October 5, 2024

ಹಿಟ್‌ ಆ್ಯಂಡ್ ರನ್‌ ಕೇಸ್‌ಗೆ ಮಾವ-ಅಳಿಯ ಬಲಿಯಾಗಿದ್ದು ಮಗಳು ತೀವ್ರ ಗಾಯಗೊಂಡಿರುವ ಘಟನೆ ನಡೆದಿದೆ.   ಹಾಸನ   ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ, ಶೆಟ್ಟಿಹಳ್ಳಿ ಬೈಪಾಸ್‌ನಲ್ಲಿ ಅಪಘಾತ  ಸಂಭವಿಸಿದೆ.

ಅರಸೀಕೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದ ಮಧು (35), ಬೇಲೂರು ತಾಲೂಕಿನ ದೇವಿಹಳ್ಳಿ ಗ್ರಾಮದ ಜವರಯ್ಯ (65) ಮೃತ ದುರ್ದೈವಿ. ಮಧು ಅವರ ಪತ್ನಿ ಗೀತಾ ತೀವ್ರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಪತ್ನಿ ಹಾಗೂ ಮಾವನ ಜತೆಗೆ ಕಾರಿನಲ್ಲಿ ಮಧು ಬರುತ್ತಿದ್ದರು. ಶೆಟ್ಟಿಹಳ್ಳಿ ಬೈಪಾಸ್ ಬಳಿ ಬರುವಾಗ ಕಾರಿನ ಟೈಯರ್‌ ಪಂಕ್ಚರ್ ಆಗಿತ್ತು. ಹೀಗಾಗಿ ರಸ್ತೆ ಬದಿ ಕಾರು ನಿಲ್ಲಿಸಿ ಮಧು ಟೈಯರ್ ಚೇಂಜ್ ಮಾಡುತ್ತಿದ್ದರು. ಈ ವೇಳೆ ಬೆಂಗಳೂರು ಕಡೆಯಿಂದ ವೇಗವಾಗಿ ಬಂದು ಲಾರಿಯು ಕಾರಿಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಮಧು ಸ್ಥಳದಲ್ಲೇ ಮೃತಪಟ್ಟಿದ್ದರು. ಇತ್ತ ತೀವ್ರವಾಗಿ ಗಾಯಗೊಂಡಿದ್ದ ಮಾವ ಜವರಯ್ಯ ಅವರನ್ನು ಸ್ಥಳೀಯರು ಚನ್ನರಾಯಪಟ್ಟಣ ಆಸ್ಪತ್ರೆಗೆ ಸೇರಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ಸಾಗಿಸುತ್ತಿದ್ದ ವೇಳೆ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ. ಮಧು ಪತ್ನಿ ಗೀತಾಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಅಪಘಾತ ಎಸಗಿದ ಲಾರಿ ನಿಲ್ಲಿಸದೆ ಚಾಲಕ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ. ಕುಟುಂಬದವರ ರೋಧನ ಮುಗಿಲು ಮುಟ್ಟಿದೆ.

ಪರಾರಿ ಆಗಿರುವ ಚಾಲಕನಿಗೆ ಹುಡುಕಾಟ ನಡೆಸಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ