October 5, 2024

ಕರ್ನಾಟಕ ರಾಜ್ಯಾದ್ಯಂತ   ಪೊಲೀಸರು   ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು   ಎಂದು ರಾಜ್ಯ ಸರ್ಕಾರ   ಆದೇಶ ಹೊರಡಿಸಿದೆ. ಇತ್ತೀಚೆಗೆ ಪೊಲೀಸ್‌ ಸಿಬ್ಬಂದಿ ಬೈಕ್‌ನಿಂದ ಬಿದ್ದು   ಮೃತಪಡುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಎಲ್ಲ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿಗಳು   ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಸಂಚಾರಿ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿಯಾಗಿರುವ ಅಲೋಕ್ ಕುಮಾರ್  ಅವರು ಈ ಕುರಿತಂತೆ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್‌ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕಲವರು ಮೃತಪಟ್ಟಿರುವ ಘಟನಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ. ಹೀಗಾಗಿ ಹೆಲ್ಮೆಟ್‌ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಮುಂದೆ ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮೆಟ್‌ ಧರಿಸಬೇಕು.

ಕೇವಲ ಧರಿಸುವುದಲ್ಲ. ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮೆಟನ್ನು ಧರಿಸಿ, ಅದನ್ನು ಭದ್ರವಾಗಿ ಕಟ್ಟಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ