October 5, 2024

ಮಂಗಳೂರಿನ ಪಣಂಬೂರು ಬೀಚ್‌ನಲ್ಲಿ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಸಿಲುಕಿ ಮೂವರು ಯುವಕರು ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

ಭಾನುವಾರ ರಜಾ ದಿನದ ವಿಹಾರಕ್ಕೆಂದು ಪಣಂಬೂರು ಬೀಚ್ ಗೆ ಬಂದಿದ್ದ ಸಂಜೆ ಸುಮಾರು 6 ಗಂಟೆ ಹೊತ್ತಿಗೆ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಮೂವರು ಯುವಕರು  ಅಲೆಗಳ ಹೊಡೆತಕ್ಕೆ ಸಿಲುಕಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.

ಲೈಫ್ ಗಾರ್ಡ್ ಎಚ್ಚರಿಕೆಯ ಹೊರತಾಗಿಯೂ ಸಮುದ್ರದಲ್ಲಿ ಆಟವಾಡುತ್ತಿದ್ದಾಗ ಅಲೆಗಳ ರಭಸಕ್ಕೆ ಮೂವರು ಯುವಕರು ನಾಪತ್ತೆಯಾಗಿದ್ದು, ಆಲೆಗಳಲ್ಲಿ ಕೊಚ್ಚಿ ಹೋದ ಯುವಕರನ್ನು ಮಿಲನ್(20), ಲಿಖಿತ್(18) ಹಾಗೂ ನಾಗರಾಜ್ (24) ಎಂದು ಗುರುತಿಸಲಾಗಿದೆ.

ಮಿಲನ್‌ ಡೆಲಿವರಿ ಬಾಯ್‌ ಆಗಿ ಕೆಲಸ ಮಾಡುತ್ತಿದ್ದ. ಲಿಖಿತ್‌ ಕೈಕಂಬದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ. ನಾಗರಾಜ್‌ ಬೈಕಂಪಾಡಿಯ ಕಂಪನಿಯಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಶೃಂಗೇರಿ ಮೂಲದ ವೈದ್ಯ ಸೇರಿದಂತೆ ನಾಲ್ವರು ಸೀತಾನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದರು, ಕಳೆದ ವಾರ ಹಳೆಯಂಗಡಿ ಸಮೀಪ ನದಿಯಲ್ಲಿ ಈಜಲು ಹೋಗಿ ಎಸ್.ಎಸ್.ಎಲ್.ಸಿ.ಯ ನಾಲ್ಕು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆಗಳು ಮಾಸುವ ಮುನ್ನವೇ ಈಗ ಮತ್ತೊಂದು ಅನಾಹುತ ಸಂಭವಿಸಿದೆ.

ನೀರಿನಲ್ಲಿ ಮುಳುಗಿ ಸಾವನ್ನಪ್ಪಿತ್ತಿರುವ ಘಟನೆಗಳು ಪದೇ ಪದೇ ಮರುಕಳಿಸುತ್ತಿದೆ. ಸರಿಯಾಗಿ ಈಜು ಬಾರದೇ ನೀರಿಗೆ ಇಳಿಯುವ ಮುನ್ನ ಎಚ್ಚರಿಕೆ ವಹಿಸದೇ ಇದ್ದರೆ ಇಂತಹ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಈ ಬಗ್ಗೆ ವಿದ್ಯಾರ್ಥಿಗಳಿಗೆ ಶಾಲಾ ಕಾಲೇಜಿನಲ್ಲಿಯೇ ಸೂಕ್ತ ಎಚ್ಚರಿಕೆ ಮತ್ತು ಮಾರ್ಗದರ್ಶನ ನೀಡುವ ಅಗತ್ಯವಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ