October 5, 2024

ಮಾಜಿ ಸಚಿವ ಡಿ.ಬಿ.ಚಂದ್ರೇಗೌಡರ ಪರ‍್ಥೀವ ಶರೀರಕ್ಕೆ ನಾಡಿನ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದ್ದಾರೆ. ಮಂಗಳವಾರ ಮುಂಜಾನೆ 12.30 ಗಂಟೆಗೆ ದಾರದಹಳ್ಳಿಯ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಡಿ.ಬಿ.ಸಿ.ಯವರು ನಿಧನ ಹೊಂದಿದ್ದರು.

ವಿಷಯ ತಿಳಿಯುತ್ತಿದ್ದಂತೆ ನಿನ್ನೆ ಬೆಳಗ್ಗೆಯಿಂದಲೇ ಡಿಬಿಸಿಯವರ ಬಂಧು ಮಿತ್ರರು, ದಾರದಹಳ್ಳಿ ಮತ್ತು ಸುತ್ತಲ ಗ್ರಾಮಸ್ಥರು, ವಿವಿಧ ಪಕ್ಷ, ಸಂಘಟನೆಗಳ ಮುಖಂಡರು ಡಿಬಿಸಿ ಅವರ ಮನೆ ಮುಂದೆ ಜಮಾಯಿಸಿ ಅಂತಿಮ ದರ್ಶನ ಪಡೆದರು. ಈ ವೇಳೆ ಮಾಜಿ ಕೇಂದ್ರ ಸಚಿವೆ ಮತ್ತು ಡಿ.ಬಿ.ಚಂದ್ರೇಗೌಡರ ಬಂಧುವೂ ಆದ ಡಿ.ಕೆ. ತಾರಾದೇವಿ, ಮಾಜಿ ಸಚಿವೆ ಮೋಟಮ್ಮ, ಶಾಸಕಿ ನಯನಾ ಮೋಟಮ್ಮ, ಸಕಲೇಶಪುರದ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ್, ಗೃಹಮಂಡಳಿ ಮಾಜಿ ಅಧ್ಯಕ್ಷ ಜಿ.ಹೆಚ್. ಹಾಲಪ್ಪಗೌಡ ಮುಂತಾದವರು ಡಿಬಿಸಿ ಅವರ ಮನೆಯಲ್ಲಿ ಅಂತಿಮ ದರ್ಶನ ಪಡೆದು ಕುಟುಂಬಕ್ಕೆ ಸಾಂತ್ವಾನ ಹೇಳಿದರು.

ಮಧ್ಯಾಹ 2ರಿಂದ ಸಂಜೆ 6ಗಂಟೆವರೆಗೆ ಪಟ್ಟಣದ ಅಡ್ಯಂತಾಯ ರಂಗಮಂದಿರಲ್ಲಿ ಡಿಬಿಸಿ ಅವರ ಪಾರ್ಥೀವ ಶರೀರ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಅಂತಿಮ ನಮನ ಸಲ್ಲಿಸಿದರು.  ಮಾಜಿ ಸಚಿವರಾದ ಪ್ರಮೋದ್ ಮದ್ವರಾಜ್, ಕಿಮ್ಮನೆ ರತ್ನಾಕರ್, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಮಾಜಿ ಸಂಸದ ಜಯಪ್ರಕಾಶ್ ಹೆಗಡೆ, ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ, ಕಿಸಾನ್ ಕಾಂಗ್ರೇಸ್ ರಾಜ್ಯಾಧ್ಯಕ್ಷ ಸಚಿನ್ ಮಿಗಾ, ಬ್ಲಾಕ್ ಕಾಂಗ್ರೇಸ್ ಸೇರಿದಂತೆ ಎಲ್ಲಾ ಪಕ್ಷದ ನಾಯಕರು ಹಾಗೂ ಸಾರ್ವಜನಿಕರು ಡಿಬಿಸಿ ಅವರ ಅಂತಿಮ ದರ್ಶನ ಪಡೆದರು.

ಕಣ್ಣೀರು ಸುರಿಸಿದ ರಮೇಶ್ ಕುಮಾರ್

ಡಿ.ಬಿ.ಸಿ.ಯವರ ಅಂತಿಮ ದರ್ಶನಕ್ಕೆ ಬಂದಿದ್ದ ಅವರ ಬಹುಕಾಲದ ಒಡನಾಡಿ ಮತ್ತು ಮಾಜಿ ಸಭಾಪತಿ ರಮೇಶ್‌ಕುಮಾರ್ ಅವರು ಕೆಲ ಹೊತ್ತು ಡಿಬಿಸಿ ಅವರ ಪ್ರಾರ್ಥೀವ ಶರೀರವನ್ನು ವೀಕ್ಷಿಸುತ್ತಾ ಕಣ್ಣೀರಿಟ್ಟರು. ಈ ಸಂದರ್ಭದಲ್ಲಿ ನೆರೆದಿದ್ದವರ ಕಣ್ಣಾಲಿಗಳು ನೀರಾದವು.

ಡಿಬಿಸಿ ಅವರ ಪತ್ನಿ ಪೂರ್ಣಿಮಾ, ನಾಲ್ವರ ಪುತ್ರಿಯರ ಪೈಕಿ ಮೂವರು ಪುತ್ರಿಯರಾದ ಪಲ್ಲವಿ, ವೀಣಾ, ಶೃತಿ ಹಾಗೂ ಬಂದು ಮಿತ್ರರು ಅಂತ್ಯಸAಸ್ಕಾರಕ್ಕೆ ಆಗಮಿಸಿದ್ದು, ಇನ್ನೋರ್ವ ಪುತ್ರಿ ಸಂಗೀತ ಅಮೇರಿಕಾದಿಂದ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಡಿಬಿಸಿ ಅಂತ್ಯ ಸಂಸ್ಕಾರವನ್ನು ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ನೆರವೇರಿಸಲಾಗುತ್ತಿದೆ.

ಮುಖ್ಯಮಂತ್ರಿಗಳಿಂದ ಇಂದು ಅಂತಿಮ ನಮನ :

ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಡಿ.ಬಿ.ಚಂದ್ರೇಗೌಡರ ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ. ಅವರು ಇಂದು ಮಧ್ಯಾಹ್ನ 12 ರ ಹೊತ್ತಿಗೆ ರಸ್ತೆ ಮೂಲಕ ಮೂಡಿಗೆರೆಗೆ ಆಗಮಿಸಿ ನೇರವಾಗಿ ದಾರದಹಳ್ಳಿ ಡಿ.ಬಿ.ಸಿ.ಯವರ ನಿವಾಸಕ್ಕೆ ತೆರಳಿ ಅಂತಿಮ ದರ್ಶನ ಪಡೆಯಲಿದ್ದಾರೆ. ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಮತ್ತು  ಸಂಪುಟದ ಕೆಲ ಸಹೋದ್ಯೋಗಿಗಳು ಆಗಮಿಸುವ ನಿರೀಕ್ಷೆ ಇದೆ.

ನಂತರ ಮುಖ್ಯಮಂತ್ರಿಯವರು ಜಿಲ್ಲೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದು, ಸಂಜೆ ಬೆಂಗಳೂರಿಗೆ ವಾಪಾಸ್ಸಾಗಲಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ