October 5, 2024

ಮೂಡಿಗೆರೆ ಇಂದು ಮತ್ತು ನಾಳೆ (ಮಾರ್ಚ್ 29 ಮತ್ತು 30) ಎರಡು ದಿನಗಳ ಕಾಲ ಸಾಹಿತ್ಯ ಸಂಭ್ರಮಕ್ಕೆ ವೇದಿಕೆ ಸಜ್ಜಾಗಿದೆ.

ಚಿಕ್ಕಮಗಳೂರು ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಮೂಡಿಗೆರೆ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಆಯೋಜನೆಗೊಂಡಿದೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸಮ್ಮೇಳನದ ಸ್ವಾಗತ ಸಮಿತಿ ವತಿಯಿಂದ ಸಮ್ಮೇಳನಕ್ಕೆ ಸಕಲ ಸಿದ್ಧತೆ ನಡೆಸಲಾಗಿದೆ.

ತಾಲ್ಲೂಕಿನ ಹಿರಿಯ ಸಾಹಿತಿ, ಪ್ರಗತಿಪರ ರೈತ ಶ್ರೀ ಹಳೇಕೋಟೆ ರಮೇಶ್ ಅವರು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸುತ್ತಿದ್ದಾರೆ.

ಇಂದು ಬೆಳಿಗ್ಗೆ   ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್ ರವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಸಮ್ಮೇಳನಕ್ಕೆ ಚಾಲನೆ ನೀಡುವರು. ಚಂದನ್ ಗ್ರೂಪ್ಸ್‌ನ ಮಂಚೇಗೌಡ ಅವರು ಸಮ್ಮೇಳನಾಧ್ಯಕ್ಷರ ಮೆರವಣಿಗೆ ಉದ್ಘಾಟಿಸುವರು ಪ್ರತಿಷ್ಠಿತ ಆಳ್ವಾಸ್ ವಿದ್ಯಾಸಂಸ್ಥೆ ಮುಖ್ಯಸ್ಥ ಡಾ|| ಮೋಹನ್ ಆಳ್ವ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

2 ದಿನದ ಕಾರ್ಯಕ್ರಮದಲ್ಲಿ ಅನ್ನದಾತರ ಅಳಲು ಅಕ್ಷೇಪಗಳು, ವರ್ತಮಾನದಲ್ಲಿ ಮಹಿಳೆ, ಕನ್ನಡ ಚಳುವಳಿಯ ಪರಿಣಾಮಗಳು, ನದಿ ಪಾತ್ರಗಳ ಬಗ್ಗೆ ಸಂವಾದ ವಿಚಾರ ಸಂಕಿರಣ ಜಾನಪದ ಪ್ರಕಾರಗಳು ಹಾಗೂ ಕವಿಗೋಷ್ಠಿ ಕಾರ್ಯಕ್ರಮ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಸಮ್ಮೇಳನದಲ್ಲಿ ಕೊಡಲಾಗುವ ಸಾಹಿತ್ಯ ಸಿರಿ ಪ್ರಶಸ್ತಿಯನ್ನು ಎ.ಎಲ್ ಶಂಕರ ನಾರಾಯಣ, ದೀಪಾ ಹಿರೇಗುತ್ತಿ ಇವರಿಗೆ ನೀಡಲಾಗುವುದು. ಸಾಹಿತ್ಯ ಪರಿಷತ್‌ನಿಂದ ಮೊದಲ ಭಾರಿಗೆ ಕೊಡಲಾಗುತ್ತಿರುವ ಕನ್ನಡ ಶ್ರೀ ಪ್ರಶಸ್ತಿಯನ್ನು ಮಡ್ಡೀಕೆರೆ ಗೋಪಾಲ್, ಸತ್ಯನ್ ಅವರಿಗೆ ನೀಡಲಾಗುತ್ತಿದ್ದು, ಪ್ರತಿ ತಾಲ್ಲೂಕಿಗೆ ಇಬ್ಬರಂತೆ ಜಿಲ್ಲಾ ಮಟ್ಟದ ಕನ್ನಡ ಸಿರಿ ಪ್ರಶಸ್ತಿ ನೀಡಲಾಗುತ್ತಿದೆ.

ಸಮ್ಮೇಳನದಲ್ಲಿ ಜಿಲ್ಲೆಯ ಉದಯೋನ್ಮುಖ ಸಾಹಿತಿಗಳ ಆರು ಪುಸ್ತಕಗಳು ಬಿಡುಗಡೆಯಾಗುತ್ತಿವೆ.

ಶನಿವಾರ ಸಂಜೆ ಸಮಾರೋಪ ಸಮಾರಂಭ ನಡೆಯಲಿದ್ದು  ಈ ಎಲ್ಲಾ ಕಾರ್ಯಕ್ರಮಗಳಲ್ಲಿ ನಾಡಿನ ಹೆಸರಾಂತ ಸಾಹಿತಿಗಳು ಭಾಗವಹಿಸಲಿದ್ದಾರೆ.

ಎರಡೂ ದಿನ ಸಂಜೆ ವೈವಿದ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶುಕ್ರವಾರ ರಾತ್ರಿ ಸ್ಥಳೀಯ ಪ್ರಶಸ್ತಿ ವಿಜೇತ ನೃತ್ಯ ತಂಡಗಳಿಂದ ಸಾಂಸ್ಕೃತಿಕ ಪ್ರದರ್ಶನ ಹಾಗೂ ಶನಿವಾರ ರಾತ್ರಿ ಮಂಗಳೂರಿನ ಜ್ಞಾನ ಐತಾಳ ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸಮ್ಮೇನದಲ್ಲಿ ರಾಜ್ಯದ ಹೆಸರಾಂತ ಪುಸ್ತಕ ಪ್ರಕಾಶನದ ಪುಸ್ತಕ ಮಳಿಗೆ ಇರಲಿವೆ. ಜೊತೆಗೆ ಸ್ಥಳೀಯ ಉತ್ಪನ್ನಗಳ ಮಳಿಗೆ, ಆಹಾರ ಮಳಿಗೆಗಳು ಇರಲಿವೆ.

ಸಮ್ಮೇಳನದಲ್ಲಿ ಭಾಗವಹಿಸುವವರಿಗೆ ಪಟ್ಟಣದ ಅಯ್ಯಪ್ಪಸ್ವಾಮಿ ದೇವಾಲಯದ ಆವರಣದಲ್ಲಿ ಭೋಜನ ವ್ಯವಸ್ಥೆ ಮಾಡಲಾಗಿದೆ.

ಒಟ್ಟಾರೆ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಮೂಡಿಗೆರೆ ಸಿಂಗಾರಗೊಂಡಿದ್ದು, ಎರಡೂ ದಿನಗಳ ಕಾರ್ಯಕ್ರಮಗಳಲ್ಲಿ ಸಾಹಿತ್ಯ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನ ಯಶಸ್ವಿಗೊಳಿಸುವಂತೆ ಸ್ವಾಗತ ಸಮಿತಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ