October 5, 2024

26 ಕಿಲೋ ಮೀಟರ್‌ ಹೆದ್ದಾರಿಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತನೆ ಮಾಡಲಾಗುವುದು. ರಾಷ್ಟ್ರೀಯ ಹೆದ್ದಾರಿ-173 ಚಿಕ್ಕಮಗಳೂರು, ಕಡೂರು ಮತ್ತು ಹೊಳಲ್ಕೆರೆ ಸೇರಿದಂತೆ ಪ್ರಮುಖ ನಗರಗಳ ಹೆದ್ದಾರಿಗಳನ್ನು ಸಂಪರ್ಕಿಸುತ್ತದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ಮೂಗ್ತಿಹಳ್ಳಿಯಿಂದ ಮೂಡಿಗೆರೆ ವರೆಗೆ ರಸ್ತೆ ವಿಸ್ತರಣೆ ಆಗಲಿದೆ. ಈ ರಸ್ತೆಯಲ್ಲಿ ವಾಹನ ದಟ್ಟಣೆ ಅತಿಯಾಗಿರುವುದರಿಂದ ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುವುದು ಇದಕ್ಕಾಗಿ 400ಕೋಟಿ ಹಣವನ್ನು ಮೀಸಲಿಡಲಾಗಿದೆ ಎಂದು ತಿಳಿಸಿದ್ದಾರೆ. ಈ ಹೆದ್ದಾರಿಯೂ ನಾಲ್ಕು ರಾಷ್ಟ್ರೀಯ ಹೆದ್ದಾರಿಗಳನ್ನು ಸಂಪರ್ಕಿಸಲಿದ್ದು, ಇದರಿಂದ ತುಂಬಾ ಅನುಕೂಲವಾಗುತ್ತದೆ. ಕಡೂರು, ಚಿಕ್ಕಮಗಳೂರು, ಮೂಡಿಗೆರೆ, ಹೊಳಲ್ಕೆರೆ  ರಾಷ್ಟ್ರೀಯ ಹೆದ್ದಾರಿಗಳನ್ನು ಇದು ಸಂಪರ್ಕಿಸುತ್ತದೆ ಎಂದಿದ್ದಾರೆ.

ಈಗಾಗಲೇ ಕಡೂರಿನಿಂದ ಚಿಕ್ಕಮಗಳೂರಿನ ಮೂಗ್ತಿಹಳ್ಳಿ ವರೆಗೆ ರಸ್ತೆ ವಿಸ್ತರಣೆ ಆಗಿದ್ದು, ದ್ವಿಪಥ ರಸ್ತೆಯಾಗಿ ಪರಿವರ್ತನೆ ಆಗಿದೆ. ಇದೀಗ ಮೂಗ್ತಿಹಳ್ಳಿಯಿಂದ ಮೂಡಿಗೆರೆ ವರೆಗಿನ ರಸ್ತೆಯನ್ನು ದ್ವಿಪಥ ರಸ್ತೆಯಾಗಿ ಪರಿವರ್ತಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇದರ ಕಾಮಗಾರಿಯೂ ಸದ್ಯದಲ್ಲಿಯೇ ಪ್ರಾರಂಭವಾಗಲಿದೆ ಎನ್ನಲಾಗಿದೆ.

ಈ ರಸ್ತೆಯೂ ಮೂಡಿಗೆರೆ ಪಟ್ಟಣವನ್ನು ದಾಟಿ ಹ್ಯಾಂಡ್ ಪೋಸ್ಟ್ ವರೆಗೂ ಬರುತ್ತದೆಯೋ ಅಥವಾ ಮೂಡಿಗೆರೆ ಪಟ್ಟಣದ ವರೆಗೆ ಮಾತ್ರ ಇರುತ್ತದೆಯೋ ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ