October 5, 2024

ಸಾಮಾನ್ಯವಾಗಿ ಜನರು ರೋಗಿಯ ಬಗ್ಗೆ ಹೆಚ್ಚಾಗಿ ತಾತ್ಸಾರ ಮನೋಭಾವ ಮೂಡಿಸಿಕೊಳ್ಳುತ್ತಾರೆಯೆ ಹೊರೆತು ರೋಗದ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳುವುದಿಲ್ಲ. ಇಂತಹ ವಾತಾವರಣ ಸಮಾಜದಲ್ಲಿ ಬದಲಾಗಬೇಕಿದೆ ಎಂದು ಜೆಎಂಎಫ್‍ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಡಿ.ಸಚಿನ್ ಹೇಳಿದರು.

ಅವರು ಶುಕ್ರವಾರ ಮೂಡಿಗೆರೆ ಪಟ್ಟಣದ ಎಂಜಿಎಂ ಸರಕಾರಿ ಆಸ್ಪತ್ರೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಅಭಿಯೋಜನಾ ಇಲಾಖೆ ಹಾಗೂ ಎಂಜಿಎಂ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಏಡ್ಸ್ ದಿನಾಚರಣೆ, ಅಂತರಾಷ್ಟ್ರೀಯ ವಿಕಲಚೇತನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರದಲ್ಲಿ ವಿಕಲಚೇತನರನ್ನು ತಾತ್ಸಾರ ಮನೋಭಾವದಿಂದ ನೋಡುವುದು ಸರಿಯಲ್ಲ. ಅಲ್ಲದೇ ಎಚ್‍ಐವಿ ರೋಗಿಗಳು ಅಧಿಕಗೊಳ್ಳುವ ಬೆಳವಣಿಗೆ ಕೂಡ ಒಳ್ಳೆಯದಲ್ಲ. ಎಚ್‍ಐವಿ ಸೋಂಕಿತ ವ್ಯಕ್ತಿಗಳು ಸಮಾಜಕ್ಕೆ ಹೆದರಿ ಚಿಕಿತ್ಸೆ ಪಡೆಯಲು ಹಿಂಜರಿಯಬಾರದು. ಎಚ್‍ಐವಿ ರೋಗಿಗಳಿಗೆ ಹಾಗೂ ವಿಕಲಚೇತನರಿಗೆ ಸರಕಾರದಿಂದ ಅನೇಕ ವಿಶೇಷ ಸೌಲಭ್ಯ ಸಿಗುತ್ತವೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಲಹೆ ನೀಡಿದರು.

ಡಾ. ಮಾನಸ ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ವೈದ್ಯರು ಭಯಭೀತರಾಗಿದ್ದರೆ ಇಂದು ಕೋವಿಡ್ ನಂತಹ ಮಹಾಮಾರಿಯನ್ನು ನಿಯಂತ್ರಣಗೊಳಿಸಲು ಸಾಧ್ಯವಾಗುತ್ತಿರಲಿಲ್ಲ. ಎಚ್‍ಐವಿ ರೋಗ ಕೂಡ ಗುಣಪಡಿಸಲು ಸಾಧ್ಯವಾಗದೇ ಇದ್ದರೂ ಹೆಚ್ಚಾಗಿ ಹರಡದಂತೆ ನಿಯಂತ್ರಣದಲ್ಲಿಡಲು ಸಾಧ್ಯವಿದೆ. ಅದಕ್ಕೆ ವೈದ್ಯರು, ರೋಗಿಗಳು ಹಾಗೂ ಸಾರ್ವಜನಿಕರ ಪಾತ್ರ ಅಗತ್ಯವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂಜಿಎಂ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಪ್ರಿಯಾಂಕ ಪ್ರಭಾಕರ್ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಡಿ.ಸಿದ್ದಯ್ಯ, ಕಾರ್ಯದರ್ಶಿ ಎಚ್.ಜಿ.ಆದರ್ಶ, ಉಪಾಧ್ಯಕ್ಷ ಬಿ.ಟಿ.ನಟರಾಜ್, ಸಹಾಯಕ ಸರಕಾರಿ ಅಭಿಯೋಜಕಿ ರೂಪ, ವೈದ್ಯಾಧಿಕಾರಿ ಡಾ.ಎಸ್.ಜಿ.ಕಿರಣ್ ಸೇರಿದಂತೆ ಎಂಜಿಎಂ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ