October 5, 2024

ಕೇಂದ್ರ ಕಾಫಿ ಮಂಡಳಿ ನೂತನ ಅಧ್ಯಕ್ಷರಾಗಿ ಎಂ.ಜೆ. ದಿನೇಶ್ ದೇವರುಂದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಬೆಂಗಳೂರಿನ ಕಾಫಿ ಮಂಡಳಿ ಕಛೇರಿಯಲ್ಲಿ ಗುರುವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ದಿನೇಶ್ ಅವರು ಕಾಫಿ ಮಂಡಳಿ ನೂತನ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ನಂತರ ಕರ್ನಾಟಕ ಸರ್ಕಾರದ ಸಚಿವಾಲಯದ ಕ್ಲಬ್, ಕಬ್ಬನ್ ಉದ್ಯಾನವನ ಬೆಂಗಳೂರು ಇಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್, ಮಾಜಿ ಸಭಾಪತಿ ಬಿ.ಎಲ್. ಶಂಕರ್, ಮಾಜಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ, ನಿವೃತ್ತ ಕೃಷಿ ವಿಜ್ಞಾನಿ ಡಾ. ವೇಣುಗೋಪಾಲ್, ಕರ್ನಾಟಕ ಬೆಳೆಗಾರರ ಸಂಘದ ಅಧ್ಯಕ್ಷ ಡಾ. ಹೆಚ್. ಟಿ. ಮೋಹನ್ ಕುಮಾರ್, ಹಾಸನ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ರಮಣ್ಯ, ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ ಮುಂತಾದವರು ಉಪಸ್ಥಿತರಿದ್ದರು.


ಅಧಿಕಾರ ಸ್ವೀಕರಿಸಿ ಮಾತನಾಡಿದ ಎಂ.ಜೆ.ದಿನೇಶ್ ಅವರು ಕಾಫಿ ಮಂಡಳಿಯ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಲು ದೊರೆತಿರುವ ಅವಕಾಶವನ್ನು ಕಾಫಿ ಉದ್ದಿಮೆಯ ಬೆಳವಣಿಗೆಗೆ ಪೂರಕವಾಗಿ ಕೆಲಸ ಮಾಡಲು ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಇಂದು ಕಾಫಿ ಉದ್ದಿಮೆ ಲಕ್ಷಾಂತರ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬದುಕನ್ನು ನೀಡಿತ್ತಿದೆ. ದೇಶದ ವಿದೇಶಿ ವಿನಿಮಯಕ್ಕೂ ಹೆಚ್ಚಿನ ಪಾಲು ನೀಡುತ್ತಿದೆ. ಹಾಗಾಗಿ ಕಾಫಿ ಉದ್ದಿಮೆ ಮುಂದೆ ಸಾಗಬೇಕು ಎಂದರೆ ಬೆಳೆಗಾರರು, ಕಾರ್ಮಿಕರು ಪರಸ್ಪರರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದರೆ ಕಾಫಿ ಉದ್ದಿಮೆಯನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅತಿಥಿಗಳು ದಿನೇಶ್ ಅವರಿಗೆ ಶುಭ ಹಾರೈಸಿದರು.

ಕಾಫಿ ಬೆಳೆಯುವ ಪ್ರದೇಶ ನೂರಾರು ಬೆಳೆಗಾರರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದು ನೂನತ ಅಧ್ಯಕ್ಷ ಎಂ.ಜೆ. ದಿನೇಶ್ ಅವರಿಗೆ ಶುಭ ಹಾರೈಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ