October 5, 2024

ಕಾಡಾನೆ ದಾಳಿಯಿಂದ ಮೃತಪಟ್ಟ ಆನೆ ನಿಗ್ರಹ ಕಾರ್ಯಪಡೆ ಗುತ್ತಿಗೆ ನೌಕರ ಕಾರ್ತಿಕ್ ಗೌಡ ಕುಟುಂಬಕ್ಕೆ ರೂ. 25 ಲಕ್ಷ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು.

ಬುಧವಾರ ಸಂಜೆ ಮೂಡಿಗೆರೆ ತಾಲ್ಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೆರೆ ಸಮೀಪ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸುತ್ತಿದ್ದಾಗ ಆನೆ ಕಾರ್ಯಪಡೆಯ ಗುತ್ತಿಗೆ ನೌಕರರನನ್ನು ಕಾಡಾನೆ ತುಳಿದು ಸಾಯಿಸಿತ್ತು.

ಇಂದು ಮೃತ ಕಾರ್ತಿಕ್ ಅವರ ಗೌಡಹಳ್ಳಿಯ ನಿವಾಸದಲ್ಲಿ ಅವರ ಅಂತಿಮ ದರ್ಶನ ಪಡೆದ ಚಿಕ್ಕಮಗಳೂರು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯು.ಪಿ. ಸಿಂಗ್ ಮೃತ ಕಾರ್ತಿಕ್ ತಾಯಿಯವರಿಗೆ ರೂ. 25 ಲಕ್ಷಗಳ ಚೆಕ್ ವಿತರಿಸಿದರು. 15 ಲಕ್ಷ ರೂ ಗಳನ್ನು ಸಾಮಾನ್ಯ ಪರಿಹಾರವಾಗಿ ಮತ್ತು ಅವರು ಆನೆ ಕಾರ್ಯಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದುದ್ದಕ್ಕೆ ಹೆಚ್ಚುವರಿಯಾಗಿ 10 ಲಕ್ಷ ಪರಿಹಾರದ ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಡಿ ಎಫ್ ಓ ರಮೇಶ್ ಬಾಬು, ಎ.ಸಿ.ಎಫ್. ಆರ್.ಎಫ್.ಓ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಿಸಿಎಪ್ ಯು.ಪಿ. ಸಿಂಗ್ ಅವರ ಬಳಿ ಸ್ಥಳೀಯರು ಮತ್ತು ಬೆಳೆಗಾರರ ಸಂಘದ ಪ್ರತಿನಿಧಿಗಳು ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸಬೇಕು ಎಂಬ ಬೇಡಿಕೆಯನ್ನು ಇರಿಸಿದರು. ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ, ಕೆ.ಜಿ.ಎಫ್. ಮಾಜಿ ಅಧ್ಯಕ್ಷ ಬಿ.ಎಸ್. ಜಯರಾಂ, ಬಿ.ಜೆ.ಪಿ. ಜಿಲ್ಲಾ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ, ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವರುಂದ, ಜೆ.ಡಿ.ಎಸ್. ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹೆಚ್.ಜಿ. ಸುರೇಂದ್ರ, ಮೂಡಿಗೆರೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಜಿ. ಅನುಕುಮಾರ್, ಊರುಬಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಪುಷ್ಪಾ ರಾಜು, ಹಾಗೂ ಗ್ರಾ.ಪಂ. ಸದಸ್ಯರುಗಳು, ವಿವಿಧ ಪಕ್ಷಗಳ ಮುಖಂಡರು, ಬೆಳೆಗಾರರ ಸಂಘದ ಪ್ರತಿನಿಧಿಗಳು ಕಾಡಾನೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಿಕೊಡುವಂತೆ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಸಿಎಫ್ ಊರುಬಗೆ ಭಾಗದಲ್ಲಿ ಉಪಟಳ ನೀಡುತ್ತಿರುವ ಮೂರು ಆನೆಗಳನ್ನು ಹಿಡಿಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅವುಗಳನ್ನು ಹಿಡಿದ ಬೇರೆಡೆಗೆ ಸಾಗಿಸಲು ಕ್ರಮ ವಹಿಸಲಾಗುವುದು ಎಂದಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ