October 5, 2024

ಚಿಕ್ಕಮಗಳೂರು ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರು ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ.

ನಗರದ ಮೊಹಮ್ಮದ್ ಖಾನ್ ಲೇನ್ ನಿವಾಸಿ 18 ವರ್ಷದ ಸುಹಾನಾ ಭಾನು ಮೃತ ವಿದ್ಯಾರ್ಥಿನಿ. ಚಿಕಿತ್ಸೆಗೆಂದು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಸುಹಾನಾ ಗುರುವಾರ ಮೃತಪಟ್ಟಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಡೆಂಗ್ಯೂ ಪ್ರಕರಣಗಳು ದಾಖಲಾಗುತ್ತಿವೆ. ನಗರದಲ್ಲಿ ಒಳಚರಂಡಿ ಸ್ವಚ್ಚತೆಯ ಕೊರತೆಯಿಂದ ಡೆಂಗ್ಯೂ ಜ್ವರ ಹೆಚ್ಚಾಗಲು ಕಾರಣವಾಗುತ್ತಿದೆ ಎಂದು ದೂರು ಕೇಳಿಬಂದಿದೆ.

ಈ ಬೆಳವಣಿಗೆ ಆತಂಕ ಮೂಡಿಸಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ನಗರಸಭೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದರ ಮಧ್ಯೆಯೇ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳ ಸಂಖ್ಯೆ ಕ್ರಮವಾಗಿ ಹೆಚ್ಚುತ್ತಿದೆ. ಕೊಪ್ಪ ಸರಕಾರಿ ಆಸ್ಪತ್ರೆಯಲ್ಲಿ ಮಂಗನ ಕಾಯಿಲೆ ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಇಲಾಖೆ ಪ್ರತ್ಯೇಕ ವಾರ್ಡ್ ನಿರ್ಮಿಸಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ