October 5, 2024

ಮೂರು ಕಾಡಾನೆಗಳನ್ನು ಹಿಡಿಯಲು ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ಮೂಡಿಗೆರೆ ಅರಣ್ಯ ವಲಯದ ಊರುಬಗೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಮೂರು ಕಾಡಾನೆಗಳನ್ನು ಸೆರೆಹಿಡಿಯಲು ಅರಣ್ಯ ಇಲಾಖೆಯಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.

ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಗ್ರಾಮದಲ್ಲಿ ಬುಧವಾರ ಕಾಡಾನೆಯಿಂದ ಆನೆ ಕಾರ್ಯಪಡೆಯ ನೌಕರ ಕಾರ್ತಿಕ್ ಗೌಡ ಎಂಬುವವರನ್ನು ಸಾವನ್ನಪ್ಪಿದ ಘಟನೆ ನಡೆದಿತ್ತು. ಈ ಸಂದರ್ಭದಲ್ಲಿ ಸ್ಥಳೀಯರು ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸಬೇಕೆಂದು ಅರಣ್ಯ ಇಲಾಖೆಯ ಮೇಲೆ ಒತ್ತಡ ಹೇರಿದ್ದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಈ ಭಾಗದ ಮೂರು  ಕಾಡಾನೆಗಳನ್ನು ಹಿಡಿದು ಬೇರೆಡೆಗೆ ಸಾಗಿಸುವ ಭರವಸೆ ನೀಡಿದ್ದರು. ಈ ಸಂಬಂಧ  ಎಂದು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಕ್ಷೇತ್ರದ ಶಾಸಕಿ ಶ್ರೀಮತಿ ನಯನ ಮೋಟಮ್ಮ ಅವರು ಸಹ ಸರ್ಕಾರದ ಮೇಲೆ ಒತ್ತಡ ಹೇರಿದ್ದರು.

ಇದೀಗ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಅವರು ತಮ್ಮ ಆದೇಶದಲ್ಲಿ ; ಚಿಕ್ಕಮಗಳೂರು ಅರಣ್ಯ ಉಪವಿಭಾಗದ ಮೂಡಿಗೆರೆ ವಲಯದ ಊರುಬಗೆ, ಗೌಡಹಳ್ಳಿ, ಬೈರಾಪುರ, ಹೊಸಕೆರೆ, ಮೇಕನಗದ್ದೆ ಭಾಗದಲ್ಲಿ ಸಂಚರಿಸುತ್ತಾ ಆಸ್ತಿಪಾಸ್ತಿ ಮತ್ತು ಜನರ ಜೀವ ಹಾನಿಗೆ ಕಾರಣವಾಗಿರುವ ಮೂರು ಕಾಡಾನೆಗಳನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರೆಹಿಡಿದು ರೆಡಿಯೋ ಕಾಲರಿಂಗ್ ಆಳವಡಿಸಿ ಭದ್ರಾ ಹುಲಿ ಸಂರಕ್ಷಿತಾ ಪ್ರದೇಶಕ್ಕೆ ಸೂಕ್ತವಾದ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಆದೇಶ ನೀಡಿದ್ದಾರೆ.

ನಾಳೆಯಿಂದಲೇ ಕಾರ್ಯಾಚರಣೆ :

ಊರುಬಗೆ ಭಾಗದ ಮೂರು ಕಾಡಾನೆಗಳನ್ನು ಹಿಡಿಯಲು ನಾಳೆಯಿಂದಲೇ(ಶನಿವಾರ) ಕಾರ್ಯಾಚರಣೆ ಆರಂಭಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ದಿಣ್ಣೇಕೆರೆ ಅಥವಾ ಹಂತೂರು ಗ್ರಾಮದಲ್ಲಿ ಸಾಕಾನೆಗಳ ಶಿಬಿರ ತೆರೆದು ಕಾರ್ಯಾಚರಣೆ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ