October 5, 2024

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮೂಡಿಗೆರೆಯಲ್ಲಿ ನಡೆಸಲು ಜಿಲ್ಲಾ ಕ.ಸಾ.ಪ. ಕಾರ್ಯಕಾರಿ ಮಂಡಳಿ ತೀರ್ಮಾನಿಸಿದ್ದು, ಈ ಬಗ್ಗೆ ಶನಿವಾರ ಪ್ರಥಮ ಪೂರ್ವಭಾವಿ ಸಭೆಯನ್ನು ನಡೆಸಲಾಯಿತು.

ಮೂಡಿಗೆರೆ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಭಾಂಗಣದಲ್ಲಿ ಜಿಲ್ಲಾ ಕ.ಸಾ.ಪ. ಅಧ್ಯಕ್ಷರಾದ ಸೂರಿ ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು.

ಇದೆ ಮಾರ್ಚ್ 29 ಮತ್ತು 30 ರಂದು ಮೂಡಿಗೆರೆಯ ಅಡ್ಯಂತಾಯ ರಂಗ ಮಂದಿರದಲ್ಲಿ ಎರಡು ದಿನಗಳ ಕಾಲ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೆಳನ ನಡೆಸುವುದಾಗಿ ತೀರ್ಮಾನಿಸಿತು.

ಸಭೆಯಲ್ಲಿ ಮೂಡಿಗೆರೆ ತಾಲೂಕು ಕಸಾಪ ಅಧ್ಯಕ್ಷ ಶಾಂತ ಕುಮಾರ್, ಜಿಲ್ಲಾ ಪ್ರಧಾನ ಸಂಚಾಲಕರಾದ ಮಗ್ಗಲಮಕ್ಕಿಗಣೇಶ್,  ಜಿಲ್ಲಾ ಸಂಚಾಲಕಿ ವಿಶಾಲ ನಾಗರಾಜು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಕ್ಕಿ ಮಂಜು, ತಾಲ್ಲೂಕು ಕಾರ್ಯದರ್ಶಿಗಳಾದ ಪ್ರಕಾಶ್, ಅರ್.ನಾರಾಯಣ, ತಾಲ್ಲೂಕು ಪ್ರದಾನ ಸಂಚಾಲಕರಾದ ಡಿ.ಕೆ. ಲಕ್ಷ್ಮಣಗೌಡ, ಮಹಿಳಾ ಘಟಕದ ಅಧ್ಯಕ್ಷೆ ಅನಿತಾ ಜಗದೀಪ್, ಮೂಡಿಗೆರೆ ತಾಲ್ಲೂಕು ಮತ್ತು ವಿವಿಧ ಹೋಬಳಿ ಕ.ಸಾ.ಪ. ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮೂಡಿಗೆರೆ ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್. ಬಾಲಕೃಷ್ಣ, ವಿವಿಧ ಸಂಘಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿ ಶನಿವಾರ ಮೂಡಿಗೆರೆಯ ಶಾಸಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಜೆ 4.ಗಂಟೆಗೆ ಪೂರ್ವಬಾವಿ ಸಭೆ ನಡೆಸಲಾಗುತ್ತಿದ್ದು, ಆಸಕ್ತ ಕನ್ನಡ ಅಭಿಮಾನಿಗಳು ಭಾಗವಹಿಸಿ ಸಲಹೆ ಸಹಕಾರ ನೀಡಬೇಕೆಂದು ತಾಲ್ಲೂಕು ಅಧ್ಯಕ್ಷರಾದ ಶಾಂತಕುಮಾರ್ ತಿಳಿಸಿದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ