October 5, 2024

ಬರಗಾಲದಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರ, ಬೆಳಗಾವಿ, ಬೀದರ್‌, ಧಾರವಾಡ, ಕಲಬುರಗಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್‌ 20 ರಿಂದ 24 ರವವರೆಗೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಮಾರ್ಚ್‌ 20ರ ಬಳಿಕ 23ರ ವರೆಗೆ ರಾಜ್ಯದ ನಾನಾ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮಾರ್ಚ್‌ 20 ರಂದು ಬೆಂಗಳೂರು, ಚಾಮರಾಜನಗರ ಸೇರಿದಂತೆ ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾದರೆ ಮಾರ್ಚ್‌ 22 ರ ಬಳಿಕ ಕರಾವಳಿ ಜಿಲ್ಲೆಗಳಲ್ಲಿಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

ಈಗಾಗಲೇ ಕಳೆದ ಮೂರ್ನಾಲ್ಕು ದಿನಗಳಿಂದ ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಮೈಸೂರು ಜಿಲ್ಲೆಗಳ ಕೆಲವು ಕಡೆ ಹಾಗೂ ಉತ್ತರ ಒಳನಾಡಿನ ಕಲಬುರಗಿ, ಬೀದರ್‌ ಜಿಲ್ಲೆಗಳ ಕೆಲ ತಾಲೂಕುಗಳಲ್ಲಿ ವರ್ಷದ ಮೊದಲ ವರ್ಷಧಾರೆಯಾಗಿದೆ.

ಬಿರುಬೇಸಿಗೆಯಿಂದ ಕಾದ ಕಾವಲಿಯಂತಾಗಿರುವ ಭೂಮಿಗೆ ಮಳೆರಾಯ ತಂಪನೆರೆಯಲಿದ್ದಾನೆ ಎಂಬ ಮುನ್ಸೂಚನೆ ದೊರೆತ್ತಿದ್ದು, ಜನರಲ್ಲಿ ಭರವಸೆ ಮೂಡಿಸಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ