October 5, 2024

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಶೃಂಗೇರಿ ಪೋಕ್ಸೋ ಪ್ರಕರಣದಲ್ಲಿ ಚಿಕ್ಕಮಗಳೂರು ನ್ಯಾಯಾಲಯ ನಾಲ್ವರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದೆ. ನಾಲ್ವರಿಗೂ ತಲಾ 25 ಸಾವಿರ ದಂಡ, 20 ವರ್ಷ ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.

ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿಯ  ತಾಯಿ ಸೇರಿದಂತೆ ನಾಲ್ವರನ್ನು ತಪ್ಪಿತಸ್ತರೆಂದು ತೀರ್ಪು ನೀಡಿದ್ದ ನ್ಯಾಯಾಲಯ ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ಬಾಲಕಿಯ ತಾಯಿ  ಗೀತಾ, ಗಿರೀಶ್ , ದೇವಿಶರಣ್ ಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ಪ್ರಮುಖ ಆರೋಪಿ ಅಭಿನಂದನ್ ಅಲಿಯಾಸ್ ಸ್ಮಾಲ್ ಅಭಿಗೆ 22 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

ಅಪ್ರಾಪ್ತ ಮಗಳನ್ನ ತಾಯಿಯೇ ವೇಶ್ಯಾವಾಟಿಕೆಗೆ ದೂಡಿದ್ದ ಪ್ರಕರಣದಲ್ಲಿ ಒಟ್ಟು 53 ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. 2021ರಲ್ಲಿ ಶೃಂಗೇರಿ ಪಟ್ಟಣದ ಸಮೀಪ ನಡೆದಿದ್ದ ಪ್ರಕರಣ. 2020ರ ಸೆಪ್ಟೆಂಬರ್ ನಿಂದ 2021ರ ಜನವರಿವರೆಗೆ  ಅಪ್ರಾಪ್ತ ಬಾಲಕಿಯೋರ್ವರನ್ನು ಬ್ಲಾಕ್ ಮೇಲೆ ಮಾಡಿ ಅತ್ಯಾಚಾರ ಮಾಡಿದ್ದರು. ಬಾಲಕಿಯ ತಾಯಿಯೇ ಅತ್ಯಾಚಾರಕ್ಕೆ ಕುಮ್ಮಕ್ಕು ನೀಡಿದ್ದ ಆರೋಪ ಮೇಲೆ ಪ್ರಕರಣ ದಾಖಲಾಗಿತ್ತು.

ನಾಲ್ಕು ಜನರ ಮೇಲಿನ ಅಪರಾಧವನ್ನ ಸಾಬೀತು ಮಾಡಿದ್ದ ಕೋರ್ಟ್ ಉಳಿದ 49 ಮಂದಿ ಪ್ರಕರಣದಿಂದ ಖುಲಾಸೆ‌ಗೊಳಿಸಿದ್ದ ಕೋರ್ಟ್. ಒಂದೇ ಪ್ರಕರಣದಲ್ಲಿ 38 ವಿವಿಧ ರೀತಿಯ ಚಾರ್ಜ್ ಶೀಟ್ ಸಲ್ಲಿಸಿದ್ದ ಪೊಲೀಸರು, ಚಿಕ್ಕಮಗಳೂರು ಜಿಲ್ಲಾ ಹೆಚ್ಚುವರಿ ಸತ್ರ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ. ನ್ಯಾಯಮೂರ್ತಿ ಶಾಂತಣ್ಣ ಆಳ್ವ ಅವರು ಈ ತೀರ್ಪು ನೀಡಿರುತ್ತಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ