October 5, 2024

?????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಇವರು ನೀಡುವ ರಾಜ್ಯಮಟ್ಟದ ಸ್ವಾಮಿ ವಿವೇಕಾನಂದ ಯುವ ಪ್ರಶಸ್ತಿಗೆ ಜಾನಪದ ಕಲಾವಿದ ರವಿ ಹಂತೂರು ಭಾಜನರಾಗಿದ್ದಾರೆ.

ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಯುವ ಸಂಘಗಳ ಒಕ್ಕೂಟ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶನಿವಾರ ಕಡಬ ತಾಲ್ಲೂಕು ಸವಣೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರವಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಜಾನಪದ ಕಲಾ ಸಂಘ (ರಿ.) ಮೂಡಿಗೆರೆ ಜಾನಪದ   ತಂಡದಲ್ಲಿ ಹಲವಾರು ವರ್ಷಗಳಿಂದ ಖಜಾಂಜಿಯಾಗಿ ಕಾರ್ಯನಿರ್ವಹಿಸುತ್ತಿರುವ ರವಿ .ಎಚ್.ಎಸ್ ಅವರು ಮೂಡಿಗೆರೆ ತಾಲ್ಲೂಕಿನ ಹಂತೂರು ಗ್ರಾಮದ ವಾಸಿಯಾಗಿದ್ದಾರೆ.

ಇವರು ಹಲವಾರು ಬಾರಿ ಜಿಲ್ಲಾ ಮಟ್ಟ, ರಾಜ್ಯ ಮಟ್ಟ ಹಾಗೂ ರಾಷ್ಟ್ರ ಮಟ್ಟದಲ್ಲಿ ಹಾಡಿರುತ್ತಾರೆ ಅದರ ಜೊತೆಯಲ್ಲೇ ಹತ್ತಾರು ಆಸಕ್ತ ವಿದ್ಯಾರ್ಥಿ ಯುವಜನರಿಗೆ ಜಾನಪದದ ಬಗ್ಗೆ ಮಾಹಿತಿ ತರಬೇತಿ ನೀಡುವ ಮೂಲಕ ಗಾಯಕರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುತ್ತಾರೆ.

ಇವರು ತಮ್ಮ ತಂಡದ ಸಹಯೋಗದೊಂದಿಗೆ ಬಾಳೂರು ಮೊರಾರ್ಜಿ ಶಾಲೆ , ಕೋಳೂರು ಮೊರಾರ್ಜಿ ಶಾಲೆ ಸೇರಿದಂತೆ ಅನೇಕ ಶಾಲಾ ಶಾಲೆ ಮತ್ತು ಕಾಲೇಜುಗಳಲ್ಲಿ ಮಕ್ಕಳಿಗೆ ಜಾನಪದ ಗೀತೆಯನ್ನು ಹೇಳಿಕೊಟ್ಟಿದ್ದಾರೆ. ಹಲವಾರು ಸಮಾಜಮುಖಿ ಕೆಲಸದಲ್ಲೂ ಬಾಗಿಯಾಗಿರುತ್ತಾರೆ.  ಜಾನಪದ ಕಲೆಯ ಮೇಲೆ ರವಿ ಅವರಿಗೆ ಇರುವ ಆಸಕ್ತಿ ಮತ್ತು ಅವರ ಸಾಧನೆಯನ್ನು ಗುರುತಿಸಿ ರಾಜ್ಯ ಯುವ ಪ್ರಶಸ್ತಿ  ನೀಡಿ ಗೌರವಿಸಲಾಗಿದೆ. ರವಿಯವರಿಗೆ ರಾಜ್ಯಮಟ್ಟದ ಪ್ರಶಸ್ತಿ ಲಭಿಸಿರುವುದಕ್ಕೆ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಜಾನಪದ ಕಲಾ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ತಮ್ಮ ಅಭಿನಂದನೆ ಸಲ್ಲಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ