October 5, 2024

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಟಿ.ಹೆಚ್.ಶಿವಶಂಕರಪ್ಪ (61) ಕೊನೆಯುಸಿರೆಳೆದಿದ್ದಾರೆ.

ಅವರು ಬೆಂಗಳೂರಿನ ಜೆ.ಪಿ.ನಗರದ  ಖಾಸಗಿಆಸ್ಪತ್ರೆಯಲ್ಲಿ ಭಾನುವಾರ  ನಿಧನರಾಗಿದ್ದಾರೆ. ಅವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು.

ತನ್ನ ಆರಂಭಿಕ ರಾಜಕೀಯ ಪಯಣವನ್ನು ಕಾಂಗ್ರೆಸ್ ಪಕ್ಷದಲ್ಲಿ  ಪ್ರಾರಂಭಿಸಿದ್ದರು. 2004ರಲ್ಲಿ ಕಾಂಗ್ರೆಸ್ ಪಕ್ಷದಿಂದ ತರೀಕೆರೆ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು.

ತರೀಕೆರೆ ಕ್ಷೇತ್ರದ ಶಾಸಕರಾಗಿದ್ದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕಾಳಜಿ ವಹಿಸಿ ಕೆಲಸ ಮಾಡಿದ್ದರು. ಶ್ರೀ ರೇವಣಸಿದ್ದೇಶ್ವರ ಕುರುಬ ಸಮಾಜದ ಅಧ್ಯಕ್ಷರಾಗಿ ಶ್ರೀ ರೇವಣಸಿದ್ದೇಶ್ವರ ಮಾಂಗಲ್ಯ ಮಂದಿರ ನಿರ್ಮಿಸುವ ಮೂಲಕ ಬಡವರಿಗೆ ಕಡಿಮೆ ದರದಲ್ಲಿ ಸಮುದಾಯ ಭವನದ ಉಪಯೋಗ ಆಗುವಂತೆ ಶ್ರಮ ವಹಿಸಿದರು.

ನಂತರ ಜೆ.ಡಿ.ಎಸ್. ಸೇರಿ ಒಮ್ಮೆ ತರೀಕೆರೆ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿ ಸೋಲನುಭವಿಸಿದ್ದರು. ಇವರು ತರೀಕೆರೆ ಕ್ಷೇತ್ರದಲ್ಲಿ ಜನಾನುರಾಗಿ ನಾಯಕರಾಗಿದ್ದರು. ಶಿವಶಂಕರಪ್ಪ ಪತ್ನಿ, ಓರ್ವ ಪುತ್ರಿ, ಆಪಾರ ಬಂಧುವರ್ಗವನ್ನು ಅಗಲಿದ್ದಾರೆ.

ಇಂದು ತರೀಕೆರೆ ಪಟ್ಟಣದ ಬಯಲು ರಂಗ ಮಂದಿರದಲ್ಲಿ   ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತ್ಯ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅಗಲಿದ ನಾಯಕನ ಅಂತಿಮ ದರ್ಶನಕ್ಕೆ ತರೀಕೆರೆಯಲ್ಲಿ ಪಕ್ಷಬೇಧ ಮರೆತು ಅಪಾರ ಸಂಖ್ಯೆಯ ಜನ ಸೇರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ