October 5, 2024

ಇವತ್ತು ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಆಡಳಿತ ಕಾಂಗ್ರೇಸ್ ಪಕ್ಷ 3 ಸ್ಥಾನಗಳನ್ನು ಗೆದ್ದುಕೊಂಡಿದೆ. ಬಿ.ಜೆ.ಪಿ. 1 ಸ್ಥಾನ ಗಳಿಸಿಕೊಂಡಿದೆ. ಬಿ.ಜೆ.ಪಿ. ಇಬ್ಬರು ಶಾಸಕರು ಆ ಪಕ್ಷಕ್ಕೆ ಕೈ ಕೊಟ್ಟಿದ್ದಾರೆ.

ನಾಲ್ಕು ಸ್ಥಾನಗಳಿಗೆ ಒಟ್ಟು ಐದು ಮಂದಿ ಕಣದಲ್ಲಿದ್ದರು. ಬಿ.ಜೆ.ಪಿ-ಜೆ.ಡಿ.ಎಸ್. ಮೈತ್ರಿ ಅಭ್ಯರ್ಥಿಯಾಗಿದ್ದ ಕಣದಲ್ಲಿದ್ದ ಐದನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೋಲನುಭವಿಸಿದ್ದಾರೆ.

ಕಾಂಗ್ರೆಸ್​ನ ಅಜಯ್ ಮಕೇನ್, ನಾಸೀರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್​ ಗೆಲ್ಲುವು ಸಾಧಿಸಿದ್ದಾರೆ. ಇನ್ನು ನಿರೀಕ್ಷೆಯಂತೆ ಬಿಜೆಪಿಯ ನಾರಾಯಣಸಾ ಭಾಂಡಗೆ ಅವರು ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ನ ಅಜಯ್ ಮಾಕೇನ್ -47, ನಾಸೀರ್ ಹುಸೇನ್ – 47, ಜಿ.ಸಿ. ಚಂದ್ರಶೇಖರ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ.

ಇನ್ನು ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ಜೆಡಿಎಸ್​​ನ 19 ಮತಗಳು ಬಿದ್ದಿದ್ದರೆ, ಮಿತ್ರ ಪಕ್ಷ ಬಿಜೆಪಿಯಿಂದ 16 ಮತಗಳು ಮಾತ್ರ ಬಿದ್ದಿವೆ. ಈ ಮೂಲಕ ಕುಪೇಂದ್ರ ರೆಡ್ಡಿ ಸೋಲು ಅನುಭವಿಸಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಶೇ.99.5ರಷ್ಟು ಮತದಾನವಾಗಿದ್ದು, ಒಟ್ಟು 223 ಮತಗಳ ಪೈಕಿ 222 ಶಾಸಕರು ತಮ್ಮ ಮತದಾನ ಮಾಡಿದ್ದಾರೆ. ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಮತದಾನಕ್ಕೆ ಗೈರಾಗಿದ್ದಾರೆ. ಕಾಂಗ್ರೆಸ್‌ ಪಕ್ಷದ 135 ಶಾಸಕರು, ಮೂವರು ಪಕ್ಷೇತರ ಶಾಸಕರು, ಬಿಜೆಪಿಯ 65 ಶಾಸಕರು, ಜೆಡಿಎಸ್‌ನ 19 ಶಾಸಕರು ಸಹ ಮತದಾನ ಮಾಡಿದ್ದಾರೆ.

ಯಶವಂತಪುರ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಸ್ವಪಕ್ಷದ ಅಭ್ಯರ್ಥಿ ಬದಲಿಗೆ ಕಾಂಗ್ರೆಸ್​ ಅಭ್ಯರ್ಥಿಗೆ ಮತ ಹಾಕಿದ್ದರೆ, ಮತ್ತೋರ್ವ ಶಾಸಕ ಶಿವರಾಮ್ ಹೆಬ್ಬಾರ್​ ಮತದಾನಕ್ಕೆ ಗೈರಾಗುವ ಮೂಲಕ ಬಿಜೆಪಿಗೆ ಶಾಕ್ ಕೊಟ್ಟಿದ್ದಾರೆ.

ಈ ಇಬ್ಬರು ಶಾಸಕರ ವಿರುದ್ಧ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ