October 5, 2024

ವಿದ್ಯಾರ್ಥಿಗಳು ಸಕಾರಾತ್ಮಕ ಮನೋಭಾವನೆ ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಸಾಧನೆಯೆಡೆಗೆ ಸಾಗಬೇಕು ಎಂದು ಮೂಡಿಗೆರೆ ಜೆ.ಸಿ.ಐ. ಪೂರ್ವಾಧ್ಯಕ್ಷ, ಎಲ್.ಐ.ಸಿ. ಅಭಿವೃದ್ಧಿ ಅಧಿಕಾರಿ ರವಿಕುಮಾರ್ ತಿಳಿಸಿದರು.

ಸೋಮವಾರ ಮೂಡಿಗೆರೆ ಜೇಸಿಐ ಸಂಸ್ಥೆ ಪಟ್ಟಣದ ಸೈಂಟ್ ಮಾರ್ಥಾಸ್ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಾ ಮಾತನಾಡುತ್ತಿದ್ದರು.

ಸಾಧನೆಯ ಹಾದಿಯಲ್ಲಿ ಸಾಕಷ್ಟು ಅಡೆತಡೆಗಳು ಬರುತ್ತವೆ. ಅಂತಹ ಸಂದರ್ಭದಲ್ಲಿ ಎದೆಗುಂದದೇ ಸಮಸ್ಯೆಗಳನ್ನು ವಿಶ್ಲೇಷಣೆ ಮಾಡಿ ಪರಿಹಾರಗಳನ್ನು ಕಂಡುಕೊಳ್ಳಬೇಕು. ವಿದ್ಯಾರ್ಥಿ ಜೀವನ ಬಹು ಅಮೂಲ್ಯವಾದುದು, ಇಲ್ಲಿ ನಾವು ಕಲಿತದ್ದು ಬದುಕಿನಿದ್ದಕ್ಕೂ ನಮಗೆ ದಾರಿದೀಪವಾಗಿರುತ್ತದೆ, ಹಾಗಾಗಿ ವಿದಾರ್ಥಿಗಳು ಸಮಯವನ್ನು ವ್ಯರ್ಥ ಮಾಡದೆ ಜ್ಞಾನಾರ್ಜನೆ ಮಾಡಬೇಕು. ಶಾಲಾ ಪಠ್ಯದ ಜೊತೆಗೆ ಪಠ್ಯೇತರ ಚುಟುವಟಿಕೆಗಳಲ್ಲಿಯೂ ಸಕ್ರಿಯರಾಗಿ ಭಾಗವಹಿಸಬೇಕು. ಸ್ಪೂರ್ತಿದಾಯಕ ವ್ಯಕ್ತಿಗಳ ಜೀವನಚರಿತ್ರೆ ಓದುವ ರೂಢಿ ಬೆಳೆಸಿಕೊಳ್ಳಬೇಕು ಎಂದರು.

ಗುರಿ ಮತ್ತು ಸಾಧನೆ ಕುರಿತು ಜೇಸಿಐ ವಲಯ ತರಬೇತುದಾರ, ಪತ್ರಕರ್ತ ಪ್ರಸನ್ನ ಗೌಡಹಳ್ಳಿ ಮಾತನಾಡಿ ; ವಿದ್ಯಾರ್ಥಿಗಳು ಸದಾ ಉನ್ನತ ಗುರಿಯನ್ನು ಇಟ್ಟುಕೊಳ್ಳಬೇಕು. ನೂರಕ್ಕೆ ನೂರು ಅಂಕಗಳನ್ನು ಪಡೆಯಬೇಕು ಎಂದು ಪ್ರಯತ್ನ ನಡೆಸಬೇಕು. ಆಗ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಗುರಿಯಿಂದ ವಿಚಲಿತರಾಗದೇ, ಪೋಷಕರು ಮತ್ತು ಗುರುಗಳಿಗೆ ಗೌರವ ನೀಡುತ್ತಾ, ದೈಹಿಕ ಮತ್ತು ಮಾನಸಿಕ ಸದೃಡತೆಗೆ ಕ್ರೀಡೆ, ಯೋಗ ಮುಂತಾದ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಮುನ್ನಡೆಯಬೇಕು. ಕೀಳರಿಮೆ ಬಿಟ್ಟು ಅವಕಾಶಗಳನ್ನು ಸದಾ ಸದುಪಯೋಗಪಡಿಸಿಕೊಳ್ಳಬೇಕು, ಮಾನವೀಯ ಗುಣಗಳನ್ನು ಅಳವಡಿಕೊಳ್ಳಬೇಕು ಎಂದರು.

ಜೂನಿಯರ್ ಜೇಸಿ ಮಾಜಿ ಅಧ್ಯಕ್ಷೆ ಪ್ರಾರ್ಥನಾ ಅಂಗಾಂಗ ದಾನ ಮಾಡುವುದರ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮವನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಸಿಸ್ಟರ್ ರೀಟಾ ಉದ್ಘಾಟಿಸಿದರು. ಜೇಸಿಐ ಮೂಡಿಗೆರೆ ಅಧ್ಯಕ್ಷ ಸುಪ್ರೀತ್ ಕಾರಬೈಲ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ದೀಕ್ಷಿತ್ ಕಣಚೂರು, ಲೇಡಿಜೇಸಿ ಕಾರ್ಯದರ್ಶಿ ಶೃತಿ ದೀಕ್ಷಿತ್ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ