October 5, 2024

ಇಂದು ರಾಜ್ಯ ರಾಜಧಾನಿ ಬೆಂಗಳೂರು ಹಲವು ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಯಿತು. ಉಡುಪಿ ಚಿಕ್ಕಮಗಳೂರು ಕ್ಷೇತ್ರಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೇಸ್ ವಲಯದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದವು.

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೇಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕೆ. ಜಯಪ್ರಕಾಶ್ ಹೆಗ್ಡೆಯವರು ಇಂದು ಕಾಂಗ್ರೇಸ್ ಪಕ್ಷವನ್ನು ಸೇರಿದರು. ಅಲ್ಲದೇ ಅವರೊಂದಿಗೆ ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿಯರವರು ಕಾಂಗ್ರೇಸ್ ಪಕ್ಷವನ್ನು ಸೇರಿದರು. ಇದಕ್ಕೂ ಮುನ್ನ ಬೈಂದೂರು ಶಾಸಕ ಸುಕುಮಾರ ಶೆಟ್ಟಿಯವರು ಸಹ ಕಾಂಗ್ರೇಸ್ ಪಕ್ಷವನ್ನು ಸೇರಿದ್ದರು.

ರಾಜ್ಯ ಕಾಂಗ್ರೇಸ್ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಯಪ್ರಕಾಶ್ ಹೆಗ್ಡೆಯವರನ್ನು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೇಸ್ ಪಕ್ಷಕ್ಕೆ ಬರಮಾಡಿಕೊಂಡರು. ಅವರೊಂದಿಗೆ ಮೂಡಿಗೆರೆ ಕ್ಷೇತ್ರ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿಯವರನ್ನು ಡಿ.ಕೆ. ಶಿವಕುಮಾರ್ ಕಾಂಗ್ರೇಸ್ ಪಕ್ಷಕ್ಕೆ ಸ್ವಾಗತಿಸಿದರು.

ಬಿ.ಜೆ.ಪಿ.ಯಿಂದ ಮೂಡಿಗೆರೆ ಕ್ಷೇತ್ರದಲ್ಲಿ ಮೂರು ಬಾರಿ ಶಾಸಕರಾಗಿದ್ದ ಕುಮಾರಸ್ವಾಮಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಜೆ.ಪಿ. ಟಿಕೆಟ್ ವಂಚಿತರಾಗಿದ್ದರು. ನಂತರ ಜೆ.ಡಿ.ಎಸ್. ಪಕ್ಷ ಸೇರಿ ಜೆ.ಡಿ.ಎಸ್. ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೂರನೇ ಸ್ಥಾನ ಪಡೆದಿದ್ದರು.

ಇದೀಗ ಕಾಂಗ್ರೇಸ್ ಪಕ್ಷವನ್ನು ಸೇರುವ ಮೂಲಕ ತಮ್ಮ ರಾಜಕೀಯ ಜೀವನದಲ್ಲಿ ಮತ್ತೊಂದು ತಿರುವು ಪಡೆದುಕೊಂಡಿದ್ದಾರೆ. ಕಳೆದ ಅನೇಕ ತಿಂಗಳಿನಿಂದ ಎಂ.ಪಿ. ಕುಮಾರಸ್ವಾಮಿಯವರು ಕಾಂಗ್ರೇಸ್ ಪಕ್ಷ ಸೇರುತ್ತಾರೆ ಎಂಬ ಊಹಾಪೋಹಗಳು ಇದ್ದವು. ಯಡಿಯೂರಪ್ಪನವರು ಬಿ.ಜೆ.ಪಿ.ಯಲ್ಲಿ ಹಿಡಿತ ಸಾಧಿಸಿರುವುದರಿಂದ ಯಡಿಯೂರಪ್ಪನವರ ಕಟ್ಟಾ ಅನುಯಾಯಿಯಾಗಿರುವ ಕುಮಾರಸ್ವಾಮಿ ಮರಳಿ ಬಿ.ಜೆ.ಪಿ.ಗೆ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಇಂದು ಅಧಿಕೃತವಾಗಿ ಕಾಂಗ್ರೇಸ್ ಪಕ್ಷಕ್ಕೆ ಸೇರುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮೂಡಿಗೆರೆ ಕ್ಷೇತ್ರದಲ್ಲಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ತನ್ನದೇ ಆದ ಪ್ರಭಾವ ಹೊಂದಿರುವ ಎಂ.ಪಿ. ಕುಮಾರಸ್ವಾಮಿಯವರ ಪಕ್ಷ ಸೇರ್ಪಡೆಯಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೇಸ್ ಒಂದಷ್ಟು ಲಾಭವಾಗಬಹುದು ಎಂದು ನೀರಿಕ್ಷಿಸಲಾಗಿದೆ. ಈ ಕಾರಣದಿಂದಲೇ ಕಾಂಗ್ರೇಸ್ ವರಿಷ್ಟರು ಕುಮಾರಸ್ವಾಮಿಯವರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲು ಆಸಕ್ತಿ ತೋರಿದ್ದರು ಎನ್ನಲಾಗಿದೆ.

ಕುಮಾರಸ್ವಾಮಿ ಕಾಂಗ್ರೇಸ್ ಸೇರ್ಪಡೆ ಸಂದರ್ಭದಲ್ಲಿ ಮುಖಂಡರಾದ ಬಿ.ಎಲ್. ಶಂಕರ್, ಬಿ.ಎನ್. ಚಂದ್ರಪ್ಪ, ಆಯನೂರು ಮಂಜುನಾಥ್, ಶಾಸಕರಾದ ಟಿ.ಡಿ. ರಾಜೇಗೌಡ, ಹೆಚ್.ಡಿ. ತಮ್ಮಯ್ಯ, ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಡಾ. ಅಂಶುಮಂತ್, ಮುಖಂಡರಾದ ಡಿ.ಎಲ್. ವಿಜಯಕುಮಾರ್, ಸುಧೀರ್ ಕುಮಾರ್ ಮುರೋಳ್ಳಿ ಮುಂತಾದವರು ಉಪಸ್ಥಿತರಿದ್ದರು.

https://youtu.be/aLX98oT5i9U?si=QdsFTOimdGXrGLSd

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ