October 5, 2024

ಕೇಂದ್ರ ಸರ್ಕಾರವು ದೇಶದ ರೈಲ್ವೆ ನಿಲ್ದಾಣಗಳನ್ನು ವಿಶ್ವಧರ್ಜೆಯ ಮಟ್ಟಕ್ಕೆ ಏರಿಸಲು ಕಾರ್ಯಯೋಜನೆ ರೂಪಿಸಿದ್ದು, ಭಾನುವಾರ ಭಾರತದಾದ್ಯಂತ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿಯವರು ಇದರ ಶಿಲಾನ್ಯಾಸ ಮಾಡಿದರು.

ಚಿಕ್ಕಮಗಳೂರು ರೈಲ್ವೆ ನಿಲ್ದಾಣವು ಈ ಪಟ್ಟಿಗೆ ಸೇರಿದ್ದು. ಇದರ ಶಿಲಾನ್ಯಾಸ ಕಾರ್ಯಕ್ರಮವು ಭಾನುವಾರ ಚಿಕ್ಕಮಗಳೂರು ರೈಲ್ವೆ ನಿಲ್ದಾಣದಲ್ಲಿ  ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ರೈಲ್ವೇ ಸಾರಿಗೆ ಭಾರತದ ಜೀವನಾಡಿಯಾಗಿದೆ. ಜನಸಾಮಾನ್ಯರಿಗೆ ಅತಿಕಡಿಮೆ ವೆಚ್ಚದಲ್ಲಿ ಪ್ರಯಾಣದ ಅನುಕೂಲತೆ ಒದಗಿಸುವ ರೈಲ್ವೇ ಇಲಾಖೆಯನ್ನು ಉನ್ನತ ದರ್ಜೆಗೆ ಏರಿಸಲು ಪ್ರಧಾನಿ ನರೇಂದ್ರ ಮೋದಿಯವರು ಸೂಚನೆ ನೀಡಿ ಅದಕ್ಕೆ ಬೇಕಾದ ಅನುದಾನವನ್ನು ಒದಗಿಸಿದ್ದಾರೆ. ಭಾರತದ ನೂರಾರು ರೈಲ್ವೇ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲು ಕಾರ್ಯಯೋಜನೆ ಸಿದ್ಧವಾಗಿದೆ. ಅದರಂತೆ ನಮ್ಮ ಚಿಕ್ಕಮಗಳೂರು ರೈಲ್ವೇ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅನುಮೋದನೆ ಸಿಕ್ಕಿದ್ದು, ಇದರ ಶಿಲಾನ್ಯಾಸವನ್ನು ನೆರವೇರಿಸಲಾಗಿದೆ.

ಚಿಕ್ಕಮಗಳೂರಿನಿಂದ ಹೆಚ್ಚುವರಿ ರೈಲುಗಳ ಓಡಾಟಕ್ಕಾಗಿ ಕೇಂದ್ರ ಸಚಿವರಿಗೆ ಈಗಾಗಲೇ ಮನವಿ ಮಾಡಲಾಗಿದ್ದು, ಇದಕ್ಕೆ ಕೇಂದ್ರ ಸಚಿವರು ಸ್ಪಂದಿಸಿ ಭರವಸೆ ನೀಡಿದ್ದಾರೆ, ಚಿಕ್ಕಮಗಳೂರು ರೈಲ್ವೆ ನಿಲ್ದಾಣವನ್ನು ಅಮೃತ್ ರೈಲ್ವೆ ನಿಲ್ದಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಲು ರೂ. 24 ಕೋಟಿಯನ್ನು ಮೀಸಲಿಡಲಾಗಿದೆ. ಚಿಕ್ಕಮಗಳೂರು ರೈಲು ನಿಲ್ದಾಣಕ್ಕೆ ಲಿಪ್ಟ್ ಸೌಲಭ್ಯ, ಎಕ್ಸಲೇಟರ್ ನಿರ್ಮಿಸಲಾಗುವುದು. ರೈಲು ನಿಲ್ದಾಣದಲ್ಲಿ ಕ್ಯಾಂಟಿನ್ ವ್ಯವಸ್ಥೆ ಮಾಡಲಾಗುವುದು, ಪ್ಲಾಟ್ ಪಾರಂ ಅಭಿವೃದ್ಧಿ ಪಡಿಸಲಾಗುವುದು ಮತ್ತು ಸಿ.ಸಿ ಕ್ಯಾಮರ ಅಳವಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ಹೆಚ್.ಡಿ. ತಮ್ಮಯ್ಯ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ಅಧಿಕಾರಿ ವಿಕ್ರಮ್ ಅಮಾಟೆ,  ಮೈಸೂರು ರೈಲ್ವೆ ವಿಭಾಗದ ಡಿಆರ್‌ಎಂ ಶಿಲ್ಪಿ ಅಗರ್‌ವಾಲ್, ಅರಸೀಕೆರೆ ರೈಲ್ವೆ ವಾಣಿಜ್ಯ ವಿಭಾಗದ ನಿರೀಕ್ಷಕ ಅಂಬರೀಷ್ , ಬಿ.ಜೆ.ಪಿ. ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ