October 5, 2024

ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಮರಗಳನ್ನು ಕಡಿದ ಆರೋಪದ ಮೇಲೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಸಹೋದರ ವಿಕ್ರಂ ಸಿಂಹ ಅವರನ್ನು ಹಾಸನ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಬೇಲೂರು ತಾಲ್ಲೂಕಿನಲ್ಲಿ ಸರ್ಕಾರಿ ಜಾಗದಲ್ಲಿ ಸುಮಾರು 126 ಮರಗಳನ್ನು ಅಕ್ರಮವಾಗಿ ಮರಗಳನ್ನು ಕಡಿದ ಆರೋಪದ ಮೇಲೆ ಅವರನ್ನು ವಶಕ್ಕೆ ಪಡೆಯಲಾಗಿದೆ. ಸಕಲೇಶಪುರ ತಾಲ್ಲೂಕಿನ ಬಿರಡಹಳ್ಳಿ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಬಗ್ಗೆ ಹಾಸನ ಅರಣ್ಯ ಇಲಾಖೆಯಲ್ಲಿ ದೂರು ದಾಖಲಾಗಿತ್ತು. ದೂರನ್ನು ಆದರಿಸಿ ವಿಕ್ರಂ ಸಿಂಹ ಅವರ ಮೇಲೆ ಕೇಸು ದಾಖಲಿಸಲಾಗಿತ್ತು. ಕೇಸು ದಾಖಲಾಗುತ್ತಿದ್ದಂತೆ ವಿಕ್ರಂ ಸಿಂಹ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಅವರನ್ನು ವಶಕ್ಕೆ ಪಡೆಯಲು ಅರಣ್ಯ ಅಧಿಕಾರಿಗಳು ಹುಡುಕಾಟ ನಡೆಸಿದ್ದರು. ಅವರ ಮನೆಗೆ ನೋಟೀಸ್ ಸಹ ಅಂಟಿಸಲಾಗಿತ್ತು.

ವಿಕ್ರಂ ಸಿಂಹ ಬೆಂಗಳೂರಿನಲ್ಲಿ ಇದ್ದಾರೆ ಎಂಬ ಮಾಹಿತಿ ಪಡೆದು ಜಾಡು ಹಿಡಿದು ಹೋದ ಅರಣ್ಯ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿನಲ್ಲಿ ವಿಕ್ರಂ ಸಿಂಹ ಅವರನ್ನು ವಶಕ್ಕೆ ಪಡೆದು ಯಲಹಂಕ ಅರಣ್ಯ ಘಟಕದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬೇಲೂರು ತಾಲ್ಲೂಕು ನಂದಗೊಂಡನಹಳ್ಳಿ ಎಂಬಲ್ಲಿ ಶುಂಠಿ ಬೆಳೆಯಲೆಂದು ಲೀಸ್ ಗೆ ಪಡೆದಿದ್ದ ಜಾಗದಲ್ಲಿ ವಿಕ್ರಂ ಸಿಂಹ ಅಕ್ರಮವಾಗಿ ಮರಗಳನ್ನು ಕಡಿದು ಸಾಗಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಶುಂಠಿ ಬೆಳೆಯಲು ಪಡೆದಿದ್ದ ಖಾಸಗಿ ವ್ಯಕ್ತಿಯ ಜಾಗ ಜೊತೆಗೆ ಒತ್ತುವರಿ ಮಾಡಿದ್ದ ಸರ್ಕಾರಿ ಜಾಗದಲ್ಲಿ ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲಾಗಿತ್ತು. ಈ ಬಗ್ಗೆ ಬೇಲೂರು ತಹಸೀಲ್ದಾರ್ ಮಮತಾ ಅವರು ಸ್ಥಳ ಪರಿಶೀಲನೆ ನಡೆಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿ ಪ್ರಕರಣ ಬಯಲಿಗೆಳೆದಿದ್ದರು.

ಈ ಪ್ರಕರಣದಲ್ಲಿ ಕರ್ತವ್ಯ ಲೋಪದ ಆಧಾರದಲ್ಲಿ ಹಾಸನ ಡಿ.ಎಫ್.ಓ ಸೇರಿ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. 10 ಎಕರೆ ಪ್ರದೇಶದಲ್ಲಿ 126 ಮರಗಳನ್ನು ಕಡಿದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಿ. ಮೋಹನ್ ಕುಮಾರ್ ಹಾಸನ ಉಪ ವಿಭಾಗದ ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪ್ರಭುಗೌಡ ಬಿರಾದಾರ, ಬೇಲೂರು ಅರಣ್ಯಾಧಿಕಾರಿ ವಲಯ ಅಧಿಕಾರಿ ವಿನಲ್ ಕುಮಾರ್, ವಲಯದ ಉಪ ವಲಯ ಅರಣ್ಯಾಧಿಕಾರಿ ಡಿ.ಗುರುರಾಜ್, ಅರಣ್ಯ ಗಸ್ತು ಪಾಲಕ ಚ್.ಬಿ.ರಘುಕುಮಾ‌ರ್ ಅವರುಗಳನ್ನು ಅಮಾನತು ಮಾಡಲಾಗಿದೆ.

ಪ್ರತಾಪ್ ಸಿಂಹಗೆ ಮುಜುಗರ : 
ಸಹೋದರ ವಿಕ್ರಂ ಸಿಂಹ ಅವರ ಬಂಧನದಿಂದಾಗಿ ಸಂಸದ ಪ್ರತಾಪ್ ಸಿಂಹ ಮುಜುಗರಕ್ಕೆ ಒಳಗಾಗಿದ್ದಾರೆ. ಇತ್ತೀಚೆಗೆ ತಾನೆ ಸಂಸತ್ತಿನೊಳಗೆ ಅಕ್ರಮವಾಗಿ ನುಸುಳಿ ದಾಂಧಲೆ ನಡೆಸಿದ ವ್ಯಕ್ತಿಗಳು ಪ್ರತಾಪ್ ಸಿಂಹ ಅವರಿಂದ ಪಾಸ್ ಪಡೆದಿದ್ದ ಪ್ರಕರಣದಿಂದ ಪ್ರತಾಪ್ ಸಿಂಹ ಟೀಕೆಗಳಿಗೆ ಗುರಿಯಾಗಿದ್ದರ. ಇದೀಗ ತನ್ನ ತಮ್ಮ ಮರಗಳ್ಳತನ ಪ್ರಕರಣದಲ್ಲಿ ಸಿಲುಕಿರುವುದು ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ