October 5, 2024

ಕನ್ನಡ ಭಾಷೆ, ನೆಲ, ಜಲ, ಸಂಸ್ಕೃತಿ ಉಳಿವಿಗೆ ಕನ್ನಡಿಗರಾದ ನಾವು ಶ್ರಮಿಸಬೇಕು. ಮಕ್ಕಳಲ್ಲಿ ಕನ್ನಡದ ಕಂಪನ್ನು ತಿಳಿಸುವುದು ಕೂಡ ಶಿಕ್ಷಣ ಸಂಸ್ಥೆಯ ಕರ್ತವ್ಯವಾಗಿದೆ ಎಂದು ಎಇಎಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಎಸ್. ಹರೀಶ್ ಹೇಳಿದರು.

ಅವರು ಶನಿವಾರ ಮೂಡಿಗೆರೆ ಪಟ್ಟಣದ ಎಂಇಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆ ಏಕೀಕರಣಕ್ಕಾಗಿ ಶ್ರಮಿಸಿದ ಸಾಹಿತಿಗಳು ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಮಹಾರಾಜರು, ಸೈನಿಕರ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಹಾಗಾಗಿ ಸಣ್ಣ ಮಕ್ಕಳಿಗೆ ಮಹಾ ಪುರಷರ ವೇಷ ಧರಿಸಿಕೊಂಡು ಬರಲು ಸೂಚಿಸಲಾಗಿತ್ತು. ಅದರಂತೆ ಮಕ್ಕಳು ಉತ್ಸಾಹಕರಾಗಿ ವೇ಼ಷ ಧರಿಸಿಕೊಂಡು ಬಂದಿದ್ದಾರೆ. ಅಲ್ಲದೇ ಇಂದಿನ ತಾಂತ್ರಿಕ ಯುಗದಲ್ಲಿ ಆಂಗ್ಲ ಭಾಷೆ ಅಗತ್ಯವಿದ್ದರೂ ಕನ್ನಡ ಭಾಷೆಗೆ ಮೊದಲ ಆಧ್ಯತೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್ ಕಣಚೂರು ಮಾತನಾಡಿ, ಇಲ್ಲಿರುವ ಎಲ್ಲಾ ವಿದ್ಯಾರ್ಥಿಗಳು ಈ ದೇಶದ ಭವಿಷ್ಯದ ಪ್ರಜೆಗಳು. ಹಾಗಾಗಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆ ಮತ್ತು ದೇಶದ ಮೇಲೆ ಅಭಿಮಾನ ಮೂಡಿಸಿಕೊಳ್ಳುವ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕಿದೆ ಎಂದು ಹೇಳಿದರು.

ಪ್ರಾಂಶುಪಾಲೆ ಚಿಂತು ಸೇರಿದಂತೆ ಶಿಕ್ಷಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಕನ್ನಡ ಗೀತೆಗಳಿಗೆ ವೈವಿದ್ಯಮಯ ನೃತ್ಯ ಪ್ರದರ್ಶನ ನೀಡಿದರು. ಕನ್ನಡದ ವಿವಿಧ ಸಾಧಕರ ವೇಷಗಳನ್ನು ಹಾಕಿ ಸಂಭ್ರಮಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ