October 5, 2024

ಬಸ್ – ಬೊಲೆರೊ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲ್ಲೂಕಿನ ನಿಟ್ಟೆ ಸಮೀಪ ಭಾನುವಾರ ನಡೆದಿದೆ.

ನಂದಳಿಕೆ ಕಡೆಯಿಂದ ಬರುತ್ತಿದ್ದ ಬೊಲೆರೊ ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರ ನಿವಾಸಿ ಶಿವಪ್ಪ (48) ಸ್ಥಳದಲ್ಲೇ ಮೃತಪಟ್ಟರೆ, ಮಂಜು (45), ಸುಜಯ (28) ಎಂಬವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ಕಾರ್ಯಕ್ರಮಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಜಯಪುರದಿಂದ ನಂದಳಿಕೆಗೆ ಬೆಳಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನ ಹಿಂದಿರುಗುವ ಸಂಧರ್ಭದಲ್ಲಿ ಈ ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೃತರಾದ ಕುಟುಂಬ ಗುರಿಕಾರ ಶಿವಪ್ಪನವರೇ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು ಎಂದು‌ ತಿಳಿದು ಬಂದಿದೆ.

ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ