October 5, 2024

ಕಾಂಗ್ರೇಸ್ ಮುಂಬರುವ ಲೋಕಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ, ಅರುಣಾಚಲ ಪ್ರದೇಶ , ಗುಜರಾತ್, ಮಹಾರಾಷ್ಟ್ರ, ರಾಜಸ್ಥಾನ, ತೆಲಂಗಾಣ, ಪಶ್ಚಿಮ ಬಂಗಾಳ, ಪುದುಚೇರಿ ರಾಜ್ಯಗಳ ಲೋಕಸಭಾ ಕ್ಷೇತ್ರಗಳ ಒಟ್ಟು 57 ಅಭ್ಯರ್ಥಿಗಳ ಪಟ್ಟಿಯನ್ನು  ಕಾಂಗ್ರೆಸ್​ ಗುರುವಾರ ರಾತ್ರಿ ಪ್ರಕಟಿಸಿದೆ.ಇದರಲ್ಲಿ ಕರ್ನಾಟಕದ  17 ಅಭ್ಯರ್ಥಿಗಳ ಹೆಸರನ್ನು ಸಹ ಅಂತಿಮಗೊಳಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ‘ಕೇಂದ್ರ ಚುನಾವಣಾ ಸಮಿತಿ’ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರುಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಪೋಸ್ಟ್ ನಲ್ಲಿ ತಿಳಿಸಿದೆ.   ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರು ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದಾರೆ.

ರಾಜ್ಯದ ಐವರು ಸಚಿವರ ಮಕ್ಕಳು ಅಖಾಡಕ್ಕೆ, ಖರ್ಗೆಯವರ ಅಳಿಯ ಕಲ್ಬುರ್ಗಿಯಿಂದ ಕಣಕ್ಕೆ

ಮೊದಲ ಹಂತದಲ್ಲಿ  ರಾಜ್ಯದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದ ಕಾಂಗ್ರೇಸ್ ಇದೀಗ  ಎರಡನೇ ಪಟ್ಟಿ ಬಿಡುಗಡೆಗೊಳಿಸಿದೆ. ಇದರಲ್ಲಿ 17 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದೆ.

ಈ ಪಟ್ಟಿಯಲ್ಲಿ ರಾಜ್ಯದ ಐವರು ಹಾಲಿ ಸಚಿವರ ಮಕ್ಕಳಿಗೆ ಟಿಕೆಟ್ ನೀಡಲಾಗಿದೆ.  ಬೆಳಗಾವಿ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್,‌ ಚಿಕ್ಕೋಡಿಯಿಂದ ಸತೀಶ್‌ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಮತ್ತು ಬೀದರ್‌ನಿಂದ ಈಶ್ವರ್‌ ಖಂಡ್ರೆ ಅವರ ಪುತ್ರ ಸಾಗರ್‌ ಖಂಡ್ರೆ, ಬೆಂಗಳೂರು ದಕ್ಷಿಣದಿಂದ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ಬಾಗಲಕೋಟೆಯಿಂದ ಶಿವಾನಂದ ಪಾಟೀಲ್‌ ಪುತ್ರಿ ಸಂಯುಕ್ತಾ ಪಾಟೀಲ್‌ ಅವರನ್ನು ಕಣಕ್ಕಿಳಿಸಲಾಗಿದೆ.

ಅದಲ್ಲದೇ ದಾವಣಗೆರೆಯಿಂದ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪತ್ನಿ ಪ್ರಭಾ ಮಲ್ಲಿಕಾರ್ಜುನ್‌, ಕಲ್ಬುರ್ಗಿಯಿಂದ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮಾರ್ಚ್‌ 8ರಂದು ಬಿಡುಗಡೆಯಾದ ಮೊದಲ ಪಟ್ಟಿಯಲ್ಲಿ ಏಳು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದ ಕಾಂಗ್ರೆಸ್‌ ಎರಡನೇ ಪಟ್ಟಿಯಲ್ಲಿ 17 ‌ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಇನ್ನು ನಾಲ್ಕು ಕ್ಷೇತ್ರಗಳ ಟಿಕೆಟ್‌ ಘೋಷಣೆ ಬಾಕಿ ಇದೆ.

ಎರಡನೇ ಪಟ್ಟಿಯಲ್ಲಿರುವ 17 ಕ್ಷೇತ್ರಗಳ ಅಭ್ಯರ್ಥಿಗಳು

ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ

ಬೆಂಗಳೂರು ಕೇಂದ್ರ- ಮನ್ಸೂರ್ ಅಲಿಖಾನ್
ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ
ಮೈಸೂರು – ಕೊಡಗು – ಎಂ.ಲಕ್ಷ್ಮಣ್
ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
ದಕ್ಷಿಣ ಕನ್ನಡ – ಪದ್ಮರಾಜ್
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
ಬಾಗಲಕೋಟೆ – ಸಂಯುಕ್ತಾ ಶಿವಾನಂದ ಪಾಟೀಲ್

ರಾಯಚೂರು – ಕುಮಾರ್ ನಾಯಕ್
ಚಿತ್ರದುರ್ಗ – ಬಿ.ಎನ್‌. ಚಂದ್ರಪ್ಪ
ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್
ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ
ಹುಬ್ಬಳ್ಳಿ-ಧಾರವಾಡ – ವಿನೋದ್ ಅಸೂಟಿ
ಬೀದರ್ – ಸಾಗರ್‌ ಖಂಡ್ರೆ
ಕೊಪ್ಪಳ – ರಾಜಶೇಖರ್ ಹಿಟ್ನಾಳ್
ದಾವಣಗೆರೆ – ಡಾ.ಪ್ರಭಾ ಮಲ್ಲಿಕಾರ್ಜುನ್

ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ

ಮೊದಲ ಪಟ್ಟಿಯಲ್ಲಿ ಘೋಷಣೆಯಾದ ಏಳು ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳು

ತುಮಕೂರು – ಮುದ್ದಹನುಮೇಗೌಡ

ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್

ಹಾಸನ – ಶ್ರೇಯಸ್ ಪಟೇಲ್

ವಿಜಯಪುರ – ರಾಜು ಆಲಗೂರು

ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು)

ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್

ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ

ಅಭ್ಯರ್ಥಿ ಘೋಷಣೆಗೆ ಬಾಕಿ ಇರುವ ಕ್ಷೇತ್ರಗಳು :

ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಬಳ್ಳಾರಿ

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ