October 5, 2024

ಪರೀಕ್ಷೆ ಮುಗಿಸಿ ಖುಷಿಯಿಂದ ಈಜಲೆಂದು ನದಿಗೆ ಹೋಗಿ ನಾಪತ್ತೆಯಾಗಿದ್ದ ನಾಲ್ಕು ಮಕ್ಕಳ ಶವಗಳು   ಪತ್ತೆಯಾಗಿವೆ.

ಮೃತ ಮಕ್ಕಳು ಮಂಗಳೂರಿನ ಸುರತ್ಕಲ್‌ನ ವಿದ್ಯಾದಾಯಿನಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದು, ಮಕ್ಕಳ ಪೋಷಕರ ರೋದನ ಮುಗಿಲು ಮುಟ್ಟಿದೆ.

ನದಿಯಲ್ಲಿ ಈಜಾಡಲು ತೆರಳಿದ ಸಂದರ್ಭದಲ್ಲಿ ನದಿನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಶಂಕಿಸಲಾಗಿದೆ. ಮಂಗಳವಾರ ಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ   ಬರೆದು ಮುಗಿಸಿದ್ದ ವಿದ್ಯಾರ್ಥಿಗಳು ಮನೆಗೆ ತೆರಳದೇ ನಾಪತ್ತೆಯಾಗಿದ್ದರು. ಮಕ್ಕಳ ಪೋಷಕರು ಮತ್ತು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಪರೀಕ್ಷೆ ಒತ್ತಡದಿಂದ ಮಕ್ಕಳು ಓಡಿಹೋಗಿರಬಹುದು ಎಂದು ಮೊದಲು ಶಂಕಿಸಲಾಗಿತ್ತು.

ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್‌ಗಳು ಹಾಗೂ ಸಮವಸ್ತ್ರ ಪತ್ತೆಯಾಗಿದ್ದವು. ನದಿಯಲ್ಲಿ ಹುಡುಕಾಟ ನಡೆಸಿದಾಗ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿವೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಅವರ ಪುತ್ರ ರಾಘವೇಂದ್ರ (15), ಸುರತ್ಕಲ್ ಗೊಡ್ಡೆಕೊಪ್ಲ ನಿವಾಸಿ ವಿಶ್ವನಾಥ ಅವರ ಮಗ ನಿರೂಪ(15), ಚಿತ್ರಾಪುರ ನಿವಾಸಿ ದೇವದಾಸ ಅವರ ಪುತ್ರ ಅನ್ವಿತ್ (15) ಸಾವಿಗೀಡಾದ ಮಕ್ಕಳು.

ಮಕ್ಕಳು ನೇರವಾಗಿ ಶಾಲೆಯಿಂದ ಹಳೆಯಂಗಡಿ ನದಿಗೆ ಈಜಾಡಲು ಬಂದಿರುವ ಶಂಕೆ ಇದೆ. ಒಬ್ಬ ಮುಳುಗತೊಡಗಿದಾಗ ರಕ್ಷಿಸಲು ಹೋದ ಉಳಿದವರು ಮುಳುಗಿ ಸತ್ತಿರಬಹುದು ಎಂದು ಶಂಕಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ