October 5, 2024

ಮೂಡಿಗೆರೆ ಪಟ್ಟಣದ ಪ್ರಮುಖ ರಸ್ತೆಯೊಂದಕ್ಕೆ ಅಗಲಿದ ನಟ ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಹೆಸರನ್ನು ನಾಮಕರಣ ಮಾಡಲು ಮತ್ತು ಬಡಾವಣೆಯೊಂದಕ್ಕೆ ಗೌತಮ ಬುದ್ಧ ಬಡಾವಣೆ ಎಂದು ನಾಮಕರಣ ಮಾಡಲು ಸರ್ಕಾರ ಅನುಮೋದನೆ ನೀಡಿದೆ.

ಮೂಡಿಗೆರೆ ಪಟ್ಟಣದ ಕ್ಲಾಸಿಕ್ ಐಸ್ ಕ್ರೀಮ್ ನಿಂದ ಛತ್ರಮೈದಾನಕ್ಕೆ ತೆರಳುವು ಪಿಂಟೋ ಮನೆ ವರೆಗಿನ ರಸ್ತೆಗೆ ಡಾ. ಪುನೀತ್ ರಾಜ್ ಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿದೆ. ಹಾಗೆಯೇ ಛತ್ರಮೈದಾನದಲ್ಲಿ ಪೌರಕಾರ್ಮಿಕರು ಹೆಚ್ಚಾಗಿ ವಾಸಿಸುತ್ತಿರುವ ಸ್ಲೀಪರ್ ಕಾಲೋನಿಗೆ ಗೌತಮ ಬುದ್ಧ ಬಡಾವಣೆ ಎಂದು ನಾಮಕರಣ ಮಾಡಲಾಗಿದೆ.

ಈ ಹಿಂದೆ ಜಿ.ಬಿ.ಧರ್ಮಪಾಲ್ ಅವರು ಮೂಡಿಗೆರೆ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಈ ಎರಡು ಹೆಸರುಗಳನ್ನು ಪಟ್ಟಣ ಪಂಚಾಯಿತಿಯಿಂದ ಸರ್ಕಾರಕ್ಕೆ ಶಿಪಾರಸ್ಸು ಮಾಡಿ ಕಳುಹಿಸಲಾಗಿತ್ತು.

ಇದೀಗ ಪಟ್ಟಣ ಪಂಚಾಯಿತಿ ಶಿಪಾರಸ್ಸಿಗೆ ರಾಜ್ಯ ಪೌರಾಡಳಿತ ನಿರ್ದೇಶನಾಲಯದಿಂದ ಅನುಮೋದನೆ ದೊರೆತಿದೆ. ಇದೀಗ ಪಟ್ಟಣ ಪಂಚಾಯಿತಿ ವತಿಯಿಂದ ಈ ಹೆಸರುಗಳನ್ನು ನಾಮಕರಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವಾದ ಮಾರ್ಚ್ 17 ರಂದು ರಸ್ತೆಗೆ ನಾಮಕರಣ ಕಾರ್ಯಕ್ರಮ ಏರ್ಪಡಿಸಲಾಗಿದೆ.

ರಸ್ತೆಗೆ ಮತ್ತು ಬಡಾವಣೆಗೆ ಇಬ್ಬರು ಮಹನೀಯರ ಹೆಸರುಗಳನ್ನು ಶಿಪಾರಸ್ಸು ಮಾಡಿದಾಗ ಅದಕ್ಕೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ದೊರಕಿಸಿಕೊಡಲು ಸಹಕರಿಸಿದ ವಿಧಾನಪರಿಷತ್ ಉಪಸಭಾಪತಿಗಳಾದ ಎಂ.ಕೆ. ಪ್ರಾಣೇಶ್ ಅವರಿಗೆ, ಹಾಲಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮನವರಿಗೆ, ಮೂಡಿಗೆರೆ ಈ ಹಿಂದಿನ ಶಾಸಕರಾಗಿದ್ದ ಎಂ.ಪಿ. ಕುಮಾರಸ್ವಾಮಿಯವರಿಗೆ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮೂಡಿಗೆರೆ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರ ಜಿ.ಬಿ. ಧರ್ಮಪಾಲ್, ಈ ವಾರ್ಡ್‍ಗಳ ಸದಸ್ಯರಾದ ಸುಧೀರ್, ಹೆಚ್.ಪಿ. ರಮೇಶ್, ಮನೋಜ್ ಹಾಗೂ ಪಟ್ಟಣ ಪಂಚಾಯಿತಿ ಎಲ್ಲಾ ಸದಸ್ಯರು ಕೃತಜ್ಞತೆ ಸಲ್ಲಿಸಿದ್ದಾರೆ.

ಮಾರ್ಚ್ 17 ರಂದು ನಾಮಕರಣ ಕಾರ್ಯಕ್ರಮಕ್ಕೆ ಸಾರ್ವಜನಿಕರು, ಪುನೀತ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಬೇಕೆಂದು ಕೋರಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ