October 5, 2024

ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇತ್ರದಲ್ಲಿ ಕಳೆದ 50 ವರ್ಷಗಳಿಂದ ಶ್ರೀ ಮಂಜುನಾಥನಿಗೆ ಸೇವೆ ಸಲ್ಲಿಸುತ್ತಿದ್ದ ಲತಾ ಎಂಬ ಹೆಸರಿನ ಆನೆ ನಿಧನ ಹೊಂದಿದೆ.

ಶಿವರಾತ್ರಿ ದಿನದಂದೇ ಶ್ರೀಕ್ಷೇತ್ರ ಧರ್ಮಸ್ಥಳದ ಲತಾ ಹೆಸರಿನ ಆನೆ ಮೃತಪಟ್ಟಿದೆ. ಆನೆ ಲತಾಗೆ 60 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಲತಾ ಮೃತಪಟ್ಟಿದೆ. ಕಳೆದ 50 ವರ್ಷಗಳಿಂದ ಆನೆ ಲತಾ ಶ್ರೀಕ್ಷೇತ್ರ ಧರ್ಮಸ್ಥಳದ ಸೇವೆಯಲ್ಲಿ ನಿರತವಾಗಿತ್ತು.

10 ವರ್ಷದ ಮರಿಯಾಗಿದ್ದಾಗ ಶ್ರೀ ಮಂಜುನಾಥ ಸ್ವಾಮಿಯ ಸೇವೆಗೆ ಸೇರಿದ ಲತಾ ಸುಮಾರು 50 ವರ್ಷಗಳಿಂದ ಧರ್ಮಸ್ಥಳ ಜಾತ್ರಾಮಹೋತ್ಸವದಲ್ಲಿ ಗಾಂಭೀರ್ಯದ ಹೆಜ್ಜೆ ಹಾಕಿ ಭಕ್ತರ ಗಮನವನ್ನು ತನ್ನತ್ತ ಸೆಳೆಯುತ್ತಿತ್ತು. ಧರ್ಮಸ್ಥಳದಲ್ಲಿ ಪ್ರಸ್ತುತ ಲತಾ, ಲಕ್ಷ್ಮೀ ಹಾಗೂ ಶಿವಾನಿ ಎಂಬ ಹೆಸರಿನ ಆನೆಗಳಿದ್ದು, ಲತಾ ಸಾವಿನಿಂದ ಲಕ್ಷ್ಮೀ ಹಾಗೂ ಶಿವಾನಿ ಆನೆಗಳು ಮಂಕಾಗಿವೆ.

ಆನೆ ಸಾವಿನ ಸುದ್ದಿ ತಿಳಿದು ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.  ಧರ್ಮಸ್ಥಳದಲ್ಲಿ ಲತಾಳ ಅಂತ್ಯ ಸಂಸ್ಕಾರ ಸಕಲ ಧಾರ್ಮಿಕ ವಿಧಿವಿದಾನಗಳೊಂದಿಗೆ ನೆರವೇರಲಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ