October 5, 2024

ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಹಳೆಕೋಟೆ ರಮೇಶ್ ಅವರನ್ನು ಶನಿವಾರ ಅವರ ನಿವಾಸದಲ್ಲಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು.

ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, 19ನೇ ಜಿಲ್ಲಾ ಸಮ್ಮೇಳನದ ಕೇಂದ್ರ ಬಿಂದು ಹಳೆಕೋಟೆ ರಮೇಶ್ ಅವರ ಸರಳ ವ್ಯಕ್ತಿತ್ವ, ಸಾಹಿತ್ಯದಲ್ಲಿರುವ ಆಸಕ್ತಿ, ಅವರು ರಚಿಸಿರುವ ಅನೇಕ ಕೃತಿಗಳು ಭಾಷಾಂತರಗೊಂಡಿರುವುದು ಹೆಮ್ಮೆಯ ವಿಚಾರ. ಅಲ್ಲದೇ ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಅರ್ಹ ವ್ಯಕ್ತಿಯಾಗಿದ್ದಾರೆ. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಸಮ್ಮೇಳನ ಯಶಸ್ವಿಯಾಗಲು ಎಲ್ಲಾ ಕನ್ನಡಿಗರು ಹಾಗೂ ಜಿಲ್ಲೆಯ ಜನತೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಬಿ.ಎಸ್. ಜಯರಾಂ ಮಾತನಾಡಿ ಹಳೇಕೋಟೆ ರಮೇಶ್ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸಮಾಜದ ಎಲ್ಲಾ ಸ್ತರದ ಜನರೊಂದಿಗೆ ಅನ್ಯೋನ್ಯತೆಯಿಂದ ಬೆರೆತು ಮಾರ್ಗದರ್ಶನ ನೀಡುತ್ತಿದ್ದಾರೆ. ಸಮಯಕ್ಕೆ ಬಹು ಮಹತ್ವ ನೀಡುತ್ತಾರೆ. ಅವರೊಬ್ಬ ಉತ್ತಮ ಕೃಷಿಕರಾಗಿದ್ದು, ತಮ್ಮ ಕೃಷಿ ಮತ್ತು ಪ್ರವಾಸದ ಅನುಭವಗಳನ್ನು ಸಾಹಿತ್ಯ ಕೃತಿಯಾಗಿ ರೂಪಿಸಿದ್ದಾರೆ ಎಂದರು.

ಸಮ್ಮೇಳನಾಧ್ಯಕ್ಷ ಹಳೆಕೋಟೆ ರಮೇಶ್ ಮಾತನಾಡಿ, ನನ್ನ ಮೇಲೆ ನಂಬಿಕೆ ಇಟ್ಟು ದೊಡ್ಡ ಜವಾಬ್ದಾರಿ ನೀಡಿದ್ದೀರಿ. ಇದಕ್ಕೆ ದಕ್ಕೆಯಾಗದ ರೀತಿಯಲ್ಲಿ ತನ್ನ ಕರ್ತವ್ಯ ನಿಭಾಯಿಸುತ್ತೇನೆ. ಸಾಹಿತ್ಯ ಲೋಕದಲ್ಲಿ ನನ್ನನ್ನು ಬೆಳೆಸಿರುವುದು ಜಿಲ್ಲೆಯ ಜನತೆ, ಸಮ್ಮೇಳನ ಕೂಡ ಯಶಸ್ವಿಯಾಗಿ ನಡೆಯಲು ಸಹಕರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ವಾಗತ ಸಮಿತಿ ಕೋಶಾಧ್ಯಕ್ಷ ಜೆ.ಎಸ್. ರಘು, ಉಪಾಧ್ಯಕ್ಷರಾದ ದೀಪಕ್ ದೊಡ್ಡಯ್ಯ, ಪ್ರಧಾನ ಸಂಚಾಲಕ ಮಗ್ಗಲಮಕ್ಕಿ ಗಣೇಶ್, ಎಸ್.ಎಸ್. ವೆಂಕಟೇಶ್, ಹಳಸೆ ಶಿವಣ್ಣ, ಮಹಿಳಾ ಘಟಕದ ಶ್ರೀಮತಿ ನಿರ್ಮಲ ಮಂಚೇಗೌಡ, ಅನಿತಾ ಜಗದೀಪ್, ಸ್ವಾಗತ ಸಮಿತಿ ಎಲ್ಲಾ ಪದಾಧಿಕಾರಿಗಳು, ಜಿಲ್ಲಾ ಕ.ಸಾ.ಪ. ಪದಾಧಿಕಾರಿಗಳು, ಜಿಲ್ಲೆಯ ವಿವಿಧ ತಾಲ್ಲೂಕುಗಳ ಮತ್ತು ಹೋಬಳಿ ಕ.ಸಾ.ಪ. ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು, ಸಾಹಿತ್ಯಾಸಕ್ತರು, ಹಳೇಕೋಟೆ ರಮೇಶ್ ಕುಟುಂಬ ಸದಸ್ಯರು  ಉಪಸ್ಥಿತರಿದ್ದರು. ಮೂಡಿಗೆರೆ ಕ.ಸಾ.ಪ. ಅಧ್ಯಕ್ಷ ಹೆಚ್.ಎಂ. ಶಾಂತಕುಮಾರ್ ಸ್ವಾಗತಿಸಿ, ಬಕ್ಕಿಮಂಜು ವಂದಿಸಿದರು. ಶ್ರೀಮತಿ ವಿಶಾಲ ನಾಗರಾಜು ವಂದಿಸಿದರು.

 

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ