October 5, 2024

ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದ್ದು, ಕಾಡಾನೆ ಅಲ್ಟೋ ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಒಟ್ಟು ಆರು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ನೆರಿಯಾದ ಪೋಸ್ಟ್ ಆಫೀಸ್ ಬಳಿ ನಡೆದಿದೆ. ಕಾರಿನಲ್ಲಿ ಮಕ್ಕಳು ಸೇರಿದಂತೆ ಒಟ್ಟು 6 ಜನರು ಸಂಚರಿಸುತ್ತಿದ್ದರು ಎನ್ನಲಾಗಿದೆ. ಪುತ್ತೂರು ತಾಲ್ಲೂಕಿನ ಕಬಕ ಗ್ರಾಮದ ಅಬ್ದುಲ್ ರೆಹಮಾನ್ ಅವರು ತಮ್ಮ ಕುಟುಂಬದೊಂದಿಗೆ ಈ ರಸ್ತೆಯಲ್ಲಿ ನಿನ್ನೆ ರಾತ್ರಿ ಸುಮಾರು 8-30ರ ವೇಳೆ ಸಂಚರಿಸುತ್ತಿದ್ದರು ಎನ್ನಲಾಗಿದೆ. ಕಾಡಾನೆ ದಾಳಿಯಲ್ಲಿ ಅಬ್ದುಲ್ ರೆಹಮಾನ್ ಅವರ ತಲೆ ಮತ್ತು ಕಾಲಿಗೆ ಪೆಟ್ಟಾಗಿದೆ. ನಾಸಿಯಾ ಎನ್ನುವವರ ಕಾಲಿಗೆ ಗಂಭೀರ ಪೆಟ್ಟಾಗಿದೆ.  ಕಾಡಾನೆ ದಾಳಿಯಿಂದ ಕಾರಿಗೆ ಹಾನಿಯಾಗಿದ್ದು, ಗಾಯಗೊಂಡವರಿಗೆ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆನೆ ಬರುವುದನ್ನು ನೋಡಿ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಕಾರಿನ ಬಳಿ ಬಂದ ಕಾಡಾನೆ ಕಾರಿನ ಮೇಲೆ ದಾಳಿ ನಡೆಸಿದೆ. ಕಾರಿನ ಮುಂಭಾಗವನ್ನು ಮೇಲಕ್ಕೆತ್ತಿದೆ. ಆನೆಯ ದಾಳಿಗೆ ಕಾರಿನಲ್ಲಿದ್ದವರಿಗೆ ಗಾಯವಾಗಿರುವ ಮಾಹಿತಿ ತಿಳಿದು ಬಂದಿದೆ. ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಕರು ಇದ್ದರು.

ಸೋಮವಾರ ಬೆಳಗ್ಗಿನಿಂದಲೂ ಒಂಟಿ ಸಲಗ ತೋಟತ್ತಾಡಿ ಗ್ರಾಮದಲ್ಲಿ ತಿರುಗಾಟ ನಡೆಸಿರುವುದನ್ನು ಜನರು ಗಮನಿಸಿದ್ದರು. ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಕಜೆ ಪರಿಸರದಿಂದ ಆಗಮಿಸಿದ ಕಾಡಾನೆ ಹಳೆ‌ ಕಕ್ಕಿಂಜೆ, ಅಂತರ ಬೈಲು ಮೂಲಕ ಪೆರ್ನಾಳೆ ಅರಣ್ಯದ ಕಡೆ ಬೆಳಗ್ಗೆ ಏಳು ಗಂಟೆ ಸುಮಾರಿಗೆ ಸಾಗಿದೆ.

ಇದೀಗ ಸಂಜೆಯ ವೇಳೆಗೆ ಆನೆ ರಸ್ತೆಯಲ್ಲಿಯೇ ಕಾಣಿಸಿಕೊಂಡು ವಾಹನದ‌ ಮೇಲೆ‌ ದಾಳಿ ನಡೆಸಿರುವುದು ಜನರಲ್ಲಿ ಆತಂಕ ಮೂಡಲು ಕಾರಣವಾಗಿದೆ. ಅರಣ್ಯ‌ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಡಾನೆ ಈ ಪರಿಸರದಲ್ಲಿ ಬೀಡು ಬಿಟ್ಟಿದ್ದೂ ಜನರು ಮನೆಯಿಂದ ಹೊರಬರಲು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ.

ಬೆಳ್ತಂಗಡಿ ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್ ತಮ್ಮ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಆಗಮಿಸಿ ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ನೆರವಾಗಿದ್ದಾರೆ ಮತ್ತು ಆನೆಯ ಚಲನ ವಲನಗಳನ್ನು ಗಮನಿಸಲು ಇಬ್ಬರು ಸಿಬ್ಬಂದಿಗಳನ್ನು ನೇಮಿಸಿದ್ದಾರೆ. ಸಾರ್ವಜನಿಕರು ರಾತ್ರಿ ವೇಳೆ ಸಂಚರಿಸುವಾಗ ಎಚ್ಚರದಿಂದಿರುವಂತೆ ಮನವಿ ಮಾಡಿದ್ದಾರೆ.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ