October 5, 2024

ಕಾಫಿ ಬೆಳೆಗಾರರ ಸರ್ಕಾರಿ ಸಾಗುವಳಿ ಜಮೀನನ್ನು ರಾಜ್ಯ ಸರ್ಕಾರವು ಗುತ್ತಿಗೆ ಆಧಾರದಲ್ಲಿ ನೀಡಲು ಆದೇಶ ಮಾಡಿದ್ದು ಇದಕ್ಕೆ ಕಾರಣಕರ್ತರಾದ ರಾಜಕಾರಣಿಗಳನ್ನು ದಿನಾಂಕ 17.3.2024ನೇ ಭಾನುವಾರ   ಕರ್ನಾಟಕ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳು ಭೇಟಿ ಮಾಡಿ ಅಭಿನಂದಿಸಿದರು.

ವಿಧಾನ ಪರಿಷತ್ ಉಪಸಭಾಪತಿಗಳಾದ  ಎಂ. ಕೆ ಪ್ರಾಣೇಶ್, ಶೃಂಗೇರಿ ಕ್ಷೇತ್ರದ ಶಾಸಕರಾದ   ಟಿ.ಡಿ ರಾಜೇಗೌಡ , ಚಿಕ್ಕಮಗಳೂರು ಕ್ಷೇತ್ರದ ಶಾಸಕರಾದ ಹೆಚ್.ಡಿ. ತಮ್ಮಯ್ಯ, ಚಿಕ್ಕಮಗಳೂರು ಕ್ಷೇತ್ರದ ಮಾಜಿ ಶಾಸಕರಾದ  ಸಿ.ಟಿ. ರವಿ, ಮಾಜಿ ಮಂತ್ರಿಗಳಾದ ಶ್ರೀಮತಿ ಮೋಟಮ್ಮ  ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರನ್ನು  ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಿ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ಬೆಳೆಗಾರರ ಒಕ್ಕೂಟದ ಅಧ್ಯಕ್ಷರಾದ ಡಾ. ಹೆಚ್ .ಟಿ ಮೋಹನ್ ಕುಮಾರ್,  ಖಜಾಂಚಿಗಳಾದ ಹೆಚ್. ಎಂ. ಉಮೇಶ್, ಉಪಾಧ್ಯಕ್ಷರಾದ ಎ.ಕೆ ವಸಂತೇಗೌಡ , ಮಾಜಿ ಅಧ್ಯಕ್ಷರಾದ ಬಿ .ಎಸ್ ಜಯರಾಮ್, ಕೋಮಾರ್ಕ್ ನ ಮಾಜಿ ಅಧ್ಯಕ್ಷರಾದ ಡಿ.ಎಸ್. ರಘು, ಕೆಜಿಎಫ್ ಮಾಜಿ ಸಂಘಟನಾ ಕಾರ್ಯದರ್ಶಿ ಎಚ್ .ಪಿ ರೇವಣ್ಣಗೌಡ, ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಗೌರವ ಕಾರ್ಯದರ್ಶಿ ಕೆ. ಡಿ ಮನೋಹರ್, ಹಾನುಬಾಳು ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಎಂ. ವಿ .ರತ್ನಾಕರ್, ಗೌರವ ಕಾರ್ಯದರ್ಶಿ ನೂತನ್, ವಸ್ತಾರೆ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ  ಟಿ.ಡಿ ಮಲ್ಲೇಶ್, ಗೌರವ ಕಾರ್ಯದರ್ಶಿ ಕೆ .ಯು  ರತಿಶ್, ಅವತಿ ಹೋಬಳಿ ಬೆಳೆಗಾರರ ಸಂಘದ ಅಧ್ಯಕ್ಷ ಶ್ರೀಧರ್, ಸಹ್ಯಾದ್ರಿ ಬೆಳೆಗಾರರ ಸಂಘದ ಮಾಜಿ ಅಧ್ಯಕ್ಷರಾದ ಎಂ.ಕೆ ಸುಂದರೇಶ್, ಖಾಂಡ್ಯ ಹೋಬಳಿ ಬೆಳೆಗಾರರ ಸಂಘದ ಗೌರವ ಕಾರ್ಯದರ್ಶಿ ರತ್ನಾಕರ್, ಹಾಗೂ ಇತರೆ ಸ್ಥಳಿಯ ಬೆಳೆಗಾರರು ಈ ಕಾರ್ಯಕ್ರಮದಲ್ಲಿ ಇದ್ದು ಅಭಿನಂದನೆ ಸಲ್ಲಿಸಿದರು.

ಹಾಗೂ ಮುಂದಿನ ದಿನಗಳಲ್ಲಿ ಮಲೆನಾಡು ಭಾಗದ ಎಲ್ಲಾ ಶಾಸಕರು, ಮಾಜಿ ಶಾಸಕರುಗಳು ಮತ್ತು ಎಲ್ಲಾ ರಾಜಕಾರಣಿಗಳನ್ನು ಭೇಟಿ ಮಾಡಿ ಸನ್ಮಾನಿಸಲಾಗುವುದು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ