October 5, 2024

ಶಾಲಾ ಕಾಮಗಾರಿಯ ಆಡಳಿತಾತ್ಮಕ ಮಂಜೂರಾತಿ ಕಡತಕ್ಕೆ ಸಹಿ ಹಾಕಲು ಲಂಚ ಪಡೆಯುತ್ತಿದ್ದ ಸಾರ್ವಜನಿಕ ಶಿಕ್ಷಣ ಇಲಾಖೆಯ  ಉಪ ನಿರ್ದೇಶಕ ಹಾಗೂ ದ್ವಿತೀಯ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮೂಡಿಗೆರೆ ತಾಲೂಕಿನ ಹೆಸ್ಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಪು ನಗರ ವಾಸಿ ಸಲಾವುದ್ದೀನ್ ನೀಡಿದ ದೂರನ್ನು ಆದರಿಸಿ, ದಾಳಿ ನಡೆಸಿದ ಪೊಲೀಸರು ಉಪನಿರ್ದೇಶಕ ರಂಗನಾಥ ಸ್ವಾಮಿ ಮತ್ತು ದ್ವಿತೀಯ ದರ್ಜೆ ಸಹಾಯಕ ಅಸ್ರಾರ್ ಅಹಮದ್ ರನ್ನು ಬಂಧಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೊಲ್ಲಿಬೈಲು ಮತ್ತು ಕಡೆಮಡ್ಕಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 4.80 ಲಕ್ಷ ರೂ ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಮಾಡಿದ್ದು ಅದಕ್ಕೆ ಆಡಳಿತಾತ್ಮಕ ಅನುಮೋದನೆ ಅಗತ್ಯವಿತ್ತು.

ಅನುಮೋದನೆ ನೀಡುವಂತೆ ಡಿಡಿಪಿಐ ರವರನ್ನು ಭೇಟಿಯಾದಾಗ ಅವರು ದ್ವಿತೀಯ ಸಹಾಯಕ ಅಸ್ರಾರ್ ಅಹಮದ್ ಭೇಟಿಯಾಗಲು ತಿಳಿಸಿದ್ದರು ಎನ್ನಲಾಗಿದೆ.
2% ರಂತೆ 10000 ರೂ ಗಳಿಗೆ  ಬೇಡಿಕೆ ಇಟ್ಟಿದ್ದು, ಅಂತಿಮವಾಗಿ 4000ಗಳಿಗೆ ಒಪ್ಪಿಗೆಯಾಗಿ 1000 ಮುಂಗಡ ನೀಡಿ ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿತ್ತು. ಉಳಿಕೆ 3000 ರೂ ನೀಡುವ ಕುರಿತು ಡಿಡಿಪಿಐ ರವರೊಂದಿಗೆ ನಡೆಸಿದ ಸಂಭಾಷಣೆಯನ್ನು ಮುದ್ರಿಸಿಕೊಂಡು ಲೋಕಾಯುಕ್ತಕ್ಕೆ  ನೀಡಲಾಗಿತ್ತು.

ಇಂದು ಉಳಿಕೆ ಹಣ ನೀಡುವ ಸಂದರ್ಭದಲ್ಲಿ ಲೋಕಾಯುಕ್ತ ಡಿ ವೈ ಎಸ್ ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ನಡೆಸಿ ಡಿಡಿಪಿಐ ರಂಗನಾಥ ಸ್ವಾಮಿ ಮತ್ತು ಕೇಸ್ ವರ್ಕರ್ ಅಸ್ರಾರ್ ಅಹಮದ್ ರವರನ್ನು ವಶಕ್ಕೆ ಪಡೆಯಲಾಗಿದೆ.

ಈ ದಾಳಿಯಲ್ಲಿ ಇನ್ಸ್ ಪೆಕ್ಟರ್ ಗಳಾದ ಮಲ್ಲಿಕಾರ್ಜುನ್, ಅನಿಲ್ ರಾಥೋಡ್, ಸಿಬ್ಬಂದಿ ವೇದಾವತಿ, ವಿಜಯ ಭಾಸ್ಕರ್, ಸಲ್ಮಾ ಬೇಗಮ್, ಅನಿಲ್ ನಾಯಕ್, ಪ್ರಸಾದ್ ,ರವಿ, ಮುಜಬ್ ಪಾಲ್ಗೊಂಡಿದ್ದರು

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ