October 5, 2024

ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಮ್ಮ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದ ಆರೋಪದ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಸ್ಕಾಂ ವಿಧಿಸಿದ್ದ ದಂಡವನ್ನು ಪಾವತಿಸಿದ್ದಾರೆ.

ಹೆಚ್.ಡಿ.‌ ಕುಮಾರಸ್ವಾಮಿ ಅವರು ಬೆಸ್ಕಾಂಗೆ 68,526 ರೂ. ದಂಡದ ಮೊತ್ತವನ್ನು ಪಾವತಿಸಿದ್ದಾರೆ ಎಂದು ತಿಳಿದು ಬಂದಿದೆ. ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ ದಂಡ ಪಾವತಿಸುವಂತೆ ಸೂಚಿಸಿದ್ದರು. ಜಯನಗರದಲ್ಲಿರುವ ಬೆಸ್ಕಾಂ ವಿಜಿಲೆನ್ಸ್ ಕಚೇರಿಯಲ್ಲಿ ಮಂಗಳವಾರ ಕರ್ನಾಟಕ ವಿದ್ಯುತ್ ಕಾಯ್ದೆಯಡಿ ಎಫ್‍ಐಆರ್ ದಾಖಲಾಗಿತ್ತು. ವೈರಲ್ ಆಗಿರುವ ವಿಡಿಯೋ ಕ್ಲಿಪ್ ಆಧರಿಸಿ ದೂರು ದಾಖಲಿಸಲಾಗಿದೆ ಎಂದು ಇಂಧನ ಇಲಾಖೆಯ ಹೇಳಿಕೆ   ತಿಳಿಸಿತ್ತು.

ದೀಪಾವಳಿ ಸಂದರ್ಭದಲ್ಲಿ ಬೆಂಗಳೂರಿನ ತಮ್ಮ ನಿವಾಸಕ್ಕೆ ಕುಮಾರಸ್ವಾಮಿಯವರು ವಿದ್ಯುತ್ ದೀಪ ಅಲಂಕಾರ ಮಾಡಿದ್ದು ದೀಪಾಲಂಕಾರಕ್ಕೆ ನೇರವಾಗಿ ವಿದ್ಯುತ್ ಲೈನಿನಿಂದ ಸಂಪರ್ಕ ಪಡೆದಿದ್ದರು. ಈ ಬಗ್ಗೆ ರಾಜ್ಯದಾದ್ಯಂತ ಅದು ಸುದ್ದಿಯಾಗಿ ಕುಮಾರಸ್ವಾಮಿಯವರಿಗೆ ಮುಜುಗರಕ್ಕೊಳಗಾಗಿದ್ದರು.

ನಂತರ ಪ್ರತಿಕ್ರಿಯೆ ನೀಡಿ ನಾನು ವಿದ್ಯುತ್ ದೀಪ ಅಲಂಕಾರಕ್ಕೆ ಗುತ್ತಿಗೆ ನೀಡಿದ್ದೆ. ಅವರು ಈ ರೀತಿ ಮಾಡಿದ್ದಾರೆ. ಇದಕ್ಕಾಗಿ ಕ್ಷಮೆ ಕೋರುತ್ತೇನೆ ಮತ್ತು ದಂಡ ಹಾಕಿದರೆ ಪಾವತಿಸುತ್ತೇನೆ ಎಂದಿದ್ದರು.

ಈ ವಿಚಾರವನ್ನು ಆಡಳಿತ ಕಾಂಗ್ರೇಸ್ ಪಕ್ಷ ರಾಜಕೀಯವಾಗಿ ಬಳಸಿಕೊಂಡು ಕುಮಾರಸ್ವಾಮಿಯವರನ್ನು ತೀವ್ರವಾಗಿ ಟೀಕೆ ಮಾಡಿತ್ತು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ