ತಾಲೂಕಿನ ಜೇನುಬೈಲು ಗ್ರಾಮದವರು ಎಂದು ತಿಳಿದುಬಂದಿದೆ.

ಪ್ರಸನ್ನ ಅವರು ನದಿಗೆ ಹಾರಿರುವುದಕ್ಕೆ ಕಾರಣ ತಿಳಿದುಬಂದಿಲ್ಲ, ಅವರ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗಿದೆ.

2019 ರಲ್ಲಿ ಕಾಫಿ ಡೇ ಮಾಲೀಕ ವಿ.ಜಿ.ಸಿದ್ದಾರ್ಥ ಹೆಗ್ಡೆ ನದಿಗೆ ಹಾರಿದ್ದ ಸ್ಥಳದಲ್ಲಿಯೇ ಇವರು ನದಿಗೆ ಹಾರಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ