October 5, 2024

ಮೂಡಿಗೆರೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾಕಿ ಇರುವ ಎಲ್ಲಾ ಅಭಿವೃದ್ಧಿ ಕಾಮಗಾರಿಗಳು ತ್ವರಿತವಾಗಿ ಮುಗಿಸುವ ಜತೆಗೆ ತನ್ನ ಕ್ಷೇತ್ರದ ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ನಿವಾರಿಸುವ ಕೆಲಸ ನಡೆಯುತ್ತಿದೆ. ಇದರಲ್ಲಿ ಯಶಸ್ಸು ಕೂಡ ಕಾಣುತ್ತೇನೆಂದು ಶಾಸಕಿ ನಯನಾ ಮೋಟಮ್ಮ ವಿಶ್ವಾಸ ವ್ಯಕ್ತಪಡಿಸಿದರು.

ಅವರು ಮೂಡಿಗೆರೆ ಪಟ್ಟಣದ ವಿವಿಧ ವಾರ್ಡ್ ಗಳಲ್ಲಿ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

25 ವರ್ಷದ ಹಿಂದೆ ತನ್ನ ತಾಯಿ ಮೋಟಮ್ಮ ಅವರು ಪಟ್ಟಣದ ಜನತೆಗೆ ಹೇಮಾವತಿ ನದಿಯಿಂದ ಕುಡಿಯುವ ನೀರಿನ ಸೌಲಭ್ಯ ಮಾಡಿಕೊಟ್ಟಿದ್ದರು. ಈಗ 19.5 ಕೋಟಿ ರೂ ವೆಚ್ಚದಲ್ಲಿ ಬೃಹತ್ ಟ್ಯಾಂಕ್ ನಿರ್ಮಾಣ, ಹೊಸ ಹೈಟೆಕ್ ಮೋಟರ್, ಪೈಪ್‍ಗಳನ್ನು ಹಾಕಿ ಮುಂದಿನ 25 ವರ್ಷವರೆಗೆ ಸಮಸ್ಯೆ ಬಾರದಂತೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲಾಗುವುದು. ಅಲ್ಲದೇ ಈಗಾಗಲೇ ಪಟ್ಟಣದವರೆಗೆ ಕುಡಿಯುವ ನೀರಿನ ಎಕ್ಸ್‍ಪ್ರೆಸ್ ಲೈನ್ ಬಂದಿದ್ದು, ಇನ್ನು 300 ಮೀಟರ್ ಪೈಪ್‍ಲೈನ್ ಕಾಮಗಾರಿ ಬಾಕಿ ಉಳಿದಿದೆ. ಅದಕ್ಕೆ ಟೆಂಡರ್ ಕೂಡ ನಡೆದಿದೆ. ಇವೆಲ್ಲಾ ಕಾರ್ಯ ಮುಗಿದರೆ ಪಟ್ಟಣಕ್ಕೆ ಶಾಶ್ವತ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೇ ಈಗಾಗಲೆ ಲಕ್ಯಾ ಡ್ಯಾಮ್‍ನಿಂದ ನೀರು ಪೂರೈಕೆ ಮಾಡುವ ಪ್ರಕ್ರಿಯೆ ಕೂಡ ನಡೆಯುತ್ತಿದ್ದು, ಆ ಕೆಲಸ ಪೂರ್ಣಗೊಂಡರೆ ಕ್ಷೇತ್ರದ ಬಹುತೇಕ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತದೆ ಎಂದು ಹೇಳಿದರು.

ಪಟ್ಟಣದಲ್ಲಿ 2002 ದಿಂದ ಇಲ್ಲಿಯವರೆಗೂ ಡಾಂಬಾರು ಕಾಣದ 10-11 ಹಾಗೂ 8ನೇ ವಾರ್ಡ್‍ನಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಗೆ ಗುದ್ದಲಿಪೂಜೆ ನೆರವೇರಿಸಿದ್ದು, ಕಾಮಗಾರಿ ಶೀಘ್ರವಾಗಿ ಪ್ರಾರಂಭಗೊಳ್ಳಲಿದೆ. ನಗರೋತ್ಥಾನ ಯೋಜನೆಯಲ್ಲಿ ಬಿಡುಗಡೆಯಾಗಿರುವ 3.5 ಕೋಟಿ ಅನುದಾನದಲ್ಲಿ ಪಟ್ಟಣದಲ್ಲಿ ಬಾಕಿ ಉಳಿದಿರುವ ಬಹುತೇಕ ಕಾಮಗಾರಿಗಳಿಗೆ ಮುಕ್ತಿ ದೊರಕಲಿದೆ. ಮುಂದಿನ ದಿನದಲ್ಲಿ ಯುಜಿಡಿ ಕಾಮಗಾರಿ ಕೂಡ ನಡೆಯಲಿದೆ.

ಚಿಕ್ಕಮಗಳೂರು ಮೂಗ್ತಿಹಳ್ಳಿಯಿಂದ ಹ್ಯಾಂಡ್‍ಪೋಸ್ಟ್‍ವರೆಗಿನ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಶೀಘ್ರದಲ್ಲಿಯೇ ಪ್ರಾರಂಭಗೊಳ್ಳಲಿದೆ. ಸದ್ಯದಲ್ಲೇ ಜನಸಂಪರ್ಕ ನಡೆಸಿ ಪಟ್ಟಣದ ನಿವಾಸಿಗಳ ಅಭಿಪ್ರಾಯ ಪಡೆದು ಎಂ.ಜಿ ರಸ್ತೆ ಅಗಲೀಕರಣದ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಪ.ಪಂ. ಸದಸ್ಯರಾದ .ವೆಂಕಟೇಶ್, ಎಚ್.ಪಿ.ರಮೇಶ್, ಹಂಜಾ, ಮುಖ್ಯಾಧಿಕಾರಿ ರಂಗಸ್ವಾಮಿ, ಮುಖಂಡರಾದ ದೀಕ್ಷಿತ್, ಸಿ.ಬಿ.ಶಂಕರ್, ಸುರೇಂದ್ರ, ಸುಧೀರ್, ಹರೀಶ್ ಮತ್ತಿತರರಿದ್ದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ