October 5, 2024

ಆನ್ ಲೈನ್ ಮೂಲಕ ಮದುವೆ ನೋಂದಣಿಗೆ ಅವಕಾಶ ಕಲ್ಪಿಸಲು ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಎಚ್​.ಕೆ ಪಾಟೀಲ್ ಅವರು ಹೇಳಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಎಚ್​.ಕೆ ಪಾಟೀಲ್ ಅವರು​, ವಿವಾಹ ನೋಂದಣಿ ಸರಳೀಕರಣಕ್ಕೆ ರಾಜ್ಯ ಸರ್ಕಾರದ ಸಮ್ಮತಿ ನೀಡಿದ್ದು, ಹಿಂದೂ ವಿವಾಹ ನೊಂದಣಿ ಕಾಯ್ದೆ 2024ಕ್ಕೆ ಒಪ್ಪಿಗೆ ಸೂಚಿಸಿದೆ. ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಮೊದಲು ವಿವಾಹ ನೋಂದಣಿ ಆಗುತ್ತಿದ್ದವು. ಈಗ ಆನ್ ಲೈನ್ ಮೂಲಕ ನೋಂದಣಿಗೆ ಅವಕಾಶವಿದೆ. ಗ್ರಾಮ 1, ಕಾವೇರಿ 2, ಬಾಪೂಜಿ ಸೇವಾಕೇಂದ್ರಗಳಲ್ಲಿ ನೊಂದಣಿ ಮಾಡಬಹುದು. ಇನ್ನು ಮುಂದೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆಯುವಂತಿಲ್ಲ ಎಂದು ಹೇಳಿದ್ದಾರೆ.

ಇನ್ನು ರಾಯಚೂರು ವಿವಿ ಆವರಣದಲ್ಲಿ ಮಾನವ ಜಿನೋಮ್ ಸಂಸ್ಥೆ ಸ್ಥಾಪನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ. 104 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ 26 ಕೋಟಿ ರೂ. ಅನುಮೋದನೆ ಮತ್ತು ಅಸ್ತಿತ್ವದಲ್ಲಿರುವ 82 ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೂ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ