October 5, 2024

ಹಣ ಇದ್ದವರು ಮಾತ್ರ ಶ್ರೀಮಂತರಲ್ಲ. ಆದರೆ ಯಾರು ಆರೋಗ್ಯದಿಂದ ಇರುತ್ತಾರೋ ಅವರೇ ನಿಜವಾದ ಶ್ರೀಮಂತರು ಎಂದು ಮೂಡಿಗೆರೆ ಎಂಜಿಎಂ ಆಡಳಿತ ವೈದ್ಯಾಧಿಕಾರಿ ಡಾ.ಪ್ರಿಯಾಂಕ ಹೇಳಿದರು.

ಅವರು ಸೋಮವಾರ ಮೂಡಿಗೆರೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಜೇಸಿಐ ಸಂಸ್ಥೆ ಮತ್ತು ಆರೋಗ್ಯ ಇಲಾಖೆ ವತಿಯಿಂದ ಏರ್ಪಡಿಸಿದ್ದ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆರೋಗ್ಯ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಹಾಗಾಗಿ ಆರೋಗ್ಯ ಕಾಪಾಡಿಕೊಳ್ಳಬೇಕು. 35ರಿಂದ 40 ವರ್ಷ ಮೇಲ್ಪಟ್ಟವರು ಕನಿಷ್ಟ 6 ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಪ.ಪಂ. ಸದಸ್ಯ ಕೆ.ವೆಂಕಟೇಶ್ ಮಾತನಾಡಿ, ಪೌರ ಕಾರ್ಮಿಕರು ಮತ್ತು ಬೀದಿ ಬದಿ ವ್ಯಾಪಾಸ್ತರು ಪ್ರತಿನಿತ್ಯ ತಮ್ಮ ಕಾಯಕದಲ್ಲಿ ನಿರತರಾಗಿದ್ದರಿಂದ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಬೇಕು. ತುಂಬಾ ಮಾರಕವಾಗಿರುವ ಕ್ಯಾನ್ಸರ್ ರೋಗದ ಬಗ್ಗೆ ಆರೋಗ್ಯ ಇಲಾಖೆ ಮತ್ತು ಸರಕಾರ ನಿರಂತರವಾಗಿ ಜಾಗೃತಿ ಮೂಡಿಸುತ್ತಿದೆ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕೆಂದು ಹೇಳಿದರು.

ಜೇಸಿ ಅಧ್ಯಕ್ಷ ಸುಪ್ರಿತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ದೀಕ್ಷಿತ್, ತಾಲೂಕು ಆರೋಗ್ಯಾಧಿಕಾರಿ ಡಾ.ಸುಂದ್ರೇಶ್ ಪ.ಪಂ. ಮುಖ್ಯಾಧಿಕಾರಿ ರಂಗಸ್ವಾಮಿ ಮತ್ತಿತರರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ