October 5, 2024

ಕೇಂದ್ರೀಯ ವಿದ್ಯಾಲಯಗಳಲ್ಲಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ ಎಂದುಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ  ಕು. ಶೋಭಾ ಕರಂದ್ಲಾಜೆ ಹೇಳಿದರು.

ಚಿಕ್ಕಮಗಳೂರು ಸಮೀಪದ ತೇಗೂರಿನಲ್ಲಿ ಕೇಂದ್ರೀಯ ವಿದ್ಯಾಲಯದ ನೂತನ ಕಟ್ಟಡ ಉದ್ಘಾಟಿಸಿದ ಅವರು ಕೇಂದ್ರೀಯ ವಿದ್ಯಾಲಯಗಳಲ್ಲಿ ಓದುವ ವಿದ್ಯಾರ್ಥಿಗಳನ್ನು ಬೇರೆ ಬೇರೆ ರಾಜ್ಯಗಳಿಗೆ ವರ್ಗಾಯಿಸಿ ಶಿಕ್ಷಣ ನೀಡಲಾಗುತ್ತದೆ ಎಂದರು.

ಇದರಿಂದ ಆ ವಿದ್ಯಾರ್ಥಿಗಳ ಜ್ಞಾನ ವಿಕಸನವಾಗುತ್ತದೆ  ರಾಷ್ಟ್ರೀಯತೆ ಬೆಳೆಯುತ್ತದೆ.  ಕಡಿಮೆ ಖರ್ಚಿನಲ್ಲಿ ಕೇಂದ್ರೀಯ ವಿದ್ಯಾಲಯಗಳಲ್ಲಿ ಶಿಕ್ಷಣ ದೊರೆಯುತ್ತದೆ.  ಶಿಫಾರಸು ಇಲ್ಲದೆ ಲಾಟರಿ ಮತ್ತು ಮೆರಿಟ್ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಸೀಟು ನೀಡಲಾಗುತ್ತದೆ ಎಂದು ತಿಳಿಸಿದರು.

2014 ರಲ್ಲಿ ತಾವು ಲೋಕಸಭಾ ಸದಸ್ಯರಾದಾಗ ಕೇಂದ್ರೀಯ ವಿದ್ಯಾಲಯ ನೀಡುವಂತೆ ಬೇಡಿಕೆ ಸಲ್ಲಿಸಿದ್ದು,  ಉಡುಪಿ ಮತ್ತು ಚಿಕ್ಕಮಗಳೂರು  ಎರಡೂ ಜಿಲ್ಲೆಗಳಲ್ಲೂ ಕೇಂದ್ರೀಯ ವಿದ್ಯಾಲಯಗಳಾಗಿದೆ ಮೊದಲು ಉಡುಪಿಗೆ ವಿದ್ಯಾಲಯ ಸಿಕ್ಕಿತು  ಎಂದರು.

ಪ್ರಧಾನಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದಿಂದ ಇಂದು ದೇಶದ 25  ಕೇಂದ್ರೀಯ ವಿದ್ಯಾಲಯಗಳನ್ನು ಉದ್ಘಾಟಿಸಿದ್ದಾರೆ.  ಮುಂದಿನ ದಿನಗಳಲ್ಲಿ ಚಿಕ್ಕಮಗಳೂರಿನ ಕೇಂದ್ರೀಯ ವಿದ್ಯಾಲಯದಲ್ಲಿ ಎರಡೆರಡು ತರಗತಿಗಳನ್ನು ಜೊತೆಗೆ   ಪಿಯು ತರಗತಿಗಳನ್ನು ಆರಂಭಿಸಲಾಗುವುದು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿ  ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಮಾತನಾಡಿದರು.

ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್., ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಗೋಪಾಲಕೃಷ್ಣ, ಜಿಲ್ಲಾ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಕೇಂದ್ರಿಯ ವಿದ್ಯಾಲಯದ ಉಪ ಆಯುಕ್ತ ಧಮೇಂದ್ರ ಪಟ್ಲೆ ಮುಂತಾದವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ