October 5, 2024

ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿನಿಯರಿಗೆ  ಶಿಕ್ಷಕಿ ಚಿತ್ರಹಿಂಸೆ ನೀಡುತ್ತಿದ್ದು, ಶಿಕ್ಷಕಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಕ್ಕಳ ಪೋಷಕರು ಆಗ್ರಹಿಸಿರುವ ಘಟನೆ ಚಿಕ್ಕಮಗಳರು ನಗರದಲ್ಲಿ ನಡೆದಿದೆ. ನಗರದ   ಅಂಬೇಡ್ಕರ್ ವಸತಿ ಶಾಲೆಯ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗೆ ಮಕ್ಕಳು ಹಾಗೂ ಪೋಷಕರು ದೂರು ನೀಡಿದ್ದಾರೆ.

ಶಿಕ್ಷಕಿ ದೀಪಾ ಎಂಬುವವರ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಯೋಗೀಶ್‌ಗೆ 40 ಮಕ್ಕಳು ದೂರು ನೀಡಿದ್ದಾರೆ. ವಿನಾಕಾರಣ ಮಕ್ಕಳ ಮೇಲೆ ಶಿಕ್ಷಕಿ ಹಲ್ಲೆ ಮಾಡುತ್ತಾರೆ ಎಂದು ಮಕ್ಕಳು ಆರೋಪಿಸಿದ್ದು, ಕಣ್ಣೀರು ಹಾಕಿದ್ದಾರೆ. ಹೀಗಾಗಿ ಶಿಕ್ಷಕಿಯನ್ನು ಅಮಾನತು ಮಾಡುವಂತೆ, ಮೇಲಧಿಕಾರಿಗಳಿಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಪತ್ರ ಬರೆದಿದ್ದಾರೆ.

ಚಿಕ್ಕಮಗಳೂರು ನಗರದಲ್ಲಿರುವ ಅಂಬೇಡ್ಕರ್ ವಸತಿ ಶಾಲೆ ನಡೆಸಲು ಸ್ವಂತ ಕಟ್ಟಡವಿಲ್ಲದೇ ನಗರದಲ್ಲಿ ಕಾಫಿ ಗೋಡೌನ್‌  ಒಂದನ್ನು ಬಾಡಿಗೆಗೆ ಪಡೆದಿದ್ದು,   ಒಂದೇ ಕೊಠಡಿಯಲ್ಲಿ 130ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ವಾಸವಾಗಿದ್ದಾರೆ. ಒಂದು ಕಡೆ ಮೂಲಭೂತ ಸೌಕರ್ಯಗಳ ಕೊರತೆ ಮತ್ತೊಂದು ಕಡೆ ಶಿಕ್ಷಕಿಯಿಂದ ದೌರ್ಜನ್ಯದಿಂದಾಗಿ ವಿದ್ಯಾರ್ಥಿಗಳು ನೊಂದಿದ್ದು, ತಮ್ಮ ನೋವನ್ನು ಅಧಿಕಾರಿಗಳ ಮುಂದೆ ತೋಡಿಕೊಂಡಿದ್ದಾರೆ.

https://youtu.be/_hqPTz8b7Wo?si=wjaFxnkxrmriUQYC

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ