October 5, 2024

ಭಾರತೀಯ ಸೇನೆ ಸೇರುವ ತೀವ್ರ ಆಕಾಂಕ್ಷೆ ಹೊತ್ತು ಪರೀಕ್ಷೆ ಎದುರಿಸಿದ್ದ ಯುವಕನೊಬ್ಬ ಸೇನಾ ಪರೀಕ್ಷೆಯಲ್ಲಿ ಅನುತ್ತೀರ್ಣನಾದೆ ಎಂದು ಬೇಸರದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದ ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ.

ಸೇನೆಯಲ್ಲಿ ಸೇವೆ ಸಲ್ಲಿಸಬೇಕು ಎಂದು ತೀವ್ರ ಪ್ರಯತ್ನ ನಡೆಸಿದ್ದ ಕಾರ್ತಿಕ್‌ ಕಳೆದ ಮೂರು ವರ್ಷದಿಂದ ಸೇನಾ ಪರೀಕ್ಷೆಗೆ  ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದ. ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಕ್ರೀಡೆ ಮತ್ತು ಇತರ ಹಲವು ವಿಚಾರಗಳಲ್ಲಿ ತೊಡಗಿಸಿಕೊಂಡಿದ್ದ.

ಇತ್ತೀಚೆಗೆ ಲಿಖಿತ ಪರೀಕ್ಷೆಯೂ ನಡೆದಿತ್ತು. ಒಂದೆರಡು ದಿನದ ಹಿಂದೆ ಅದರ ಫಲಿತಾಂಶ ಬಂದಿತ್ತು. ಕಾರ್ತಿಕ್‌ ಉತ್ತೀರ್ಣನಾಗಿರಲಿಲ್ಲ.  ತನಗೆ ಸೇನೆ ಸೇರುವ ವಯಸ್ಸು ಮುಗಿಯಿತು ಮುಂದೆ ಪ್ರಯತ್ನ ಮಾಡಲು ಆಗುವುದಿಲ್ಲ ಎಂಬ ನೋವಿನಿಂದ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಬುಧವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ʻʻಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ. ನನ್ನ ಮೊಬೈಲ್ ಮೇಲೆ ಸಾಲದ ಇಎಂಐ ಇದೆ ಅದನ್ನು ನನ್ನ ಅಕೌಂಟ್ ನಿಂದಲೇ ಕಟ್ಟಿʼʼ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾನೆ.

ಈ ಬಗ್ಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೇನೆ ಸೇರುವ ಕನಸು ಹೊತ್ತು ಅದು ಕೈಗೂಡದೇ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತ ಯುವಕ ತಾಯಿ ಮತ್ತು ಸಹೋದರನನ್ನು ಅಗಲಿದ್ದಾನೆ. ಗುರುವಾರ ಸ್ವಗ್ರಾಮದಲ್ಲಿ ಅಂತಿಮ ಸಂಸ್ಕಾರ ನೆರವೇರಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ