October 5, 2024

ಹುಬ್ಬಳ್ಳಿಯ ಶ್ರೀರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಪಕ್ಷದ ಜಿಲ್ಲಾ ಕಚೇರಿಯಿಂದ ಆಜಾದ್ ಪಾರ್ಕ್ ವರೆಗೆ ಮೆರವಣಿಗೆ ನಡೆಸಲಾಯಿತು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಡಾ.ನರೇಂದ್ರ ಮಾತನಾಡಿ, ೩೧ ವರ್ಷಗಳ ಹಳೆಯ ಪ್ರಕರಣವನ್ನು ರಾಮಜನ್ಮಭೂಮಿ ಹೋರಾಟಕ್ಕೆ ತಳಕು ಹಾಕಿ ರಾಮ ಭಕ್ತ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿರುವುದನ್ನು ಖಂಡಿಸುತ್ತೇವೆ ಎಂದರು.

ಜನವರಿ ೨೨ ರಂದು ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಇದರ ಅಂಗವಾಗಿ ರಾಮಮಂದಿರ ರಾಮಜನ್ಮ ಭೂಮಿ ನ್ಯಾಸ್ ತೀರ್ಥಕ್ಷೇತ್ರ ಟ್ರಸ್ಟ್ ವತಿಯಿಂದ ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ಮತ್ತು ಕರಪತ್ರಗಳನ್ನು ಹಂಚಲಾಗುತ್ತಿದೆ. ಈ ವಿಚಾರ ಪ್ರಸ್ತಾಪ ಆಗುತ್ತಿದ್ದಂತೆ ಸಿದ್ದರಾಮಯ್ಯ ಅವರ ಕಾಲಿನಲ್ಲಿ ನಡುಕ ಉಂಟಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಆಗುತ್ತದೆ ಎನ್ನುವ ಭೀತಿ ಮೂಡಿದೆ ಎಂದರು.

ಒಂದೆಡೆ ತಾವೇ ಘೋಷಿಸಿರುವ ೫ ಗ್ಯಾರಂಟಿಗಳನ್ನ ಜಾರಿಗೆ ತರಲು ಆಗುತ್ತಿಲ್ಲ. ಖಜಾನೆ ಖಾಲಿ ಆಗಿದೆ. ಯಾವುದೇ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಸಿಗತ್ತಿಲ್ಲ. ಮತ್ತೊಂದೆಡೆ ಮನೆ ಮನೆಯಲ್ಲಿ ಶ್ರೀರಾಮನ ಹೆಸರಲ್ಲಿ ಹಿಂದೂ ಸಮಾಜ ಜಾಗೃತಿಯಾಗುತ್ತಿದೆ. ಇದೆಲ್ಲ ಕಾರಣದಿಂದ ಚುನವಣೆಯಲ್ಲಿ ಬಹಳದೊಡ್ಡ ಹಿನ್ನಡೆ ಆಗಬಹುದು ಎನ್ನುವ ಭಯದಿಂದ ಈ ಅಭಿಯನವನ್ನು ಹತ್ತಿಕ್ಕುವ ಸಲುವಾಗಿ 31 ವರ್ಷಗಳ ನಂತರ ಶ್ರೀಕಾಂತ್ ಪೂಜಾರಿ ಸೇರಿದಂತೆ ರಾಮ ಜನ್ಮ ಭೂಮಿ ಹೋರಾಟದಲ್ಲಿ ಭಾಗವಹಿಸಿದ್ದವರನ್ನ ಬಂಧಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ಈ 31 ವರ್ಷದ ಅವಧಿಯಲ್ಲಿ ಮೂರು ಬಾರಿ ಕಾಂಗ್ರೆಸ್ ಆಡಳಿತ ನಡೆಸಿದೆ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ೫ ವರ್ಷ ಆಡಳಿತ ಮುಗಿಸಿದ್ದಾರೆ. ಅಂದೇ ಬಂಧಿಸಬಹುದಿತ್ತು. ಈಗ್ಯಾಕೆ ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆ ಜನಸಾಮಾನ್ಯರಲ್ಲಿ ಉದ್ಭವಿಸುತ್ತದೆ. ಇದಕ್ಕೆ ತಕ್ಕ ಉತ್ತರವನ್ನೂ ನೀಡಲಿದ್ದಾರೆ. ಬಿಜೆಪಿಯಲ್ಲಿರುವ ಹಿಂದೂಗಳಿಗಷ್ಟೇ ಅಲ್ಲದೆ ಕಾಂಗ್ರೆಸ್‌ನಲ್ಲಿರುವ ಹಿಂದೂಗಳಿಗೂ ಇದು ನೋವು ತಂದಿದೆ. ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವರಾಜ ಶೆಟ್ಟಿ ಮಾತನಾಡಿ, ನೂರಾರು ವರ್ಷ ಇತಿಹಾಸ ಇರುವ ಕಾಂಗ್ರೆಸ್ ಶ್ರೀರಾಮನನ್ನು ವಿರೋಧಿಸುತ್ತಲೇ ಬಂದಿದೆ. ಈಗಲೂ ಹಿಂದೂ ಕಾರ್ಯಕರ್ತರು, ರಾಮನ ಭಕ್ತರಿಗೆ ತೊಂದರೆ ಕೊಡುವ ಕೆಲಸ ಮಾಡುತ್ತಿದ್ದಾರೆ. ಹಿಂದೂವಾಗಿ ಹುಟ್ಟಿ, ಹಿಂದುತ್ವಕ್ಕೆ ದ್ರೋಹ ಬಗೆಯುವ ಕೆಲಸವನ್ನು ಸಿದ್ದರಾಮಯ್ಯ ಅವರನ್ನು ಶ್ರೀರಾಮ ಚಂದ್ರ ಕ್ಷಮಿಸುವುದಿಲ್ಲ ಎಂದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ ಮಾತನಾಡಿ, ಸಿದ್ದರಾಮಯ್ಯ ಅವರನ್ನು ಧರ್ಮವಿರೋಧಿ, ಜನ ವಿರೋಧಿ, ರಾಷ್ಟ್ರದ್ರೋಹಿ ಸಿಎಂ ಎಂದು ಜರಿದರು. ಅವರ ವಿರುದ್ಧ ಜನ ಜಾಗೃತಿ ಮೂಡಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. 500 ವರ್ಷಗಳ ಹೋರಾಟದ ಇತಿಹಾಸ ಇರುವ ಹಿರಿಯರ ಗೌರವಕ್ಕೆ ಕಾಂಗ್ರೆಸ್ ಸರ್ಕಾರ ಚ್ಯುತಿ ಬರುವ ರೀತಿ ನಡೆದುಕೊಳ್ಳುತ್ತಿದೆ ಎಂದು ದೂರಿದರು.

ಆಟೋ ಚಾಲಕರಾಗಿರುವ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಅವರು ಧರ್ಮದ ಕಾರ್ಯಗಳನ್ನು ಮಾಡುತ್ತಿರುವ ಸಜ್ಜನ. ಅವರನ್ನ ಏಕಾ ಏಕಿ ಬಂಧಿಸಿ ಜೈಲಿಗೆ ಕಳಿಸಲಾಗಿದೆ. ನೂರಾರು ಕೊಲೆಗಳನ್ನು ಮಾಡಿರುವ ಪಿಎಓಐ, ಎಸ್‌ಡಿಪಿಐನ 203 ಕ್ಕೂ ಹೆಚ್ಚು ಪ್ರಕರಣ ಗಳಲ್ಲಿ ಕೊಲೆ ಆರೋಪ ಎದುರಿಸುತ್ತಿರುವವ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಹಿಂದಕ್ಕೆ ಪಡೆದಿದೆ ಎಂದು ಆರೋಪಿಸಿದರು.

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ನಯಾ ಪೈಸೆ ದೇಣಿಗೆ ಕೊಡುವುದಿಲ್ಲ ಎಂದು ಹೇಳಿದ್ದ ಸಿದ್ದರಾಮಯ್ಯ, ಈಗ ಮಂದಿರ ಉದ್ಘಾಟನೆಗೆ ಆಹ್ವಾನ ನೀಡಲಿಲ್ಲ ಎನ್ನುತ್ತಿದ್ದಾರೆ. ದೇಶದ್ರೋಹಿಗಳ ಜೊತೆ ಕೈಜೋಡಿಸಿರುವ ಅವರಿಗೆ ಯಾವುದೇ ಕಾರಣಕ್ಕೂ ಆಹ್ವಾನ ಸಿಗುವುದಿಲ್ಲ ಎಂದರು.

ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ನಗರಾಧ್ಯಕ್ಷ ಮಧುಕುಮಾರ್ ರಾಜ್ ಅರಸ್, ಜಿ.ಪಂ. ಮಾಜಿ ಉಪಾಧ್ಯಕ್ಷ ಬೀಕನಹಳ್ಳಿ ಸೋಮಶೇಖರ್, ಮುಖಂಡರುಗಳಾದ ಕೋಟೆ ರಂಗನಾಥ್, ಬಿ.ರಾಜಪ್ಪ, ಈಶ್ವರಳ್ಳಿ ಮಹೇಶ್, ಪುಷ್ಪರಾಜ್ ಇತರರು ಭಾಗವಹಿಸಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ