October 5, 2024

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಸಮೀಪ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಾಲ್ವರು ಆರೋಪಿಗಳು ದೋಷಿ ಎಂದು ಚಿಕ್ಕಮಗಳೂರು ತ್ವರಿತಗತಿ ನ್ಯಾಯಾಲಯ ತೀರ್ಪು ನೀಡಿದೆ. 48 ಜನರನ್ನು ಖುಲಾಸೆಗೊಳಿಸಿದ್ದು, ತಪ್ಪಿತಸ್ತರಿಗೆ ಶಿಕ್ಷೆ ಪ್ರಮಾಣವನ್ನು ಮಾರ್ಚ್ 11 ಕ್ಕೆ ಪ್ರಕಟಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಶೃಂಗೇರಿ ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ ತಾಯಿಯೇ ದೋಷಿ ಎಂದು ಚಿಕ್ಕಮಗಳೂರು ಶೀಘ್ರಗತಿ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಕೇಸ್ ನಲ್ಲಿ ಬಂಧನಕ್ಕೆ ಒಳಗಾಗಿದ್ದ 48 ಜನರನ್ನು ಖುಲಾಸೆಗೊಳಿಸಲಾಗಿದ್ದು, ಬಾಲಕಿ ತಾಯಿ ಗೀತ, ದೇವಿಚರಣ್, ಸ್ಮಾಲ್ ಅಭಿ, ಗಿರೀಶ್ ರನ್ನು ತಪ್ಪಿತ್ತಸ್ತರು ಎಂದು ನ್ಯಾಯಾಲಯ ಆದೇಶಿಸಿದೆ.

2021ರ ಫೆಬ್ರುವರಿಯಲ್ಲಿ ನಡೆದ ಈ ಪ್ರಕರಣ ವಿಚಾರಣೆ ಚಿಕ್ಕಮಗಳೂರು ತ್ವರಿತಗತಿ ನ್ಯಾಯಾಲಯದಲ್ಲಿ ಕಳೆದ ಮೂರು ವರ್ಷಗಳಿಂದ ವಿಚಾರಣೆ ನಡೆಯುತ್ತಿತ್ತು,

ಶೃಂಗೇರಿಯ ಗೋಚವಳ್ಳಿ ಸಮೀಪ ಮನೆಯಲ್ಲಿ ಹಣದ ಆಸೆಗೆ ಸ್ವಂತ ತಾಯಿಯೇ ತನ್ನ ಮಗಳನ್ನು ವೇಶ್ಯಾವೃತ್ತಿಗೆ ತಳ್ಳಿದ್ದಳು.  ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಈ ಘಟನೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿತ್ತು, ನೂರಾರು ಜನರನ್ನು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಿಸಲಾಗಿತ್ತು, ಚಿಕ್ಕಮಗಳೂರಿಂದ ವರ್ಗಾವಣೆಗೊಂಡ ಹೆಚ್ಚುವರಿ ಎಸ್ಪಿ ಶೃತಿ ಈ ಕೇಸ್ ನಲ್ಲಿ ಆರೋಪಿಗಳ ಜಾಡು ಹಿಡಿದು ತನಿಖೆ ನಡೆಸಿದ್ದರು. ವಿಷಯ ವಿಧಾನಮಂಡಲದ ಸದನದಲ್ಲಿಯೂ ಚರ್ಚೆಯಾಗಿ ಕೆಲ ಪೊಲೀಸ್ ಅಧಿಕಾರಿಗಳ ಮೇಲೂ ಕ್ರಮ ಜರುಗಿಸಲಾಗಿತ್ತು.  ಆರೋಪಿಗಳಲ್ಲಿ ಕೆಲವರು ರಾಜಕೀಯ ಪಕ್ಷಗಳಲ್ಲಿ ಮತ್ತು ಸಂಘಟನೆಗಳಲ್ಲಿ ಗುರುತಿಸಿಕೊಂಡವರು ಇದ್ದರು.

ಹೆತ್ತ ತಾಯಿಯೇ ತನ್ನ 15 ವರ್ಷದ ಮಗಳನ್ನು ಬಳಸಿಕೊಂಡು ಅನೈತಿಕ ಚಟುವಟಿಕೆಗಳನ್ನು ನಡೆಸುತ್ತಿದ್ದಳು. ತನಗೆ ಮದುವೆಯಾಗಿರುವ ವಿಚಾರ ಗೊತ್ತಾಗಬಾರದು ಎಂಬ ಕಾರಣಕ್ಕೆ ಸುತ್ತಲಿನವರಿಗೆ ಅವಳನ್ನು ನನ್ನ ಅಕ್ಕನ ಮಗಳು ಎಂದು ಹೇಳಿಕೊಂಡು ಆ ಬಾಲಕಿಯನ್ನು ಸಾಕುತ್ತಿದ್ದಳು. ಹೆತ್ತ ತಾಯಿಯೇ ತನ್ನ ಮಗಳ ಮೇಲೆ ಅತ್ಯಾಚಾರ ನಡೆಸಲು ಅವಕಾಶ ಮಾಡಿಕೊಟ್ಟಿದ್ದಾಳೆ ಎಂಬ ವಿಷಯ ಬಯಲಾಗುತ್ತಿದ್ದಂತೆ ಸ್ವತಃ ಪೊಲೀಸರೇ ಬೆಚ್ಚಿಬಿದ್ದಿದ್ದರು.

ಹಾವೇರಿ ಜಿಲ್ಲೆ ಶಿಗ್ಗಾವಿ ಮೂಲದ ಗೀತಾ ಶೃಂಗೇರಿ ಸಮೀಪ ಜಲ್ಲಿ ಕ್ರಸರ್‍ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದಳು ಆಕೆ ತನ್ನ ಗಂಡನನ್ನು ತೊರೆದು ಬಂದಿದ್ದಳು. ಅಲ್ಲಿ ತನ್ನ ಮಗಳೊಂದಿಗೆ ವಾಸವಾಗಿದ್ದಳು. ಮಗಳನ್ನು ತನ್ನ ಅಕ್ಕನ ಮಗಳು ಎಂದು ಪರಿಚಯಿಸುತ್ತಿದ್ದಳು. 10ನೇ ತರಗತಿ ಓದುತ್ತಿದ್ದ ಬಾಲಕಿಯನ್ನು ಜಲ್ಲಿ ಕ್ರಸರ್‍ನಲ್ಲಿ ಲೆಕ್ಕ ಬರೆಯುವುದಕ್ಕೆ          ಸೇರಿಸಿದ್ದಳು. ಅಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಗಿರೀಶ್  ಎಂಬಾತ ಬಾಲಕಿಯನ್ನು ಪುಸಲಾಯಿಸಿ ಅವಳ ಮೇಲೆ ಅತ್ಯಾಚಾರ ನಡೆಸಿದ್ದನು. ನಂತರ ಆತ ತನ್ನ ಸ್ನೇಹಿತ ಅಭಿ ಎಂಬಾತನಿಗೆ ಪರಿಚಯ ಮಾಡಿ ಆತ ಮತ್ತು ಆತನ ಸ್ನೇಹಿತರು ಬಾಲಕಿಯನ್ನು ಬ್ಲಾಕ್‍ಮೇಲ್ ಮಾಡಿ ನಿರಂತರ ಅತ್ಯಾಚಾರ ನಡೆಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿತ್ತು.

ಇದೀಗ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಿದ್ದು, ಬಾಲಕಿಯ ತಾಯಿ ಸೇರಿದಂತೆ ನಾಲ್ವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪು ನೀಡಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ