October 5, 2024

ಮೂಡಿಗೆರೆ ಪಟ್ಟಣದ ಡಿಎಸ್‍ಬಿಜಿ ಸರ್ಕಾರಿ ಪ್ರಥಮದರ್ಜೆ  ಕಾಲೇಜಿನಲ್ಲಿ ಲೋಕಸಭೆ ಚುನಾವಣೆ ಸಂಬಂಧ ಪಿಆರ್‍ಒ ಮತ್ತು ಎಪಿಆರ್‍ಒಗಳಿಗೆ ಭಾನುವಾರ ಮಾಸ್ಟರ್ ಟ್ರೈನರ್‍ಗಳಿಂದ ಒಂದನೇ ಸುತ್ತಿನ ತರಬೇತಿ ಕಾರ್ಯಗಾರ ನಡೆಯಿತು.

ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿ ದಲ್ಜೀತ್ ಕುಮಾರ್ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಮಾತನಾಡಿ, ಚುನಾವಣೆ ಆಯೋಗದ ನಿರ್ದೇಶನದಂತೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವುದು ನಮ್ಮೆಲ್ಲರ ಕರ್ತವ್ಯ. ಚುನಾವಣೆ ಪ್ರಕ್ರಿಯೆಯಲ್ಲಿ ಪಿಆರ್‍ಒ ಮತ್ತು ಎಪಿಆರ್‍ಒ ಪಾತ್ರ ಪ್ರಮುಖವಾಗಿದೆ. ಹಾಗಾಗಿ ತರಬೇತಿ ಪ್ರಯೋಜನ ಪಡೆದು ಲೋಕಸಭೆ ಚುನಾವಣೆ ಯಶಸ್ವಿಯಾಗಿ ನಡೆಯಲು ಎಲ್ಲರೂ ಸಹಕರಿಸಬೇಕೆಂದು ಸಲಹೆ ನೀಡಿದರು.

ತರಬೇತಿಯಲ್ಲಿ ಮತಗಟ್ಟೆ ಹಾಗೂ ಮತದಾನ ಸಂದರ್ಭದಲ್ಲಿ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳಬೇಕು. ಮಸ್ಟರಿಂಗ್ ಮತ್ತು ಡಿಮಸ್ಟರಿಂಗ್ ಕೇಂದ್ರದಲ್ಲಿ ಸಾಮಗ್ರಿ ಪಡೆಯುವುದು, ಅಣುಕು ಮತದಾನ, ಮತದಾನ ಪ್ರಾರಂಭ, ಮತದಾನ ಮುಕ್ತಾಯಗೊಳಿಸುವ ಜವಾಬ್ದಾರಿ, ಮತದಾನದ ದಿದ ಎಲ್ಲಾ ಪ್ರಕ್ರಿಯೆಗಳ ಅಂಕಿ ಅಂಶಗಳನ್ನು ಚುಣಾಧಿಕಾರಿಗಳಿಗೆ ವರದಿ ನೀಡುವ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಸಂಶಯವಿದ್ದರೆ ತರಬೇತಿದಾರರಿಂದ ಮಾಹಿತಿ ಪಡೆದು ಗೊಂದಲ ನಿವಾರಿಸಿಕೊಳ್ಳಬೇಕೆಂದು ಮಾರ್ಗದರ್ಶನ ನೀಡಿದರು.

ಬಳಿಕ ತರಬೇತಿಗೆ ಬಂದಿರುವ ಎಲ್ಲಾ ಪಿಆರ್‍ಒ ಮತ್ತು ಎಪಿಆರ್‍ಒಗಳಿಗೆ ಯಾವುದೇ ಸಮಸ್ಯೆ ಬಾರದಂತೆ ಕುಡಿಯುವ ನೀರು, ಊಟ, ಶೌಚಾಲಯ ಸೇರಿದಂತೆ ವಿವಿಧ ಸೌಲಭ್ಯ ನಿರ್ವಹಿಸುವ ಬಗ್ಗೆ ಸಿಬ್ಬಂದಿಗೆ ಸೂಚಿಸಿದರು.

ಮೂಡಿಗೆರೆ ತಹಸೀಲ್ದಾರ್ ಶೈಲೇಶ್, ಎಸ್.ಪರಮಾನಂದ, ಕಳಸ ತಹಸೀಲ್ದಾರ್ ಬಸವರಾಜ್, ಬಿಇಒ ಹೇಮಂತಚಂದ್ರ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ