October 5, 2024

ಮೂಡಿಗೆರೆ ತಾಲ್ಲೂಕು ನೂತನ ತಹಸೀಲ್ದಾರ್ ಮತ್ತು ತಾಲ್ಲೂಕು ದಂಢಾಧಿಕಾರಿಗಳಾಗಿ ಶ್ರಿ ಶೈಲೇಶ್ ಎಸ್. ಪರಮಾನಂದ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಮೂಡಿಗೆರೆ ಈ ಹಿಂದಿನ ತಹಸೀಲ್ದಾರ್ ತಿಪ್ಪೇಸ್ವಾಮಿ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಶೈಲೇಶ್ ಎಸ್. ಪರಮಾನಂದ ಅವರು ನೇಮಕವಾಗಿದ್ದಾರೆ.

ಶೈಲೇಶ್ ಅವರು ವಾರದ ಹಿಂದೆ ಮೂಡಿಗೆರೆ ತಹಸೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಉತ್ತರ ಕನ್ನಡ ಮೂಲದ ಶೈಲೇಶ್ ಎಸ್. ಪರಮಾನಂದ ಅವರು ಉತ್ತರಕನ್ನಡದ ವಿವಿಧ ತಾಲ್ಲೂಕುಗಳಲ್ಲಿ ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿದ ಅವರು ಮಲೆನಾಡು ಭಾಗದಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ. ಮೂಡಿಗೆರೆ ತಾಲ್ಲೂಕಿನ ಸಮಸ್ಯೆಗಳನ್ನು ಅರಿತು ಜನರಿಗೆ ಸ್ಪಂದಿಸುವ ಕೆಲಸ ಮಾಡಲಾಗುವುದು. ಕಛೇರಿ ಕೆಲಸಗಳು ಸುಗಮವಾಗಿ ಮತ್ತು ಪಾರದರ್ಶಕವಾಗಿ ಆಗುವಂತೆ ಕ್ರಮ ವಹಿಸಲಾಗುವುದು. ಇದೀಗ ಚುನಾವಣೆಗೆ ಸಂಬಂಧಿಸಿದ ಕೆಲಸ ಕಾರ್ಯಗಳ ಒತ್ತಡ ಹೆಚ್ಚಿದ್ದು,  ಚುನಾವಣೆ ತಯಾರಿ ವ್ಯವಸ್ಥಿತವಾಗಿ ನಿರ್ವಹಿಸಲು ಕ್ರಮ ವಹಿಸಲಾಗುವುದು. ಈ ಭಾಗದಲ್ಲಿ ಜನರ ನಿವೇಶನ ಮತ್ತು ಭೂಮಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಸಮಸ್ಯೆಗೆ ಸ್ಪಂದಿಸಲಾಗುವುದು ಎಂದಿದ್ದಾರೆ.

ಮೂಡಿಗೆರೆ ತಾಲ್ಲೂಕು ಕಛೇರಿಯಲ್ಲಿ ಹಲವು ಸಮಸ್ಯೆಗಳಿದ್ದು ಜೊತೆಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಆಸನ ವ್ಯವಸ್ಥೆ ಮತ್ತು ಶೌಚಾಲಯ ವ್ಯವಸ್ಥೆಯನ್ನು ಸರಿಪಡಿಸಬೇಕು. ಜನರಿಗೆ ವಿಳಂಬವಾಗದೇ ತ್ವರಿತ ರೀತಿಯಲ್ಲಿ ಕೆಲಸ ಕಾರ್ಯಗಳು ಆಗಬೇಕು ಎಂಬುದು ಜನರ ಅಪೇಕ್ಷೆಯಾಗಿದೆ. ಈ ಎಲ್ಲಾ ವಿಚಾರಗಳ ಕಡೆಗೆ ನೂತನ ತಹಸೀಲ್ದಾರ್ ಅವರು ಗಮನಹರಿಸಬೇಕು ಎಂಬುದು ಜನರ ಆಶಯವಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ