October 5, 2024

ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಕನ್ನಡ ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ (71 ವರ್ಷ) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು  ತೀವ್ರ ಹೃದಯಾಘಾತಕ್ಕೆ ಒಳಗಾಗಿ  ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು. ಬೆಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ದಲಿತ ಕುಟುಂಬದಲ್ಲಿ ಏಪ್ರಿಲ್ 6, 1953 ರಂದು ಜನಸಿದ ಕೆ. ಶಿವರಾಮು 1985 ರಲ್ಲಿ ಕೆಎಎಸ್‌ ಪರೀಕ್ಷೆ ಬರೆದು ಉತ್ತೀರ್ಣರಾದರು. ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್‌ ಪರೀಕ್ಷೆ ಬರೆದು, ತೇರ್ಗಡೆಯಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕ ಪ್ರವೇಶಿಸಿದ್ದ ಕೆ ಶಿವರಾಮ್ , ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿದ್ದರು.

2013 ರಲ್ಲಿ ಬೆಂಗಳೂರು ಪ್ರಾದೇಶಿಕ ಆಯುಕ್ತರಾಗಿ ನಿವೃತ್ತರಾದ    ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ ಶಿವರಾಮ್,  2014 ರಲ್ಲಿ ಜೆ.ಡಿ.ಎಸ್. ಸೇರಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ಮರಳಿ ಕಾಂಗ್ರೇಸ್ ಪಕ್ಷವನ್ನು ಸೇರಿದ್ದ ಅವರು ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಪಕ್ಷವನ್ನು ಸೇರಿದ್ದರು. ಛಲವಾದಿ ಮಹಸಭಾ ರಾಜ್ಯ ಅಧ್ಯಕ್ಷರಾಗಿ ದಲಿತ ಸಮುದಾಯವನ್ನು ಸಂಘಟಿಸುವ ಕಾರ್ಯದಲ್ಲಿ ನಿರತರಾಗಿದ್ದರು.

ಸಮಾಜದಲ್ಲಿ ದಲಿತರು, ನೊಂದವರ ಪವರಾಗಿ ದೊಡ್ಡ ಧ್ವನಿಯಾಗಿ ಕೆಲಸ ಮಾಡುತ್ತಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು.

ಶಿವರಾಂ ಅವರ ಅಂತಿಮ ದರ್ಶನ ನಾಳೆ ಬೆಳಿಗ್ಗೆ 7 ಗಂಟೆಯಿಂದ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಶಿವರಾಂ ಅವರ ನಿಧನಕ್ಕೆ ರಾಜಕೀಯ ಮತ್ತು ಚಿತ್ರರಂಗದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ