October 5, 2024

ವಕೀಲರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಸಿಬ್ಬಂದಿ ಅಮಾನತುಗೊಳಿಸಿದ ಘಟನೆ ಖಂಡಿಸಿ ಕುಟುಂಬಸ್ಥರು ಇಂದು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಗುರುವಾರ ಸಂಜೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ವಕೀಲ ಪ್ರೀತಂ ಎನ್ನುವವರ ಮೇಲೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ನಗರ ಠಾಣೆಯ ಪಿ.ಎಸ್.ಐ. ಸೇರಿ 6 ಜನರನ್ನು ಅಮಾನತುಗೊಳಿಸಿ ಅವರ ಮೇಲೆ ಐ.ಪಿ.ಸಿ. ಸೆಕ್ಷನ್ 307 ಅಡಿ ಕೇಸು ದಾಖಲಿಸಲಾಗಿದೆ
ಪೊಲೀಸರನ್ನು ಅಮಾನತ್ತುಗೊಳಿಸಿರುವುದು ಮತ್ತು ಅವರ ಮೇಲೆ ಕೇಸು ದಾಖಲಿಸಿರುವುದನ್ನು ವಿರೋಧಿಸಿ ಪೊಲೀಸರ ಕುಟುಂಬಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿ ನಗರಠಾಣೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಟುಂಬಸ್ಥರು ; ಗುರುವಾರದ ಘಟನೆಯ ನಂತರ ಅಮಾನತ್ತಾದ ಪೊಲೀಸರು ಕುಟುಂಬಸ್ಥರ ಸಂಪರ್ಕಕ್ಕೆ ಸಿಗುತ್ತಿಲ್ಲ ,  ಈ ವಿಚಾರದಲ್ಲಿ ಹಿರಿಯ ಅಧಿಕಾರಿಗಳಿಂದ ಬೆಂಬಲ ಸಿಗುತ್ತಿಲ್ಲ ಎಂಬ ಆರೋಪ ಹೊರಹಾಕಿದ್ದಾರೆ. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿರುವ ಹೈಕೋರ್ಟ್ ಮಾಹಿತಿ ಪಡೆದು ಮಂಗಳವಾರದ ಒಳಗೆ ವರದಿ ಹಾಗೂ ಕ್ರಮದ ಮಾಹಿತಿ ನೀಡುವಂತೆ ಸೂಚನೆ ನೀಡಿದೆ. ರಕ್ಷಣೆ ನೀಡೋ ಪೊಲೀಸರಿಗೆ ರಕ್ಷಣೆ ಇಲ್ಲ ಎಂದು ಅಳಲು ತೋಡಿಕೊಂಡಿರುವ ಕುಟುಂಬಸ್ಥರು ಅವರಿಗೆ ಹೆಚ್ಚುಕಮ್ಮಿಯಾದರೆ ಹೊಣೆ ಯಾರು, ನಮ್ಮ ಕಥೆ ಏನು ಎಂದು ಪ್ರಶ್ನಿಸಿದ್ದಾರೆ.

ಹಲ್ಲೆಗೊಳಗಾಗಿದ್ದಾರೆ ಎನ್ನಲಾದ ಪ್ರೀತಂ ಮೇಲೆ ಈ ಹಿಂದೆಯೇ ಆಲ್ದೂರು ಠಾಣೆಯಲ್ಲಿ ಗಲಾಟೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಎರಡು ಕೇಸುಗಳು ದಾಖಲಾಗಿವೆ. ಅವರು ತುಂಬಾ ದುಡಿಕಿನ ಮನುಷ್ಯ. ಮೊನ್ನೆ ನಗರ ಠಾಣೆಯಲ್ಲಿಯೂ ಅವರೇ ಮೊದಲು ಪೊಲೀಸರ ಮೇಲೆ ಕೈ ಮಾಡಿದ್ದಾರೆ. ಪೊಲೀಸರು ಅವರ ಮೇಲೆ ಹಲ್ಲೆ ಮಾಡಿಲ್ಲ. ಅವರೇ ಹೊರಗೆ ಹೋದ ನಂತರ ಕೈ ಮತ್ತು ಹೊಟ್ಟೆಗೆ ಗಾಯ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಪೊಲೀಸರು ಹಾಗಾದರೆ ಕಾನೂನು ಸುವ್ಯವಸ್ಥೆ ಕಾಪಾಡುವುದು ಬೇಡವಾ ? ಹೆಲ್ಮೆಟ್ ಹಾಕಿಲ್ಲ ಎಂದು ಕೇಳಿದ್ದು ತಪ್ಪಾ ? ವಕೀಲರಿಗೆ ನ್ಯಾಯ ಕೇಳಲು ಬಾರ್ ಕೌನ್ಸಿಲ್, ನ್ಯಾಯಾಲಯ ಎಲ್ಲಾ ಇದೆ. ಆದರೆ ಪೊಲೀಸರಿಗೆ ಅನ್ಯಾಯವಾದರೆ ಯಾರೂ ಕೇಳುವವರು ಇಲ್ಲವಾ ? ಪೊಲೀಸರು ಹಗಲು ರಾತ್ರಿಯೆನ್ನದೇ  ಪೊಲೀಸರಿಗೆ ರಕ್ಷಣೆ ನೀಡುವವರು ಯಾರೂ ಎಂದು ಕುಟುಂಬಸ್ಥರು ಪ್ರಶ್ನಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ