October 5, 2024

ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯ ವೃದ್ಧಿಸಿಗೊಳ್ಳುವ ಜತೆಗೆ ಸಾಮರಸ್ಯ ಭಾವನೆ ರೂಡಿಸಲು ಕ್ರೀಡೆ ಸಹಕಾರಿಯಾಗುತ್ತದೆ ಎಂದು ಮೂಡಿಗೆರೆ ಜೇಸಿ ಲೇಡಿ ಅಧ್ಯಕ್ಷೆ ದಿವ್ಯ ಸುಪ್ರಿತ್ ಹೇಳಿದರು.

ಅವರು ಭಾನುವಾರ ಮೂಡಿಗೆರೆ ಪಟ್ಟಣದ ಯೂರೋಕಿಡ್ಸ್ ಶಾಲಾ ಆವರಣದಲ್ಲಿ ಮೂಡಿಗೆರೆ ಜೇಸಿಐ ಮಹಿಳಾ ಘಟಕದ ವತಿಯಿಂದ ಸಾರ್ವಜನಿಕರಿಗೆ ಏರ್ಪಡಿಸಿದ್ದ ತಾಲ್ಲೂಕು ಆಟೋಟ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಸಕ್ತ ಕಾಲಘಟ್ಟದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಕ್ರೀಡಾ ಕ್ಷೇತ್ರದಲ್ಲೂ ಭಾಗವಹಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಪಡೆಯುವ ಮೂಲಕ ಸಾಧನೆಯತ್ತ ಸಾಗುತ್ತಿರುವುದು ಸಂತಸದ ವಿಚಾರ. ಇದಕ್ಕೆ ಪೋಷಕರು ಹಾಗೂ ಪುರುಷರು ಹೆಚ್ಚಾಗಿ ಬೆಂಬಲ ಹಾಗೂ ಪ್ರೋತ್ಸಾಹ ನೀಡುತ್ತಿರುವುದರಿಂದ ಮಹಿಳೆಯರ ಸಾಧನೆಗೆ ಇನ್ನಷ್ಟು ಪುಷ್ಟಿ ಸಿಕ್ಕಿದಂತಾಗಿದೆ. ಹಾಗಾಗಿ ಮಹಿಳೆಯರಲ್ಲಿ ಅಡಗಿರುವ ಎಲ್ಲಾ ಪ್ರತಿಭೆಗಳನ್ನು ಹೊರ ಹಾಕುವ ಮೂಲಕ ಮುಖ್ಯವಾಹಿನಿಗೆ ಬರುವ ಪ್ರಯತ್ನ ಮಾಡಬೇಕೆಂದು ಹೇಳಿದರು.

ಮಹಿಳಾ ದಿನಾಚರಣೆ ಹಿನ್ನಲೆಯಲ್ಲಿ ತಾಲ್ಲೂಕು ಮಟ್ಟದ ಗುಂಡು ಎಸೆತ, ಹಗ್ಗ ಜಗ್ಗಾಟ, ಥ್ರೋ ಬಾಲ್, ಸ್ಲೋ ಸ್ಕೂಟಿ ರೇಸ್ ಮುಂತಾದ ಸ್ರ‍್ಧೆಗಳನ್ನು ರ‍್ಪಡಿಸಲಾಗಿತ್ತು. ಸ್ರ‍್ಧೆಯಲ್ಲಿ ವಿವಿಧ ಮಹಿಳಾ ಸಂಘಟನೆಯ ಸದಸ್ಯರು ಭಾಗವಹಿಸಿದ್ದರು.

ಜೇಸಿ ಅಧ್ಯಕ್ಷ ಸುಪ್ರಿತ್ ಕಾರಬೈಲ್, ಲೇಡಿ ಜೇಸಿ ಕಾರ್ಯದರ್ಶಿ ಶೃತಿ ದೀಕ್ಷಿತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ